ETV Bharat / state

ವಾಲ್ಮೀಕಿ ನಿಗಮ ಅಕ್ರಮ: ಸಿಬಿಐ ತನಿಖೆ ನಡೆಸುವಂತೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ - Yatnal letter to Amit Shah - YATNAL LETTER TO AMIT SHAH

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದ್ದಾರೆ.

MLA Basana gowada Patil Yatnal
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ (ETV Bharat)
author img

By ETV Bharat Karnataka Team

Published : Jun 1, 2024, 12:40 PM IST

ಬೆಂಗಳೂರು: ವಾಲ್ಮೀಕಿ‌ ನಿಗಮದ ಅಕ್ರಮ‌ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ "ಕಾಂಗ್ರೆಸ್ ಅಧಿಕಾರದಲ್ಲಿ ಭ್ರಷ್ಟಾಚಾರ ನಡೆಸಲು ಸಹಕಾರ ಕೊಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತದೆ. ಇದರಿಂದ ಅನೇಕ ದಕ್ಷ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 2019ರಲ್ಲಿ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ಬೆಂಗಳೂರು ವಿವಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಜುಲೈ 2016ರಲ್ಲಿ ಕೆ.ಜೆ. ಜಾರ್ಜ್ ಹೆಸರು ಹೇಳಿ ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಮೇ ತಿಂಗಳಲ್ಲಿ ಕೆಆರ್​ಐಡಿಎಲ್ ಗುತ್ತಿಗೆದಾರ ಪಿ.ಎಸ್. ಗೌಡರ್ ಅಧಿಕಾರಿಗಳನ್ನು ದೂರಿ ದಾವಣಗೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಈಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಿಗಮದ‌ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಉಲ್ಲೇಖಿಸಿದ್ದಾರೆ.

"ಬ್ಯಾಂಕ್, ನಿಗಮದ 88.62 ಕೋಟಿ ನಗದು ವರ್ಗಾವಣೆ ವಹಿವಾಟನ್ನು ಅಕ್ರಮ ಎಂದು ಘೋಷಿಸಿದೆ. ಈ ಸಂಬಂಧ ಬ್ಯಾಂಕ್ ಸಿಬಿಐಗೆ ದೂರು ನೀಡಿದೆ. ಜೊತೆಗೆ ಬ್ಯಾಂಕ್ ತನ್ನ ಮೂರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಪ್ರಕರಣದ ಗಭೀರತೆಯನ್ನು ಪರಿಗಣಿಸಿ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸುವ ಅಗತ್ಯ ಇದೆ. ಬ್ಯಾಂಕ್ ನೀಡಿದ ದೂರಿ‌ನ ಆಧಾರದ ಮೇಲೆ ಸಿಬಿಐ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಅವ್ಯವಹಾರ ಹಗರಣ: ವಾಲ್ಮೀಕಿ ಅಭಿವೃದ್ಧಿ ನಿಗಮದ ಇಬ್ಬರು ಮಾಜಿ ಅಧಿಕಾರಿಗಳ ಬಂಧನ - Valmiki Corporation Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.