ETV Bharat / state

ವಾಲ್ಮೀಕಿ ನಿಗಮ ಹಗರಣ: ಸಿಎಂ ರಾಜೀನಾಮೆಗೆ ಪ್ರತಿಪಕ್ಷ ನಾಯಕರ ಆಗ್ರಹ, ಉಭಯ ಸದಸ್ಯರ ನಡುವೆ ವಾಗ್ವಾದ - Valmiki Corporation Scam - VALMIKI CORPORATION SCAM

ವಿಧಾನಸಭೆ ಅಧಿವೇಶನದಲ್ಲಿ ವಾಲ್ಮೀಕಿ ನಿಗಮ ಹಗರಣ ಪ್ರತಿಧ್ವನಿಸಿತು. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು. ಈ ವೇಳೆ ಆಡಳಿತ - ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು.

LEADER OF OPPOSITION  CM SIDDARAMAIAH RESIGNATION  MONSOON SESSION  BENGALURU
ವಾಲ್ಮೀಕಿ ನಿಗಮ ಹಗರಣ (ETV Bharat)
author img

By ETV Bharat Karnataka Team

Published : Jul 16, 2024, 5:05 PM IST

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿದ ಪ್ರತಿಪಕ್ಷದ ಪಕ್ಷದ ನಾಯಕ ಆರ್. ಅಶೋಕ್ ಅವರು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭೆಯಲ್ಲಿ ಆಗ್ರಹಿಸಿದ್ದರು.

ನಿಯಮ 69ರಡಿ ಚರ್ಚೆ ನಡೆಸಿದ ಅವರು, ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ದುರುಪಯೋಗ ಆಗಿರುವುದರ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು. ಈ ಆರೋಪದಲ್ಲಿ ಕಾನೂನು ವಿಚಾರ ಏನೇ ಇದ್ದರೂ ದಲಿತರ ಹಣ ದುರ್ಬಳಕೆಯಾಗಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಆಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಸ್ವಾಗತಿಸಿದರು.

ಈ ಹಣ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗವಾಗಿರುವುದರ ಹೊಣೆಯನ್ನು ಯಾರೂ ಹೊತ್ತುಕೊಳ್ಳಲು ಸಿದ್ಧರಿಲ್ಲ. ಸಮಾಜಕಲ್ಯಾಣ ಇಲಾಖೆ ನಮಗೆ ಸಂಬಂಧಿಸಿದಲ್ಲ ಎಂದು ಹೇಳಿದೆ. ಹಣಕಾಸು ಇಲಾಖೆ ನಾವು ಹಣ ಕೊಟ್ಟಿದ್ದೇವೆ. ನಮಗೇನೂ ಗೊತ್ತಿಲ್ಲ ಎಂದಿದೆ. ಮುಖ್ಯಮಂತ್ರಿಯವರು ಹಣ ಕೊಟ್ಟಿದ್ದೇವೆ, ನಮಗೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹೀಗೆ ಒಬ್ಬರ ಮೇಲೆ ಮತ್ತೊಬ್ಬರು ವರ್ಗಾಯಿಸುತ್ತಿದ್ದಾರೆ. ಯಾರೂ ಅದರ ಹೊಣೆ ಹೊರುತ್ತಿಲ್ಲ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ?.. ಸರ್ಕಾರ ಈ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಹೀಗಾಗಿ ಹಣ ಮಂಜೂರಾಗುವುದು, ಹಣ ಖರ್ಚಾಗುವುದು ಎಲ್ಲದರ ಮಾಹಿತಿ ಇರುತ್ತದೆ. ಇಲ್ಲದಿದ್ದರೆ ಕೇಳಬೇಕಲ್ಲವೇ?. ಆ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯೂ ಮಾತನಾಡಲಿಲ್ಲ ಎಂದು ಟೀಕಿಸಿದರು. ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಶಾಸಕರು, ದಲಿತರ ಮತದಾನದಿಂದ ಗೆದ್ದಿದ್ದೇವೆ. ದಲಿತರ ಹಣವನ್ನೇ ಹೊಡೆಯಬೇಕಿತ್ತೇ?. ಯಾವ ಮುಖವಿಟ್ಟುಕೊಂಡು ಮತ ಕೇಳೋಣ. ಲಿಂಗಾಯತರ, ಒಕ್ಕಲಿಗರ, ಬ್ರಾಹ್ಮಣರ ನಿಗಮದ ಹಣ ಹೊಡೆಯಬಾರದಿತ್ತೇ?. ಅವರು ಶ್ರೀಮಂತರು. ದಲಿತರ ಹಣ ಲೂಟಿಯಾಗಿದೆ ಎಂದು ಮಾತನಾಡಿಕೊಂಡಿದ್ದಾರೆ ಎಂದರು.

