ETV Bharat / state

ಲೋಕಸಭೆ ಚುನಾವಣೆ: ಮನೆಯಲ್ಲೇ ಮತದಾನದ ಹಕ್ಕು ಚಲಾಯಿಸಿದ ಜನಾರ್ದನ ಪೂಜಾರಿ - Home Voting - HOME VOTING

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಮ್ಮ ಮನೆಯಲ್ಲಿಯೇ ಲೋಕಸಭೆ ಚುನಾವಣೆಗೆ ಮತದಾನ ಮಾಡಿದ್ದಾರೆ.

veteran-politician-janardan-pujari-casted-vote-at-home
ಲೋಕಸಭೆ ಚುನಾವಣೆ: ಮನೆಯಲ್ಲೇ ಮತದಾನದ ಹಕ್ಕು ಚಲಾಯಿಸಿದ ಜನಾರ್ದನ ಪೂಜಾರಿ
author img

By ETV Bharat Karnataka Team

Published : Apr 17, 2024, 10:13 AM IST

ಬಂಟ್ವಾಳ (ದಕ್ಷಿಣ ಕನ್ನಡ): ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ 87ರ ಹರೆಯದ ಬಿ. ಜನಾರ್ದನ ಪೂಜಾರಿ ಅವರು ಬಂಟ್ವಾಳದಲ್ಲಿರುವ ತಮ್ಮ ಮನೆಯಲ್ಲಿಯೇ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಅಧಿಕಾರಿಗಳ ತಂಡದವರು 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರ ಮನೆಗಳಿಗೆ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡವು ಮನೆ ಮನೆಗಳಿಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಏಪ್ರಿಲ್ 15 ರಂದು ಆರಂಭಗೊಂಡಿದೆ.

ಇದನ್ನೂ ಓದಿ: 1200 ಜನರಿರುವ ದೊಡ್ಡದಾದ ಕುಟುಂಬದಲ್ಲಿದ್ದಾರೆ 350 ಮತದಾರರು!: ಇವರಿರುವುದು ಎಲ್ಲಿ ಗೊತ್ತಾ? - Assam family has nearly 350 voters

ಇದರ ಅನ್ವಯ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸಲಾಗಿದೆ. ಇದುವರೆಗೂ ಪೂಜಾರಿ ಅವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಸಂಖ್ಯೆ 130 ರ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಸಲ ಜನಾರ್ದನ ಪೂಜಾರಿ ಅವರು ಮನೆಯಲ್ಲೇ ಮತ ಚಲಾಯಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಮತಗಟ್ಟೆಗೆ ತೆರಳಿ ಮತ ಹಾಕಿದ್ದರು.

ಇದನ್ನೂ ಓದಿ: 'ಲೋಕ' ಕದನ: ಹಿರಿಯ ನಾಗರಿಕರು, ವಿಶೇಷಚೇತನರಿಂದ ಮನೆಯಲ್ಲೇ ಅಂಚೆ ಮತದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.