ETV Bharat / state

ರೇಣುಕಾಸ್ವಾಮಿ ಹತ್ಯೆ ಪ್ರಕರಣ, ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ರಾಜ್ಯಾದ್ಯಂತ ಹೋರಾಟ: ವೀರಶೈವ ಮಹಾಸಭಾ - Veerashaiva Mahasabha

author img

By ETV Bharat Karnataka Team

Published : Jun 12, 2024, 11:00 PM IST

ರೇಣುಕಾಸ್ವಾಮಿ ಹತ್ಯೆಗೈದ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಎಚ್ಚರಿಕೆ ನೀಡಿದೆ.

renuka-swamy
ರೇಣುಕಾಸ್ವಾಮಿ (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೈದವರಿಗೆ ಮತ್ತು ಸಹಕರಿಸಿದವರಿಗೆ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಒಂದು ವೇಳೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಎಚ್ಚರಿಕೆ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಹಾಸಭಾ, ಚಿತ್ರದುರ್ಗದ ರೇಣುಕಾಸ್ವಾಮಿಯವರ ಹತ್ಯೆಯನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯವೆಸಗಿರುವವರಿಗೂ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಎಲ್ಲ ವ್ಯಕ್ತಿಗಳಿಗೂ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಮಹಾಸಭೆಯು ಸರ್ಕಾರವನ್ನು ಒತ್ತಾಯಿಸುತ್ತದೆ.

ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೇ, ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ, ಸರ್ಕಾರವು ಶ್ರೀಸಾಮಾನ್ಯನ ಜೊತೆಗೆ ನಿಲ್ಲುತ್ತದೆ ಎಂಬುದನ್ನು ಈ ಘಟನೆಯಲ್ಲಿ ತೋರಿಸಬೇಕಾಗಿದೆ. ಸರ್ಕಾರವು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ಮಹಾಸಭೆಯು ತೀರ್ಮಾನಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಘಟನೆಯಿಂದ ಸರ್ಕಾರ ಪ್ರಭಾವಿ ವ್ಯಕ್ತಿಗಳ ಪರನಿಲ್ಲದೇ, ಮೃತನ ಕುಟುಂಬದ ಜೊತೆ ನಿಲ್ಲುವುದು ಆದ್ಯ ಕರ್ತವ್ಯವಾಗಿದೆ. ಆ ಕುಟುಂಬಕ್ಕೆ ಅಗತ್ಯ ನೆರವನ್ನು ನೀಡುವಂತೆ ಸರ್ಕಾರವನ್ನು ಮಹಾಸಭೆಯು ಒತ್ತಾಯಿಸುತ್ತದೆ‌. ಮಹಾಸಭೆಯು ರೇಣುಕಾಸ್ವಾಮಿಯವರ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬಕ್ಕೆ ನ್ಯಾಯದೊರಕಿಸಿಕೊಡಲು ಸದಾ ಸಿದ್ಧವಾಗಿರುತ್ತದೆ ಎಂದು ಭರವಸೆ ನೀಡಿದೆ.

ಇದನ್ನೂ ಓದಿ : ಬೆಂಗಳೂರು: ರೇಣುಕಾಸ್ವಾಮಿ ಶವ ಎಸೆದಿದ್ದ ಜಾಗ ತೋರಿಸಿದ ಆರೋಪಿಗಳು - Renukaswamy Murder case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.