ETV Bharat / state

ವಾಲ್ಮೀಕಿ ನಿಗಮ ಹಗರಣದ ಹಣ ಮದ್ಯ ಖರೀದಿಗೆ ಬಳಕೆ: ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಇಡಿ - Valmiki Corporation Scam Case

ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಡಿ, ನಿಗಮದಿಂದ ವರ್ಗಾವಣೆಯಾದ ಹಣವನ್ನು ದುಬಾರಿ ಕಾರು ಮತ್ತು ಮದ್ಯ ಖರೀದಿಗೆ ಬಳಸಲಾಗಿದೆ ಎಂದು ತಿಳಿಸಿದೆ.

ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ (ETV Bharat)
author img

By ETV Bharat Karnataka Team

Published : Jul 17, 2024, 9:49 PM IST

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯ, ವಾಲ್ಮೀಕಿ ನಿಗಮದ ಖಾತೆಯಿಂದ ವರ್ಗಾವಣೆಯಾಗಿದ್ದ ಸುಮಾರು 89.65 ಕೋಟಿ ಹಣವನ್ನು ಮದ್ಯ ಹಾಗೂ ದುಬಾರಿ ಬೆಲೆಯ ಕಾರು ಖರೀದಿಗೆ ಬಳಸಲಾಗಿದೆ ಎಂದು‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ 89.65 ಕೋಟಿ ಅವ್ಯವಹಾರ ನಡೆದಿದೆ. ಈ ಸಂಬಂಧ ನಾಲ್ಕು ರಾಜ್ಯಗಳಲ್ಲಿ ಏಕಕಾಲದಲ್ಲಿ 23 ಕಡೆ ದಾಳಿ ಮಾಡಲಾಗಿದೆ.‌ ಒಟ್ಟು 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಂತರ ಈ ಹಣವೂ ಹಲವು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗವಾಗಿ ನಗದಾಗಿ ಪರಿವರ್ತಿಸಲಾಗಿದೆ. ಈ ಸಂಬಂಧ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿವೆ.‌

ಇದೇ ಆರೋಪದಡಿ ಮಾಜಿ ಸಚಿವ ನಾಗೇಂದ್ರ ಅವರನ್ನ ಬಂಧಿಸಲಾಗಿದೆ. ಹಗರಣದ ಹಣವನ್ನು ಚುನಾವಣೆ ಹಾಗೂ ಐಷಾರಾಮಿ ಕಾರು ಖರೀದಿ ಮಾಡಲು ಸಹ ಬಳಕೆ ಮಾಡಲಾಗಿದೆ. ಚುನಾವಣೆಯಲ್ಲಿ ನಿಗಮದ ಹಣವನ್ನ ಮದ್ಯ ಖರೀದಿ ಮಾಡಲು ಬಳಸಲಾಗಿದೆ ಎಂದು ಇ‌.ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇಡಿ ಅಧಿಕಾರಿಗಳ ವಶದಲ್ಲಿದ್ದ ಬಂಧಿತ ನಾಗೇಂದ್ರ ಪತ್ನಿ ಮಂಜುಳಾ ಅವರನ್ನ ವಶಕ್ಕೆ ಪಡೆದು ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಇಡಿ ವಶಕ್ಕೆ - Valmiki Corporation Scam Probe

ETV Bharat Logo

Copyright © 2024 Ushodaya Enterprises Pvt. Ltd., All Rights Reserved.