ETV Bharat / state

ಹೆಚ್‌ಎಸ್‌ಆರ್‌ಪಿ ನಂಬರ್ ಅಳವಡಿಸದ ವಾಹನ ಮಾಲೀಕರು ಮತ್ತೆ ನಿರಾಳ - HSRP Number Plate

author img

By ETV Bharat Karnataka Team

Published : Jun 12, 2024, 5:39 PM IST

Updated : Jun 12, 2024, 10:05 PM IST

ಹೆಚ್​ಎಸ್​ಆರ್​ಪಿ ನಂಬರ್ ವಿಚಾರವಾಗಿ ವಾಹನ ಮಾಲೀಕರು ಜುಲೈ 4ರವರೆಗೂ ನಿರಾಳರಾಗಬಹುದು.

High court
ಹೈಕೋರ್ಟ್ (ETV Bharat)

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಮಾದರಿಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ)ವನ್ನು ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೇ 21ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ ನಾಲ್ಕರವರೆಗೂ ವಿಸ್ತರಿಸಿದೆ. ಅಲ್ಲದೆ, ಕಠಿಣ ಕ್ರಮ ಕೈಗೊಳ್ಳುವ ಕುರಿತ ಅವಧಿ ವಿಸ್ತರಿಸುವುದಕ್ಕೆ ರಾಜ್ಯ ಸರ್ಕಾರ ಸ್ವತಂತ್ರವಾಗಿರುತ್ತದೆ ಎಂದು ತಿಳಿಸಿದೆ.

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೆಚ್‌ಎಸ್‌ಪಿಸಿ ತಯಾರಿಕಾ ಕಂಪೆನಿಯಾದ ಬಿಎನ್​ಡಿ ಎನರ್ಜಿ ಲಿಮಿಟೆಡ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಕಳೆದ ವಿಚಾರಣೆ ವೇಳೆ ನೀಡಿದ್ದ ಆದೇಶ ಇಂದಿಗೆ ಅಂತ್ಯವಾಗಲಿದೆ. ಇದೀಗ ಅವಧಿ ವಿಸ್ತರಣೆ ಮಾಡಬೇಕು. ಅಲ್ಲದೆ, ಅವಧಿ ವಿಸ್ತರಣೆ ಮಾಡುವ ಕುರಿತ ನಿರ್ಧಾರವನ್ನು ನ್ಯಾಯಪೀಠದ ಮುಂದೆ ಪ್ರಸ್ತುತಪಡಿಸಬಹುದು ಎಂದರು.

ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಹೆಚ್‌ಎಸ್‌ಆರ್‌ಪಿ ನಂಬರ್ ಫಲಕಗಳ ಕಡ್ಡಾಯದ ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಆಗಸ್ಟ್ ಇಲ್ಲವೇ ಸೆಪ್ಟಂಬರ್‌ವರೆಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದೆ. ಹೈಕೋರ್ಟ್ ಅನುಮತಿ ನೀಡಿದಲ್ಲಿ ಸರ್ಕಾರ ಅವಧಿ ವಿಸ್ತರಣೆ ಮಾಡಲಿದೆ ಎಂದರು.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಸಲು 'ಮೂಲ ಉಪಕರಣ ತಯಾರಕ' (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ 2023ರ ಆ.17ರಂದು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ.

ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ 'ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ' ಸೇರಿ ಅವಕಾಶ ವಂಚಿತ ಕೆಲವು ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗೆ ಬಿಎನ್​ಡಿ ಎನರ್ಜಿ ಲಿಮಿಟೆಡ್ ಮಧ್ಯಂತರ ಅರ್ಜಿ ಸಲ್ಲಿಸಿ, ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿತ್ತು.

ಇದನ್ನೂ ಓದಿ: ಎಚ್ಎಸ್ಆರ್​ಪಿ ನಂಬರ್ ಫಲಕ ಕುರಿತು ಮುಂದಿನ ವಾರ ನಿರ್ಧಾರ : ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

Last Updated : Jun 12, 2024, 10:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.