ETV Bharat / state

ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್​, ಉಪರಾಷ್ಟ್ರಪತಿ ಜಗದೀಪ್ ಧನಕರ್​ರಿಂದ ಉದ್ಘಾಟನೆ - VICE PRESIDENT JAGDEEP DHANKAR

ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಸನ್ಮಾನಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (ETV Bharat)
author img

By ETV Bharat Karnataka Team

Published : 23 hours ago

Updated : 23 hours ago

ಬೆಳ್ತಂಗಡಿ (ದಕ್ಷಿಣ ಕನ್ನಡ): ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಮತ್ತು ಅವರ ಪತ್ನಿ ಡಾ.ಸುದೇಶ ಧನ್​ಕರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು.

ಬಳಿಕ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಗದೀಪ್ ಧನ್‌ಕರ್ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಇದು ಕೇವಲ ಕಟ್ಟಡ ಮಾತ್ರವಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ. ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ ಎಂದರು.

ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್
ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (ETV Bharat)

ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ನಾವು ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆಯಿದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ತಿಳಿಸಿದರು.

ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶ ಸೇವೆಗೆ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು, ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಉಪರಾಷ್ಟ್ರಪತಿ ಕರೆ ನೀಡಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹೇಮಾವತಿ ವಿ. ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ : ಭಕ್ತರು ಸರದಿ ಸಾಲಿನಲ್ಲಿ ಬಂದು ವಿಶ್ರಾಂತಿ ಪಡೆಯಲು ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. 2,75,177 ಚದರ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಇದು ಎರಡು ಅಂತಸ್ತಿನ ಕಟ್ಟಡವಾಗಿದೆ. ಸೋಲಾರ್ ಮತ್ತು ಅತ್ಯಾಧುನಿಕ ಉಪಕರಣ ಅಳವಡಿಕೆಯಾಗಿರುವ ಹೈಟೆಕ್ ಕಟ್ಟಡ ಇದಾಗಿದೆ. ಇಲ್ಲಿ ಒಟ್ಟು 16 ಹಾಲ್​​ಗಳನ್ನು ನಿರ್ಮಾಣ ಮಾಡಲಾಗಿದೆ. ಭಕ್ತರು ವಿಶ್ರಾಂತಿ ಪಡೆಯಲು ಹೊಸ ಮಾದರಿಯ ಸ್ಟೈನ್ ಲೆಸ್ ಸ್ಟೀಲ್ ಕುರ್ಚಿಗಳನ್ನು ಅಳವಡಿಸಲಾಗಿದೆ.

ಒಂದು ಹಾಲ್​​ನಲ್ಲಿ 600 ರಿಂದ 800 ಮಂದಿ ಇರಲು ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಹಾಲ್​​ನಲ್ಲಿ ಸುಸಜ್ಜಿತ ಶೌಚಾಲಯ, ಮಗುವಿನ ಆರೈಕೆ ಕೇಂದ್ರ ಕೊಠಡಿಗಳು ಇರುತ್ತವೆ. ಕ್ಯೂ ಕಾಂಪ್ಲೆಕ್ಸ್​ನಲ್ಲಿ ಸೂಚನಾ ಫಲಕದ ಜೊತೆಗೆ ಟಿವಿಯಲ್ಲಿ ಮಾಹಿತಿ ನೀಡಲಾಗುತ್ತದೆ. ಸಿಸಿಟಿವಿ ಅಳವಡಿಸಲಾಗಿದ್ದು, ಪ್ರವೇಶದ್ವಾರದ ಎದುರು ಧರ್ಮಸ್ಥಳ ಕ್ಷೇತ್ರದ ಇತಿಹಾಸ, ಪರಂಪರೆ, ಜಾತ್ರೆ ಮಹೋತ್ಸವ ದೇವರ ಬಲಿ, ಉತ್ಸವಗಳ ಕುರಿತು ಹಾಗೂ ಇನ್ನಿತರ ಕಲಾಕೃತಿಗಳು ಇವೆ.

ಇದಕ್ಕೂ ಮುನ್ನ ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಮತ್ತು ಅವರ ಪತ್ನಿ ಇಂದು ಮಧ್ಯಾಹ್ನದ 1 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಉಪರಾಷ್ಟ್ರಪತಿಗಳನ್ನು ರಾಜ್ಯ ಸರ್ಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಸ್ವಾಗತಿಸಿದ್ದರು. ಈ ವೇಳೆ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗರ್​ವಾಲ್ ಉಪಸ್ಥಿತರಿದ್ದರು. ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಅವರು ಧರ್ಮಸ್ಥಳಕ್ಕೆ ತೆರಳಿದ್ದರು‌.

ಇದನ್ನೂ ಓದಿ: ಹೊಸ ವರ್ಷಕ್ಕೆ ಪುಷ್ಪಾಲಂಕೃತಗೊಂಡ ಶ್ರೀಕ್ಷೇತ್ರ ಧರ್ಮಸ್ಥಳ: ಮಂಜುನಾಥನ ದರ್ಶನಕ್ಕೆ ಭಕ್ತರ ದಂಡು

Last Updated : 23 hours ago
ETV Bharat Logo

Copyright © 2025 Ushodaya Enterprises Pvt. Ltd., All Rights Reserved.