ETV Bharat / state

ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋರಿರುವ ಅರ್ಜಿ ತೀರ್ಪು ಶುಕ್ರವಾರ ಪ್ರಕಟ - LAWYER JEEVA SUICIDE CASE

ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ತೀರ್ಪನ್ನು ಹೈಕೋರ್ಟ್​ ಶುಕ್ರವಾರ ಪ್ರಕಟಿಸಲಿದೆ.

lawyer suicide
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 27, 2024, 8:44 PM IST

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಸಂಬಂಧ ಪೊಲೀಸ್​ ತನಿಖೆ ಎದುರಿಸಿದ್ದ ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ಸಿಬಿಐ ಇಲ್ಲವೇ, ಸ್ವತಂತ್ರ್ಯ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತಮ್ಮ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ವಕೀಲೆ ಎಸ್‌.ಜೀವಾ ಸಲ್ಲಿಸಿರುವ ಅರ್ಜಿ ಹಾಗೂ ಜೀವಾ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎನ್ನಲಾದ ತನಿಖಾಧಿಕಾರಿಯೂ ಆಗಿರುವ ಡಿವೈಎಸ್‌ಪಿ ಕನಕಲಕ್ಷ್ಮಿ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅಲ್ಲದೆ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಸಿಬಿಐ ಅನ್ನು ಪ್ರತಿವಾದಿಗಳನ್ನಾಗಿಸಲು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಲಾಗಿದೆ. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಯಾರು ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿತು.

ವಕೀಲರ ಸಂಘದ ವಾದವೇನು?: ವಿಚಾರಣೆ ವೇಳೆ ಬೆಂಗಳೂರು ವಕೀಲರ ಸಂಘದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಡಿ.ಆರ್‌.ರವಿಶಂಕರ್‌ ಮತ್ತು ವಿವೇಕ್‌ ಸುಬ್ಬಾರೆಡ್ಡಿ, ''ಬೆಂಗಳೂರು ಜಿಲ್ಲೆಯ ವಕೀಲರ ಕಲ್ಯಾಣಕ್ಕಾಗಿ ಎಎಬಿ ಇದೆ. ವಕೀಲೆ ಜೀವಾ ಅವರು ಸಿವಿಲ್‌ ನ್ಯಾಯಾಧೀಶರ ಪರೀಕ್ಷೆ ಬರೆದಿದ್ದು, ಭಾರತೀಯ ವಕೀಲರ ಪರಿಷತ್‌ ಸದಸ್ಯತ್ವ ಹೊಂದಿದ್ದಾರೆ. ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹಾಲಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಕನಕಲಕ್ಷ್ಮಿ ಅವರು ತುಮಕೂರಿನಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದಾಗ ತನಿಖಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದರು''.

''ಇದಕ್ಕಾಗಿ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಕನಕಲಕ್ಷ್ಮಿ ಅವರ ಪರವಾಗಿ ಬಿ ವರದಿ ಸಲ್ಲಿಕೆಯಾಗಿತ್ತು. ಇದರ ಬೆನ್ನಿಗೇ ಅವರು ಹೈಕೋರ್ಟ್‌ನಲ್ಲಿ ಎಫ್‌ಐಆರ್‌ ರದ್ಧತಿ ಕೋರಿದ್ದು, ಅದನ್ನು ಹೈಕೋರ್ಟ್‌ ವಜಾ ಮಾಡಿದೆ. ಮತ್ತೆರಡು ಪ್ರಕರಣಳಲ್ಲಿಯೂ ಕನಕಲಕ್ಷ್ಮಿ ಪರವಾಗಿ ಬಿ ವರದಿ ಸಲ್ಲಿಕೆಯಾಗಿದೆ. ಜೀವಾ ಆತ್ಮಹತ್ಯೆ ತನಿಖೆಗೆ ರಾಜ್ಯ ಸರ್ಕಾರವು ಎಸ್‌ಐಟಿ ರಚಿಸುವ ಭರವಸೆ ನೀಡುತ್ತಿದ್ದು, ಅದರಿಂದ ನ್ಯಾಯ ನಿರೀಕ್ಷಿಸಲಾಗದು. ಹೀಗಾಗಿ, ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರುತ್ತಿದ್ದೇವೆ'' ಎಂದು ಪೀಠಕ್ಕೆ ವಿವರಿಸಿದರು.

''ತನಗೆ ಡಿಐಜಿ, ಹೆಚ್ಚುವರಿ ಡಿಐಜಿ ಗೊತ್ತಿದ್ದು, ನ್ಯಾಯಾಲಯಗಳು ಸಹ ತನಗೆ ಏನೂ ಮಾಡಲಾಗದು ಎಂದು ಕನಕಲಕ್ಷ್ಮಿ ಹೇಳಿದ್ದಾರೆ ಎಂದು ಸಹ ಆರೋಪಿಗಳು ಆರೋಪಿಸಿದ್ದಾರೆ. ತನಿಖಾಧಿಕಾರಿಗಳ ಈ ರೀತಿಯ ನಡೆಗೆ ತಡೆ ಬೇಕಿದೆ. ಈ ಟ್ರೆಂಡ್‌ ಮುಂದುವರಿಯಲು ಅವಕಾಶ ನೀಡಬಾರದು'' ಎಂದರು.

''ಭೋವಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ರೂಪಿಸಿ ಪ್ರಶ್ನಿಸಿಲಾಗಿಲ್ಲ, ತನಿಖಾಧಿಕಾರಿ ಕನಕಲಕ್ಷ್ಮಿ ತನಗೆ ಬೇಕಾದ ಉತ್ತರಕ್ಕಾಗಿ ಜೀವಾ ಅವರಿಗೆ ಕಿರುಕುಳ ನೀಡಿದ್ದಾರೆ. ಈಗ ತನಿಖೆಗೆ ಸಹಕರಿಸಿಲ್ಲ ಎಂದು ಹೇಳುತ್ತಿದ್ದಾರೆ. ಜೀವಾ ಸಾವಿನ ತನಿಖೆ ನಡೆಸುವುದು ಬಿಟ್ಟು, ಆಕೆ ವಕೀಲೆಯೋ? ಇಲ್ಲವೋ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ನ್ಯಾಯಾಲಯದಲ್ಲಿ ಓಡಾಡುತ್ತಿದ್ದಾರೆ'' ಎಂದು ಪೀಠಕ್ಕೆ ತಿಳಿಸಿದರು.

ಸರ್ಕಾರದ ಪರ ವಕೀಲರು, ''ಭೋವಿ ನಿಯಮದ ಹಗರಣ ಕುರಿತಂತೆ ಹಲವು ದಾಖಲೆ ಪತ್ತೆಯಾದ ಹಿನ್ನೆಲೆಯಲ್ಲಿ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆ. ಯಾವ ಪ್ರಶ್ನೆ ಕೇಳಬೇಕು ಅಥವಾ ಕೇಳಬಾರದು ಎಂಬುದು ತನಿಖಾಧಿಕಾರಿಗೆ ಬಿಟ್ಟ ವಿಚಾರವಾಗಿದೆ. ಮೊದಲನೇ ಆರೋಪಿಗೆ ಸಂಪರ್ಕ ಕಲ್ಪಿಸುವ ದಾಖಲೆಗಳು ದೊರೆತಿವೆ. ಅದನ್ನು ನ್ಯಾಯಾಲಯದ ಮುಂದೆ ಇರಿಸಲಾಗುವುದು. ಚಿಕ್ಕಮಗಳೂರಿನಲ್ಲಿ ಪೊಲೀಸರೊಬ್ಬರು ದಂಡದ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತನಿಖೆ ನಡೆಸಲು ಆದೇಶ ನೀಡಲು ಹೈಕೋರ್ಟ್‌ ನಿರಾಕರಿಸಿತ್ತು'' ಎಂದು ಪೀಠಕ್ಕೆ ವಿವರಿಸಿದರು.

''ತನಿಖೆಯಲ್ಲಿ ಎಲ್ಲಿ ಲೋಪವಾಗಿರುವುದನ್ನು ತೋರಿಸಬೇಕು. ಆದರೆ, ತನಿಖೆ ನಡೆಸಲು ಬಿಡುತ್ತಿಲ್ಲ. ಮರಣ ಪತ್ರ ಜಪ್ತಿ ಮಾಡಲಾಗಿದೆ. ಬಿಎನ್‌ಎಸ್‌ಎಸ್‌ ಸೆಕ್ಷನ್‌ 306 ಅಡಿ ಎಲ್ಲ ಪ್ರಕರಣಗಳಲ್ಲೂ ಆರೋಪಿಗಳನ್ನು ಬಂಧಿಸುವುದಿಲ್ಲ. ಏನು ಜಪ್ತಿಯಾಗುತ್ತದೆ ಎಂಬುದನ್ನು ಆಧರಿಸಿ ಐಪಿಸಿ ಸೆಕ್ಷನ್‌ 420 ಅಪರಾಧದಡಿ ಬಂಧಿಸಲಾಗುತ್ತದೆ. ಆರೋಪಿಗಳು ನ್ಯಾಯಾಲಯದ ಮುಂದೆ ಬಂದಿದ್ದು, ಅವರು ತನಿಖೆಗೆ ಸಹಕರಿಸುತ್ತಿಲ್ಲ. ತನಿಖಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಜೀವಾ ಅವರ ಆತ್ಮಹತ್ಯೆ ಪ್ರಕರಣದ ಕುರಿತು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿದ್ದೇವೆ. ಇದಕ್ಕೂ ಮುನ್ನ, ಜೀವಾ ಅವರು ಹಗರಣದ ತನಿಖೆಯಲ್ಲಿ ಭಾಗಿಯಾಗಿದ್ದ ವಿಚಾರಣೆಯ ವಿಡಿಯೋ ಆಗಿದೆ. ಅದನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು'' ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.

ಇದನ್ನೂ ಓದಿ: ವಿಚಾರಣಾಧೀನ ಕೈದಿ ಮೇಲೆ ಹಲವು ಪ್ರಕರಣಗಳಿದ್ದರೆ ಜಾಮೀನು ನೀಡಲಾಗದು: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.