ETV Bharat / state

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆಗೆ ಮಾನಸಿಕ ಒತ್ತಡ ಕಾರಣ: ಚಾರ್ಜ್​ಶೀಟ್​ ಸಲ್ಲಿಸಿದ ಎಸ್ಐಟಿ - Valmiki Corporation Scam - VALMIKI CORPORATION SCAM

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಎಸ್​ಐಟಿ ಸಲ್ಲಿಸಿದೆ.

ಶಿವಮೊಗ್ಗ ಕೋರ್ಟ್
ಶಿವಮೊಗ್ಗ ಕೋರ್ಟ್ (ETV Bharat)
author img

By ETV Bharat Karnataka Team

Published : Aug 22, 2024, 3:38 PM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಇಂದು ಶಿವಮೊಗ್ಗದ ಸೆಷನ್ಸ್ ಕೋರ್ಟ್​ಗೆ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ-SIT: ಸುಮಾರು 300 ಪುಟಗಳ ಚಾರ್ಜ್ ಶೀಟ್​​ನಲ್ಲಿ 25 ಮಂದಿ ಸಾಕ್ಷ್ಯಾಧಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಎಂದು ಎಸ್ಐಟಿ ಉಲ್ಲೇಖಿಸಿರುವುದು ಗಮನಾರ್ಹ.

ಚಂದ್ರಶೇಖರ್ ಆತ್ಮಹತ್ಯೆ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿತ್ತು.

ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿವಾಸದಲ್ಲಿ ಮೇ 26ರಂದು ಚಂದ್ರಶೇಖರನ್, ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್​​ನಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್ ದುರುಗಣ್ಣನವರ್ ಸೇರಿದಂತೆ ಹಲವರ ಹೆಸರು ಉಲ್ಲೇಖಿಸಿದ್ದರು.

ಪ್ರಕರಣದ ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಪ್ರಾಥಮಿಕ ಹಂತದ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಪೂರ್ಣ ತನಿಖೆ ನಡೆಸಿ ಅಂತಿಮವಾಗಿ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಗಮದ ಅವ್ಯವಹಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್​ಗೆ ಅರ್ಜಿ - MUDA Valmiki Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.