ETV Bharat / state

ಬೆಳಗಾವಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ವೀರೇಶ್ವರ ಸ್ವಾಮೀಜಿ - Veereshwar Swamiji - VEERESHWAR SWAMIJI

ಈ ಬಾರಿ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ವೀರೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ವೀರೇಶ್ವರ ಸ್ವಾಮೀಜಿ
ವೀರೇಶ್ವರ ಸ್ವಾಮೀಜಿ
author img

By ETV Bharat Karnataka Team

Published : Apr 2, 2024, 10:16 PM IST

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ವೀರೇಶ್ವರ ಸ್ವಾಮೀಜಿ

ಬೆಳಗಾವಿ: ಲೋಕಸಭಾ ಚುನಾವಣೆ ರಣಕಣ ಜೋರಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಬೀಡುಬಿಟ್ಟಿದ್ದು, ಭರ್ಜರಿ ಮತಬೇಟೆ ಆರಂಭಿಸಿದ್ದಾರೆ. ಆದರೆ ಬೆಳಗಾವಿ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಸ್ವಾಮೀಜಿಯೊಬ್ಬರು ಸ್ಪರ್ಧಿಸುತ್ತೇವೆ ಅಂತಾ ಹೇಳಿರೋದು ನಡುಕ ಹುಟ್ಟಿಸಿದೆ.

ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್​ ಜೋಶಿ ವಿರುದ್ಧ ಬಹಿರಂಗವಾಗಿ ತೊಡೆತಟ್ಟಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದರಿಂದಾಗಿ ಲಿಂಗಾಯತ ಮತಗಳ ವಿಭಜನೆ ಆಗುವ ಆತಂಕದಲ್ಲಿ ಬಿಜೆಪಿ ಇದ್ದರೆ, ಇತ್ತ ಬೆಳಗಾವಿಯಲ್ಲೂ ಸ್ವಾಮೀಜಿಯೊಬ್ಬರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಆದರೆ, ಸ್ವಾಮೀಜಿ ನಿಖರವಾಗಿ ಯಾರ ವಿರುದ್ಧ ಸ್ಪರ್ಧಿಸುತ್ತಿದ್ದೇನೆ ಅಂತಾ ಹೆಸರು ಹೇಳದೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಘೋಷಣೆ ಮಾಡಿದ್ದು, ಹಲವು ಅಚ್ಚರಿಗೆ ಕಾರಣವಾಗಿದೆ. ಸ್ವಾಮೀಜಿ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ನಾನಾ ರೀತಿಯ ಚರ್ಚೆ ನಡೆಯುತ್ತಿದ್ದು, ಇದರಿಂದಾಗಿ ಎರಡೂ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

ಕಿತ್ತೂರು ತಾಲೂಕಿನ ದೇಗುಲಹಳ್ಳಿ ಹಾಗೂ ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ವೀರೇಶ್ವರ ಸ್ವಾಮೀಜಿ 2024ರ ಲೋಕಸಭಾ ಚುನಾವಣೆಗೆ ಬೆಳಗಾವಿ ಮತ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ. ಅಂಬಡಗಟ್ಟಿಯ ಮಡಿವಾಳೇಶ್ವರ ಮಠದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿರುವ ಅವರು, ಭಕ್ತರ ಮತ್ತು ವೈಯಕ್ತಿಕ ಅಪೇಕ್ಷೆಯಿಂದಾಗಿ ಚುನಾವಣೆಗೆ ಇದೇ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಮಠದ ಪರಂಪರೆ ಇಟ್ಟುಕೊಂಡು ಈಗಾಗಲೇ ಸಮಾಜಸೇವೆ ಮಾಡುತ್ತಿದ್ದೇನೆ. ಹೀಗಾಗಿ ಜನರ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆ ಸ್ಪರ್ಧಿಸುತ್ತಿದ್ದೇನೆ. ಬೆಳಗಾವಿ ಕ್ಷೇತ್ರದಲ್ಲಿ ಬರುವ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನನ್ನದೇಯಾದ ಭಕ್ತ ವರ್ಗವಿದ್ದು, ಅವರೆಲ್ಲ ನನ್ನ ಪರವಾಗಿ ಚುನಾವಣೆಯಲ್ಲಿ ದುಡಿಯಲಿದ್ದಾರೆ ಎಂದು ವೀರೇಶ್ವರ ಸ್ವಾಮೀಜಿ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಯಾವುದೇ ಪಕ್ಷದ ವಿರುದ್ಧ ಕೋಪಗೊಂಡು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಶ್ರೀಮಠದ ಭಕ್ತರು ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ವೀರೇಶ್ವರ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಭೆಯಲ್ಲಿ ಭಕ್ತರ ನಿರ್ಣಯ: ದಿಂಗಾಲೇಶ್ವರ ಸ್ವಾಮೀಜಿ - Dingaleshwar Swamiji

ETV Bharat Logo

Copyright © 2025 Ushodaya Enterprises Pvt. Ltd., All Rights Reserved.