ETV Bharat / state

ಶಿವಮೊಗ್ಗ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ - Suicide - SUICIDE

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ₹85 ಕೋಟಿ ಅವ್ಯವಹಾರ ನಡೆದಿದೆ ಎಂದು ಡೆತ್‌ನೋಟ್​ ಬರೆದಿಟ್ಟು ನಿಗಮದ ಅಧೀಕ್ಷಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

Officer committed suicide  Shivamogga  SN Channabasappa
ಶಾಸಕ ಎಸ್.ಎನ್. ಚನ್ನಬಸಪ್ಪ (ETV Bharat)
author img

By ETV Bharat Karnataka Team

Published : May 28, 2024, 12:12 PM IST

ಶಾಸಕ ಎಸ್.ಎನ್. ಚನ್ನಬಸಪ್ಪ ಪ್ರತಿಕ್ರಿಯೆ (ETV Bharat)

ಶಿವಮೊಗ್ಗ: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್.ಪಿ (52) ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಂದ್ರಶೇಖರನ್ ವಾಲ್ಮೀಕಿ ನಿಗಮದಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದರು. ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಿಗಮದ ಅಧಿಕಾರಿಗಳ ವಿರುದ್ಧ 5 ಪುಟಗಳ ಡೆತ್ ​ನೋಟ್ ಬರೆದಿಟ್ಟಿದ್ದಾರೆ.

85 ಕೋಟಿ ರೂಪಾಯಿ ಅವ್ಯವಹಾರ ಆರೋಪ: ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಿದ್ದು, ತಾವು ಯಾವುದೇ ರೀತಿಯಲ್ಲಿ ನಿಗಮಕ್ಕೆ ಮೋಸ ಮಾಡಿಲ್ಲ, ಅವ್ಯವಹಾರದಲ್ಲಿ ಭಾಗಿಯಾಗಿಲ್ಲ. ವಂಚನೆಯನ್ನೂ ಮಾಡಿಲ್ಲ ಎಂದು ಬರೆದಿದ್ದಾರೆ. ಈ ಕುರಿತು ಅವರ ಪತ್ನಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶಾಸಕ ಎಸ್.ಎನ್.ಚನ್ನಬಸಪ್ಪ ಪ್ರತಿಕ್ರಿಯೆ: ಚಂದ್ರಶೇಖರನ್ ಆತ್ಮಹತ್ಯೆಯ ಕುರಿತು ಶಿವಮೊಗ್ಗ ನಗರ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಪ್ರತಿಕ್ರಿಯಿಸಿ, ''ನಿಗಮದ ಅವ್ಯವಹಾರಕ್ಕೆ ಚಂದ್ರಶೇಖರನ್ ಬಲಿಯಾಗಿದ್ದಾರೆ. ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ, ತನಿಖೆ ನಡೆಸಬೇಕು. ಈ ನಿಗಮವು ಸಚಿವ ನಾಗೇಂದ್ರ ಅವರ ಇಲಾಖೆಗೆ ಒಳಪಡುತ್ತದೆ. ಇದರಿಂದ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಅಣಬೆ ಸಾಂಬಾರು ಸೇವಿಸಿ ಐವರು ಮಕ್ಕಳು ಅಸ್ವಸ್ಥ - Children Fall Sick

ETV Bharat Logo

Copyright © 2024 Ushodaya Enterprises Pvt. Ltd., All Rights Reserved.