ETV Bharat / state

ವರುಣ ಮಿತ್ರ ತರಬೇತಿ: ಅರ್ಜಿ ಸಲ್ಲಿಕೆಗೆ ಸೆ.17 ಕೊನೆಯ ದಿನ - Varun Mitra Training Programme - VARUN MITRA TRAINING PROGRAMME

ಮಳೆ ನೀರು ಕೊಯ್ಲು ಪದ್ಧತಿಯನ್ನು ವೈಜ್ಞಾನಿಕವಾಗಿ ಅಳವಡಿಸುವ ಬಗ್ಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯುವಕರು ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಬಹುದಾಗಿದೆ.

ಬೆಂಗಳೂರು ಜಲಮಂಡಳಿ
ಬೆಂಗಳೂರು ಜಲಮಂಡಳಿ (ETV Bharat)
author img

By ETV Bharat Karnataka Team

Published : Sep 15, 2024, 7:59 AM IST

ಬೆಂಗಳೂರು: ಮಳೆ ನೀರು ಇಂಗು ಗುಂಡಿಗಳನ್ನು ವೈಜ್ಞಾನಿಕವಾಗಿ ಅಳವಡಿಸುವ ಕುಶಲ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ನಿರುದ್ಯೋಗಿ ಯುವ ಜನರು ಸ್ವಂತ ಉದ್ಯೋಗ ಪ್ರಾರಂಭಿಸಲು ಅನುವು ಮಾಡುವ ನಿಟ್ಟಿನಲ್ಲಿ ಯೋಜಿಸಲಾಗಿರುವ ವರುಣ ಮಿತ್ರ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ನಿರ್ದೇಶನದ ಮೇರೆಗೆ ಪ್ರಾರಂಭಿಸಲಾಗಿರುವ ಈ ತರಬೇತಿ ಕಾರ್ಯಕ್ರಮವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದಿದ್ದಾರೆ.

ಕೇವಲ 1200 ಚದರ ಅಡಿ ವ್ಯಾಸದ ಕಟ್ಟಡದಿಂದ ಪ್ರತಿವರ್ಷ ಸುಮಾರು 1 ಲಕ್ಷ ಲೀಟರ್‌ನಷ್ಟು ನೀರನ್ನು ಸಂಗ್ರಹಿಸಬಹುದಾಗಿದೆ. ಈ ನೀರನ್ನು ಒಂದು ಕುಟುಂಬ ಸುಮಾರು 7 ತಿಂಗಳುಗಳ ಕಾಲ ಬಳಸಬಹುದಾಗಿದೆ. ನಗರದ ಬಹುಪಾಲು ಜನರು ಅಂತರ್ಜಲದ ಮೇಲೆ ಅವಲಂಬಿತರಾಗಿದ್ದು, ಸಮರ್ಪಕವಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡಲ್ಲಿ ಬಿರು ಬೇಸಿಗೆಯಲ್ಲೂ ನೀರಿನ ಕೊರತೆ ಆಗದಂತೆ ನಿಭಾಯಿಸಬಹುದಾಗಿದೆ. ಬೆಂಗಳೂರು ಜಲಮಂಡಳಿಯ ವತಿಯಿಂದ ಕೈಗೊಳ್ಳಲಾಗಿರುವ ಜನ ಜಾಗೃತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಮಳೆ ನೀರು ಕೊಯ್ಲು ಪದ್ಧತಿಯನ್ನು ವೈಜ್ಞಾನಿಕವಾಗಿ ಅಳವಡಿಸುವ ಕುಶಲ ಕರ್ಮಿಗಳ ಕೊರತೆಯಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. 10 ದಿನಗಳ ಕಾಲ ನಡೆಯಲಿರುವ ಈ ತರಬೇತಿ ಕಾರ್ಯಕ್ರಮದಲ್ಲಿ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ತರಬೇತಿ ಕಾರ್ಯಕ್ರಮಕ್ಕೆ ಬೆಂಗಳೂರು ಜಲಮಂಡಳಿ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್‌ 17 ಕೊನೆಯ ದಿನವಾಗಿದೆ. ಸ್ವಂತ ಉದ್ಯಮ ಪ್ರಾರಂಭಿಸಲು ಉದ್ದೇಶಿಸಿರುವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಬೆಂಗಳೂರು ನಗರದಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸುವ ವ್ಯಾಪಕ ಅವಕಾಶಗಳಿವೆ. ತರಬೇತಿ ಹಾಗೂ ಕೌಶಲ್ಯ ಪಡೆದ ನಂತರ ಸ್ವಂತವಾಗಿ ಉದ್ಯೋಗ ಪ್ರಾರಂಭಿಸಬಹುದಾಗಿದೆ. ಈ ಯೋಜನೆಯ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ರಾಮ್‌ ಪ್ರಸಾತ್‌ ಮನೋಹರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.