ಫಲಾನುಭವಿಗಳಿಗೆ ಸಿಗಬೇಕಾದ ಹಣ ತೆಲಂಗಾಣಕ್ಕೆ ಹೋಗಿದೆ. ಯಾರನ್ನು ಗುರಿ ಮಾಡುತ್ತೀರ?. ಯಾರು ರಾಜೀನಾಮೆ ಕೊಡುತ್ತಾರೆ?. 224 ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ ದುರ್ಬಳಕೆಯಾಗಿದೆ. ದಲಿತರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಶೋಷಿತ ಸಮುದಾಯದ ಹಣ ಲೂಟಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಅವರಿಗೆ ಹಾಗೂ ಸಚಿವರಿಗೆ ವಿನಂತಿ ಮಾಡುತ್ತೇನೆ. ಎಸ್​ಟಿ ಜನಾಂಗದವರ ಮನೆಯಲ್ಲಿ ಒಂದು ದಿನ ವಾಸ್ತವ್ಯ ಮಾಡಿ, ಅವರ ಕಷ್ಟ, ಗೋಳು ನಿಮಗೆ ಗೊತ್ತಾಗುತ್ತದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಕುಟುಂಬ ಬೀದಿಗೆ ಬಂದಿದೆ. ಸಚಿವರಾದ ಮಧು ಬಂಗಾರಪ್ಪ ಹಾಗೂ ಪರಮೇಶ್ವರ್ ಅವರು ಸಾಂತ್ವನ ಹೇಳಿದ್ದಾರೆ. ಮತ್ತ್ಯಾರೂ ಬಂದಿಲ್ಲ ಎಂದು ಚಂದ್ರಶೇಖರ್ ಕುಟುಂಬದವರು ಹೇಳಿದ್ದಾರೆ. ಜೀವ ಒತ್ತೆಯಿಟ್ಟಾದರೂ ನ್ಯಾಯ ಪಡೆಯುವುದಾಗಿ ಚಂದ್ರಶೇಖರ್ ಅವರ ಪತ್ನಿ ಹೇಳಿದ್ದಾರೆ. ಅನ್ಯಾಯವಾಗಿ ಅಮಾಯಕರ ಸಾವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಒಂದು ವೇಳೆ ಚಂದ್ರಶೇಖರ್ ಆತ್ಮಹತ್ಯೆ ನಡೆಯದಿದ್ದರೆ ಗೋವಾದಲ್ಲಿ 187 ಕೋಟಿ ರೂ.ಗೂ ಬಿಲ್​ ತಯಾರಿಸುತ್ತಿದ್ದರು. ವಾಲ್ಮೀಕಿ ಜನಾಂಗದ ಶಾಪ ನಿಮಗೆ ತಟ್ಟಬಾರದು ಎಂದಿದ್ದರೆ ಕೂಡಲೇ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿ. ಅಕ್ರಮ ಹಣ ವರ್ಗಾವಣೆ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ : ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿದ್ದಂತೆಯೇ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಂತೆ ಕಾಂಗ್ರೆಸ್ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಬೋವಿ ನಿಗಮ, ಬಂಜಾರ ನಿಗಮದಲ್ಲಿ ಅವ್ಯವಹಾರವಾಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್​ನಲ್ಲೂ ಅವ್ಯವಹಾರವಾಗಿದೆ ಎಂದು ಆರೋಪಿಸಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಮಾತನಾಡಿದ್ದಾರೆ. ಅವರಿಗೆ ಶೋಭೆ ತರುವುದಿಲ್ಲ ಎಂದು ಛೇಡಿಸಿದರು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮಧ್ಯಪ್ರವೇಶಿಸಿ, ದಲಿತರ ಉದ್ಧಾರಕ್ಕೆ ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ನು ನಾವು ತಂದಿದ್ದೇವೆ ಎಂದರು. ಈ ಹಂತದಲ್ಲಿ ಆಡಳಿತ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಒಂದು ಹಂತದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ದೇವರಾಜ ಅರಸು ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಿ ಎಂದು ತಿರುಗೇಟು ನೀಡಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ದೇವರಾಜು ಅರಸು ಟ್ರಕ್ ಟರ್ಮಿನಲ್, ತಾಂಡಾ ಅಭಿವೃದ್ಧಿ ನಿಗಮದಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ., ಐಟಿ ಅಧಿಕಾರಿಗಳನ್ನು ಕಳುಹಿಸಿ ಎಂದು ಒತ್ತಾಯಿಸಿದರು. ಇದೇ ರೀತಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆಡಳಿತ ಮತ್ತು ಪ್ರತಿಪಕ್ಷ ಶಾಸಕರನ್ನು ಸಮಾಧಾನಪಡಿಸಿ ಮುಖ್ಯಮಂತ್ರಿಯವರು ಹೇಳಿಕೆ ನೀಡಲು ಅನುವು ಮಾಡಿಕೊಟ್ಟರು.

ಓದಿ: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಅಭಿನಂದನೆ ಸಲ್ಲಿಸಿದ ವಿಧಾನ ಪರಿಷತ್: ರಾಜ್ಯ ಸರ್ಕಾರದಿಂದ ಸನ್ಮಾನಕ್ಕೆ ಮನವಿ..! - T20 World Cup

ETV Bharat Logo

Copyright © 2025 Ushodaya Enterprises Pvt. Ltd., All Rights Reserved.