ETV Bharat / state

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ - M Madana Mohan passed away - M MADANA MOHAN PASSED AWAY

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ
ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ (ETV Bharat)
author img

By ETV Bharat Karnataka Team

Published : Jun 15, 2024, 5:27 PM IST

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಮದನ ಮೋಹನ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಮತ್ತಿಹಳ್ಳಿ ಮದನ ಮೋಹನ ಅವರು ಉತ್ತರ ಕರ್ನಾಟಕದ ಮಾಹಿತಿ ಕಣಜ ಎಂದೇ ಹೆಸರುವಾಸಿಯಾಗಿದ್ದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 1976 ರಲ್ಲಿ ಸ್ಥಾಪನೆಗೊಂಡ ಸಮಯದಲ್ಲಿ ಸಂಘದ ಪ್ರಪ್ರಥಮ ಖಜಾಂಚಿಗಳಾಗಿ ಕಾರ್ಯ ನಿರ್ವಹಿಸಿದ್ದರು. 1979 ರಲ್ಲಿ ಹುಬ್ಬಳ್ಳಿಯಲ್ಲಿ‌ ನಡೆದ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧಿವೇಶನ ಯಶಸ್ವಿಯಾಗುವಲ್ಲಿ ಬಹಳಷ್ಟು ಶ್ರಮಿಸಿದ್ದರು. ಆ ಸಮ್ಮೇಳನವನ್ನು ಅಂದಿನ ಕೇಂದ್ರ ಸರ್ಕಾರದ ವಾರ್ತಾ ಸಚಿವರಾಗಿದ್ದ ಲಾಲ್​ ಕೃಷ್ಣ ಅಡ್ವಾಣಿಯವರು ಉದ್ಘಾಟನೆ ಮಾಡಿದ್ದರು.

ಸಮ್ಮೇಳನದಲ್ಲಿ ಉಳಿಕೆ ಹಣದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ ಜೀವ ನೀಡಲಾಗಿತ್ತು. ಪ್ರಸ್ತುತ ಇರುವ ಕಟ್ಟಡ ಅದರ ಮುಂದುವರಿದ ಭಾಗವಷ್ಟೆ. 83 ವಯಸ್ಸಿನ ಎಂ. ಮದನ ಮೋಹನ ಅವರು ದಿ ಹಿಂದು ಪತ್ರಿಕೆಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸಿದರಲ್ಲದೆ, ಕರ್ನಾಟಕ-ಮಹಾರಾಷ್ಟ್ರ ಗಡಿ ತಂಟೆಯ 1986ರ ಗಲಭೆಗಳಲ್ಲಿ, ಹುಬ್ಬಳ್ಳಿಯ ಈದ್ಗಾ ಗಲಭೆಗಳ ಸಂದರ್ಭದಲ್ಲಿ ಅವರ ವರದಿಗಳು ಸರ್ಕಾರಗಳ ಎದುರು ವಾಸ್ತವಾಂಶವನ್ನು ತೆರೆದಟ್ಟಿದ್ದವು. ಅವರ ನಿಧನಕ್ಕೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ‌. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಮುಂಗಾರು ಮಳೆ: ಹಸಿರು ಹೊದ್ದು ನಿಂತ ಐತಿಹಾಸಿಕ ದೊಡ್ಡಹುಣಸೆ ಮರಗಳು - MONSOON RAIN

ETV Bharat Logo

Copyright © 2025 Ushodaya Enterprises Pvt. Ltd., All Rights Reserved.