ETV Bharat / state

ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಗಡುವು, ಸಿಎಂ ಮನೆ ಮುತ್ತಿಗೆ ಯತ್ನ - Valmiki corporation scam - VALMIKI CORPORATION SCAM

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು (ETV Bharat)
author img

By ETV Bharat Karnataka Team

Published : May 30, 2024, 4:51 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಜೂನ್ 6ರೊಳಗೆ ರಾಜೀನಾಮೆ ಬಿಜೆಪಿ ಗಡುವು ನೀಡಿದೆ. ಇನ್ನು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಎಸ್.ಟಿ ಮೋರ್ಚಾದಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಇಂದು ಯತ್ನಿಸಲಾಯಿತು. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು (ETV Bharat)

ನಗರದ ಕುಮಾರ ಪಾರ್ಕ್​ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಎಸ್.ಟಿ ಮೋರ್ಚಾ ಕಾರ್ಯಕರ್ತರು ತೆರಳಿದರು. ಸಚಿವ ಮತ್ತು ಸರ್ಕಾರರ ವಿರುದ್ಧ ಧಿಕ್ಕಾರ ಕೂಗಿದರು. ಕುಮಾರಪಾರ್ಕ್ ರಸ್ತೆಯ ಮೂಲಕ ಸಿಎಂ ನಿವಾಸದ ಕಡೆ ತೆರಳುತ್ತಿದ್ದಂತೆ ಅಶೋಕ ಹೋಟೆಲ್ ಬಳಿಯೇ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಸಿಎಂ ನಿವಾಸದ ಮುಂದೆ ಪ್ರತಿಭಟನೆ, ಧರಣಿ, ಮುತ್ತಿಗೆಗೆ ಅವಕಾಶ ನಿರಾಕರಿಸಿದರು. ಇದನ್ನು ಒಪ್ಪದ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯಕರ್ತರು ಸಿಎಂ ನಿವಾಸ ಮುತ್ತಿಗೆ ಯತ್ನಕ್ಕೆ ಮುಂದಾದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.

ಬಿಜೆಪಿ ಗಡುವು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತರ ಹಣ ನುಂಗಿದ ಕಾಂಗ್ರೆಸ್‌ ಎಂಬ ಬ್ಯಾನರ್‌ ಅಡಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ, ಹಣ ವರ್ಗಾಯಿಸಲು ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಪತ್ರದಲ್ಲಿ ತಿಳಿಸಿದ್ದಾರೆ. ಜಿ.ಪದ್ಮನಾಭ್‌, ಸುಜಾ ಮೊದಲಾದ ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿದ್ದಾರೆ. ಈ ಪತ್ರದಲ್ಲಿ ಹಗರಣದ ಸಂಪೂರ್ಣ ವಿವರ ದಾಖಲೆಯೊಂದಿಗೆ ತಿಳಿಸಿದ್ದಾರೆ. ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನನ್ನ ಪತಿ ಪ್ರಾಮಾಣಿಕರು, ಅವರ ಸಾವಿಗೆ ನ್ಯಾಯ ಸಿಗಬೇಕು: ಚಂದ್ರಶೇಖರನ್ ಪತ್ನಿ ಆಗ್ರಹ - Chandrashekharan suicide

