ETV Bharat / state

ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ವಾಲ್ಮೀಕಿ ಬಹುಕೋಟಿ ಹಗರಣ: ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ - Valmiki Corporation Scam - VALMIKI CORPORATION SCAM

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ ಶುಕ್ರವಾರವೂ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಆರೋಪ, ಪ್ರತ್ಯಾರೋಪಗಳು ನಡೆದು ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್, 10 ನಿಮಿಷಗಳ ಕಾಲ ಮುಂದೂಡಬೇಕಾಯಿತು.

KARNATAKA ASSEMBLY
ವಿಧಾನಸಭೆ ಕಲಾಪ (ETV Bharat)
author img

By ETV Bharat Karnataka Team

Published : Jul 19, 2024, 1:23 PM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರ ಉತ್ತರ ಸಮರ್ಪಕವಾಗಿಲ್ಲ ಎಂದು ವಿಧಾನಸಭೆಯಲ್ಲಿ ಇಂದೂ ಸಹ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿದ್ದಾರೆ.

ಇಂದು ಬೆಳಗ್ಗೆ 10.45ರ ಹೊತ್ತಿಗೆ ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷದ ಸದಸ್ಯರು ಸ್ಪೀಕರ್ ಮುಂದಿರುವ ಬಾವಿಗಿಳಿದು ಧರಣಿ ನಡೆಸಿ ಘೋಷಣೆ ಕೂಗಲಾರಂಭಿಸಿದರು. ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ವಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು 10 ನಿಮಿಷ ಮುಂದೂಡಿದರು.

ಇದಕ್ಕೂ ಮುನ್ನ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸುವಂತೆ ಮನವಿ ಮಾಡಿದರು.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಗದ್ದಲ ಏರ್ಪಟ್ಟಿತ್ತು.

ಪ್ರತಿಪಕ್ಷದ ನಾಯಕ ಆ‌ರ್.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮ್ಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ಜೆಡಿಎಸ್‌ನ ಸುರೇಶ್ ಬಾಬು ಮಾತನಾಡಿ, ಮುಖ್ಯಮಂತ್ರಿಯವರ ಉತ್ತರ ಸಮರ್ಪಕವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್, ಪ್ರತಿಪಕ್ಷದವರು ಧರಣಿ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಏಕೆ ಎದ್ದು ನಿಲ್ಲುತ್ತಿದ್ದೀರಿ?. ನಿಮ್ಮ ಸ್ಥಾನದಲ್ಲೇ ಕುಳಿತುಕೊಳ್ಳಿ. ಪ್ರತಿಪಕ್ಷದವರ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲರೂ ಒಟ್ಟಿಗೆ ಮಾತನಾಡಿದರೆ ಏನು ಕೇಳುವುದಿಲ್ಲ. ಒಬ್ಬೊಬ್ಬರಾಗಿ ಮಾತನಾಡಿದರೆ ಸರಿಯಾಗಿ ಕೇಳುತ್ತದೆ ಎಂದರು.

ಆಗ ಆ‌ರ್.ಅಶೋಕ್ ಮತ್ತೆ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ಹಗರಣವಾಗಿದೆ. ಹಣ ಲೂಟಿಯಾಗಿದೆ ಎಂದು ಆಡಳಿತ ಪಕ್ಷದವರು ನಮ್ಮನ್ನು ಬೆಂಬಲಿಸುತ್ತಿದ್ದಾರೆ. ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ, ಅನುದಾನಕ್ಕಾಗಿ ತಮ್ಮದೇ ಸರ್ಕಾರದ ಮುಖ್ಯಸ್ಥರ ವಿರುದ್ಧ ಪರೋಕ್ಷವಾಗಿ ಗಲಾಟೆ ಮಾಡುತ್ತಿದ್ದಾರೆ ಎಂದು ಕಾಲೆಳೆದರು.

ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಉಂಟು ಮಾಡಿದರೆ, ಆಡಳಿತ ಪಕ್ಷದ ಶಾಸಕರು ತಮ್ಮ ಸ್ಥಾನಗಳಲ್ಲೇ ಎದ್ದು ನಿಂತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು. ಇದರಿಂದ ಸದನ ಗದ್ದಲವಾಗಿ ನಿರ್ಮಾಣವಾಯಿತು. ಆಗ ಸ್ಪೀಕರ್ ಪದೇ ಪದೇ ಮಾಡಿದ ಮನವಿಗೆ ಯಾರು ಕಿವಿಗೊಡದಿದ್ದಾಗ ಕಲಾಪವನ್ನು ಹತ್ತು ನಿಮಿಷ ಮುಂದೂಡಿದರು.

ಇದನ್ನೂ ಓದಿ: ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು?: ಡಿ.ಕೆ.ಶಿವಕುಮಾರ್ - Valmiki Corporation Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.