ETV Bharat / state

ಸದನದಲ್ಲಿ ವಾಲ್ಮೀಕಿ ನಿಗಮ ಹಗರಣದ ಗದ್ದಲ: ವಿಪಕ್ಷ, ಆಡಳಿತ ಪಕ್ಷದ ನಡುವೆ ವಾಕ್ಸಮರ - Assembly Session - ASSEMBLY SESSION

ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ಸದಸ್ಯ ಆಗ್ರಹಿಸಿದರು. ಈ ಸಂದರ್ಭ ಸದನದಲ್ಲಿ ಪ್ರತಿಪಕ್ಷ ಸದಸ್ಯರು ಹಾಗೂ ಆಡಳಿತ ಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ವಾಲ್ಮೀಕಿ ನಿಗಮ ಹಗರಣ
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ವಾಲ್ಮೀಕಿ ನಿಗಮ ಹಗರಣ (ETV Bharat)
author img

By ETV Bharat Karnataka Team

Published : Jul 15, 2024, 6:43 PM IST

ಬೆಂಗಳೂರು: ಭೋಜನ ವಿರಾಮದ ಬಳಿಕ ಪುನಾರಂಭವಾದ ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ವಿಚಾರ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಪ್ರತಿಪಕ್ಷ ನಾಯಕ ಆರ್.ಅಶೋಕ್, ವಾಲ್ಮೀಕಿ ಹಗರಣದಲ್ಲಿ ನೂರಾರು ಕೋಟಿ ಲೂಟಿಯಾಗಿದೆ. ಚರ್ಚೆಗೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಸದನದಲ್ಲಿ ಪ್ರತಿಪಕ್ಷ ಸದಸ್ಯರು ಹಾಗೂ ಆಡಳಿತ ಪಕ್ಷ ಸದಸ್ಯರಿಂದ ಗದ್ದಲ ಉಂಟಾಯಿತು.

ಈ ವೇಳೆ ಎದ್ದುನಿಂತ ಸಿಎಂ ಸಿದ್ದರಾಮಯ್ಯ, ನಾವು ಎಲ್ಲ ಚರ್ಚೆಗೆ ಸಿದ್ಧರಿದ್ದೇವೆ. ನಿಯಮಾವಳಿ ಪ್ರಕಾರ ಚರ್ಚೆ ಮಾಡಬೇಕು. ಎಲ್ಲ ಚರ್ಚೆಗೂ ನಮ್ಮ ಸರ್ಕಾರ ಉತ್ತರ ಕೊಡಲು ಸಿದ್ಧವಿದೆ. ಬಿಜೆಪಿಗೆ ಹಗರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇವರ ಕಾಲದಲ್ಲಿ ಅದೆಷ್ಟು ಲೂಟಿ ಹೊಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಸೇರಿ ಎಲ್ಲಾ ಹಗರಣಗಳ ವಿಚಾರವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಈ ಪ್ರಕರಣ ಸಂಬಂಧ ಕಾನೂನು ರೀತಿಯಲ್ಲಿ ಚರ್ಚೆಗೆ ಅವಕಾಶ ಇಲ್ಲ. ಏಕೆಂದರೆ ತನಿಖೆ ಇನ್ನೂ ಪೂರ್ಣವಾಗಿಲ್ಲ. ಆದರೂ ರಾಜ್ಯದ ಜನರಿಗೆ ಮಾಹಿತಿ ನೀಡುವ ಕಾರಣಕ್ಕೆ ಚರ್ಚೆಗೆ ನಾವು ಸಿದ್ಧ. ಆದರೆ ಪ್ರಶ್ನೋತ್ತರ ಅವಧಿ ಬಳಿಕ ಚರ್ಚೆ ಮಾಡೋಣ ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್, ಅಡ್ಜಸ್ಟ್‌ಮೆಂಟ್ ಬೇಕಿಲ್ಲ, ನಮ್ಮ ಪಕ್ಷವೂ ಸ್ವಚ್ಛ ಆಗಬೇಕು. ನಿಮ್ಮ ಪಕ್ಷವೂ ಸ್ವಚ್ಛ ಆಗಬೇಕು ಎಂದರು. ಯತ್ನಾಳ್​ಗೆ ಟಾಂಗ್ ಕೊಟ್ಟ ಸಿಎಂ, ನಿಮಗೆ ಸೀರಿಯಸ್ ನೆಸ್ ಇಲ್ಲ. ಯತ್ನಾಳ್, ಏನು ಮಾತಾಡ್ತೀರಿ, ಯಾವಾಗ ಯಾವ ನಿಲುವು ತಗೋತೀರಿ ಅಂತ ನಿಮಗೇ ಗೊತ್ತಿರಲ್ಲ. ನಿಮ್ಮ ಪಕ್ಷದಲ್ಲಿ ಸಿಎಂ ಆಗೋದಿಕ್ಕೆ ಎರಡೂವರೆ ಸಾವಿರ ಕೋಟಿ ಕೊಡಬೇಕು ಅಂದಿದ್ರಿ. ಆಮೇಲೆ ಅದರಿಂದ ಹಿಂದಕ್ಕೆ ಸರಿದಿರಿ ಎಂದು ಆಕ್ಷೇಪಿಸಿದರು.

ಯಾಕೆ ಆಗ ಸಿಬಿಐ ತನಿಖೆಗೆ ಕೊಡಿ ಅಂತ ಹೇಳಲಿಲ್ಲ. ಬಾಯಿಗೆ ಬಂದಂಗೆ ಸುಮ್ಮನೆ ಮಾತಾಡುತ್ತೀರಲ್ಲ ಅಂತ ಟಕ್ಕರ್ ಕೊಟ್ಟರು. ಆಗ ಯತ್ನಾಳ್ ನಿಮಗೆ ತಾಕತ್ ಇದ್ದರೆ ಸಿಬಿಐ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.‌

ತುರ್ತು ಪರಿಸ್ಥಿತಿ ಖಂಡಿಸಿ ನಿರ್ಣಯ ಕೈಗೊಳ್ಳಿ: ಇದಕ್ಕೂ ಮುಂಚೆ ಬಿಜೆಪಿ ಸದಸ್ಯ ಸುನಿಲ್ ಕುಮಾರ್, ತುರ್ತು ಪರಿಸ್ಥಿತಿ ಖಂಡಿಸಿ ನಿರ್ಣಯ ಮಂಡನೆ ಮಾಡಬೇಕು. ತುರ್ತು ಪರಿಸ್ಥಿತಿಗೆ 50 ವರ್ಷ ಆಗಿದೆ. ಲೋಕಸಭೆಯಲ್ಲಿ ತುರ್ತುಪರಿಸ್ಥಿತಿ ಖಂಡಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ರಾಜ್ಯದಲ್ಲೂ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮುಡಾ ಪ್ರಕರಣವನ್ನ ಸಿಬಿಐಗೆ ಕೊಡಿ ಅಂತಾ ಕೇಳುವ ತಾಕತ್ತು ಹೆಚ್​​ಡಿಕೆಗೆ ಇದೆಯಾ?: ಶಾಸಕ‌‌ ಪ್ರದೀಪ್ ಈಶ್ವರ್ ಪ್ರಶ್ನೆ - MUDA SITE SCAM

ETV Bharat Logo

Copyright © 2025 Ushodaya Enterprises Pvt. Ltd., All Rights Reserved.