ಕೊಲೆ ಪ್ರಕರಣ ದಾಖಲಿಸಿ: ಹಿಂದೆ ಕೆ.ಎಸ್‌.ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸರಣಿ ಪ್ರಶ್ನೆ ಕೇಳಿದ್ದರು. ಅಂದು ಸಂತೋಷ ಪಾಟೀಲ್ ಸತ್ತಾಗ ಅವರ ಕುಟುಂಬದ ಜೊತೆ ಮೋದಿ ಮಾತಾಡಿದ್ದರಾ ಎಂದು ಸುರ್ಜೆವಾಲ ಕೇಳಿದ್ದರು. ಹಾಗಾದರೆ ಇಂದು ಚಂದ್ರಶೇಖರನ್​ ಮನೆಯವರ ಜೊತೆ ರಾಹುಲ್ ಗಾಂಧಿ ಮಾತಾಡಿದ್ರಾ? ಅಂದು ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದರು. ಈಶ್ವರಪ್ಪಗೆ ಜೀವಾವಧಿ ಶಿಕ್ಷೆ ನೀಡಬೇಕು ಅಥವಾ ಮರಣದಂಡನೆ ನೀಡಬೇಕು ಎಂದು ಸಿದ್ದರಾಮಯ್ಯ ಅಸೆಂಬ್ಲಿಯಲ್ಲಿ ಹೇಳಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ ಎಂದು ಅಶೋಕ್ ಒತ್ತಾಯಿಸಿದರು.

20 ಕೋಟಿ ರೂ. ಹಣವನ್ನು ವಾಪಸ್‌ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡುತ್ತಿದೆ. ಹಾಗೆಯೇ ಅಧಿಕಾರಿಯ ಪ್ರಾಣವನ್ನೂ ಮರಳಿ ತರಲಿ. ಒಬ್ಬ ಅಧಿಕಾರಿಯ ಪ್ರಾಣಕ್ಕೆ ಈ ಸರ್ಕಾರ ಬೆಲೆ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್‌.ಅಶೋಕ್ ಕೇಳಿದ ಪ್ರಶ್ನೆಗಳು: ಆತ್ಮಹತ್ಯೆ ಪತ್ರದಲ್ಲಿ ಸಚಿವರ ಹೆಸರಿದೆ. ಆದರೂ ಎಫ್‌ಐಆರ್‌ನಲ್ಲಿ ಸಚಿವರ ಹೆಸರು ಏಕಿಲ್ಲ?, 187 ಕೋಟಿ ರೂ. ಗುಳುಂ ಮಾಡಿದ ಅಧಿಕಾರಿಗಳನ್ನು ಏಕೆ ಬಂಧಿಸಿಲ್ಲ?, ಸಿಐಡಿ ಎಂದರೆ ಕಾಂಗ್ರೆಸ್‌ ಇನ್‌ವೆಸ್ಟಿಗೇಶನ್‌ ಡಿಪಾರ್ಟ್‌ಮೆಂಟ್‌. ತನಿಖೆಯನ್ನು ಸಿಐಡಿಗೆ ಏಕೆ ಕೊಟ್ಟಿದ್ದೀರಿ?, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ನೀಡುತ್ತಾರೆ?, ಮೃತ ಅಧಿಕಾರಿಯ ಮನೆಯಲ್ಲಿದ್ದ ದಾಖಲೆಗಳನ್ನು ಏಕೆ ಬಹಿರಂಗಪಡಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಖಾತೆಗೆ ಟಕಾಟಕ್‌ ಎಂದು ಹಣ ಹಾಕುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ನಿಗಮದಿಂದ ಆಗಾಗ ಕೋಟ್ಯಂತರ ರೂಪಾಯಿ ಟಕಾಟಕ್‌ ಆಗಿ ಕಾಂಗ್ರೆಸ್‌ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ. 25 ಸಾವಿರ ಕೋಟಿ ರೂ. ದಲಿತರ ಹಣ ಟಕಾಟಕ್‌ ಎಂದು ಕಾಣೆಯಾಗಿದೆ. ಬಿತ್ತನೆ ಬೀಜಗಳ ದರ ಟಕಾಟಕ್‌ ಎಂದು ಏರಿಕೆಯಾಗಿದೆ. ಭಯೋತ್ಪಾದನೆ ಟಕಾಟಕ್‌ ಎಂದು ಮೇಲೆದ್ದಿದೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಸಚಿವ ನಾಗೇಂದ್ರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ - B Y VIJAYENDRA

ETV Bharat Logo

Copyright © 2025 Ushodaya Enterprises Pvt. Ltd., All Rights Reserved.