ETV Bharat / state

ವಾಲ್ಮೀಕಿ ನಿಗಮ ಅಕ್ರಮ: ಮಾಜಿ ಸಚಿವ ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ.. ಮೂವರು ವಶಕ್ಕೆ - Valmiki Nigam Scam

author img

By ETV Bharat Karnataka Team

Published : Jul 10, 2024, 9:22 AM IST

Updated : Jul 10, 2024, 3:27 PM IST

ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ, ಇಂದು ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆಸಿದೆ.

Valmiki Nigam Scam: ED raid on Ex-minister B Nagendra and President Basavanagowda Daddal house
ಮಾಜಿ ಸಚಿವ ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಡಿ ದಾಳಿ (ETV Bharat)

ರಾಯಚೂರು/ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಗಳ ಮೇಲೆ ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿದರು.

ಬೆಂಗಳೂರು, ಬಳ್ಳಾರಿ ಹಾಗೂ ರಾಯಚೂರಿನಲ್ಲಿರುವ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಜೊತೆಗೆ ವಸಂತನಗರದಲ್ಲಿ ವಾಲ್ಮೀಕಿ ನಿಗಮದ ಕಚೇರಿ, ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಕಚೇರಿ ಹಾಗೂ‌ ಪ್ರಕರಣದ ಕೆಲ ಆರೋಪಿಗಳ ಮನೆ ಸೇರಿದಂತೆ 15ಕ್ಕಿಂತ ಹೆಚ್ಚು ಕಡೆಗಳಲ್ಲಿ‌ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಮೂವರು ವಶಕ್ಕೆ: ಬಳ್ಳಾರಿಯಲ್ಲಿ ಬಿ.ನಾಗೇಂದ್ರ ಅವರ ಇಬ್ಬರು ಆಪ್ತ ಸಹಾಯಕರಾಗಿದ್ದ ವಿಜಯಕುಮಾರ್ ಮತ್ತು ಚೇತನ್ ಎಂಬವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಜಾನೆ, ಸಿಆರ್​ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇಡಿ ಅಧಿಕಾರಿಗಳು, ನೆಹರು ಕಾಲೊನಿಯಲ್ಲಿರುವ ನಾಗೇಂದ್ರ ಮನೆ ಮೇಲೆ ದಾಳಿ ಮಾಡಿದರು. ಸಚಿವರ ಪಿಎ ಹರೀಶ್​​ ಎಂಬುವರನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ.

ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್​ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬೆಂಗಳೂರಿನ ಮನೆಯಲ್ಲೂ ಶೋಧ: ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕಿ ಉತ್ಸವ್​ ಅಪಾರ್ಟ್ಮೆಂಟ್​ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ: ಬಸವನಗೌಡ ದದ್ದಲ್ - Basavanagowda Daddal

Last Updated : Jul 10, 2024, 3:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.