ETV Bharat / state

ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತೀರ್ಪು ಇಂದು - HIGH COURT

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ತೀರ್ಪು ಇಂದು ಮಧ್ಯಾಹ್ನ 2.30ಕ್ಕೆ ಹೊರಬೀಳಲಿದೆ.

HIGH COURT VERDICT
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Nov 12, 2024, 7:10 AM IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಆದೇಶ ಮಂಗಳವಾರ(ಇಂದು) ಹೊರಬೀಳಲಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ತೀರ್ಪು ಕಾಯ್ದಿರಿಸಿದ್ದು, ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ.

ಈ ಪ್ರಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಾದ ಎಂದು ಅದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸಬೇಕೇ? ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 35ಎ ಅಡಿ ಹೊರಡಿಸಿರುವ ಮಾಸ್ಟರ್ ಸುತ್ತೋಲೆಯ ಪ್ರಕಾರ ನಿರ್ದಿಷ್ಟ ಮೊತ್ತದ ಹಣಕಾಸು ಅವ್ಯವಹಾರವನ್ನು ಸಿಬಿಐ ತನಿಖೆ ನಡೆಸಬೇಕೇ ಎಂಬ ವಿಚಾರಗಳಿಗೆ ಉತ್ತರಿಸುವ ಮೂಲಕ ಅರ್ಜಿಯ ಊರ್ಜಿತತ್ವ ನಿರ್ಧರಿಸಲಾಗುವುದು ಎಂದು ನ್ಯಾಯಪೀಠ ಹೇಳಿತ್ತು.

ಇಡೀ ಬ್ಯಾಂಕಿಂಗ್ ವಲಯದ ಪ್ರಾಮಾಣಿಕತೆಯನ್ನು ಖಾತರಿಪಡಿಸಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಸಿಂಧುತ್ವದ ಬಗ್ಗೆ ಪ್ರಾಥಮಿಕ ಪ್ರಶ್ನೆ ಇದೆ. ಏಕೆಂದರೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ವ್ಯಾಜ್ಯವಾಗಿದೆ. ಈ ಅರ್ಜಿಯ ಮೂಲವೇ ಕೇಂದ್ರ ಸರ್ಕಾರ ಹೊರಡಿಸಿರುವ ಒಂದು ಸುತ್ತೋಲೆ, ಅಂತಹ ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರ ಮತ್ತು ಪೊಲೀಸರ ನಡುವಿನ ಅಧಿಕಾರದಲ್ಲಿ ಮಧ್ಯಪ್ರವೇಶ ಮಾಡಲು ಯತ್ನಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯ ಆರೋಪ: ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.