ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಪ್ರಕರಣ ಸಿಬಿಐಗೆ ವಹಿಸಿ: ವಿಜಯೇಂದ್ರ ಆಗ್ರಹ - BY Vijayendra - BY VIJAYENDRA

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jun 6, 2024, 12:52 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ‌ ರೂ. ಹಗರಣ ನಡೆದಿದೆ. ಪಕ್ಕದ ಹೈದರಾಬಾದ್​ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲು ವಿಧಾನಸೌಧದಿಂದ ಇಂದು ಕಾಲ್ನಡಿಗೆಯಲ್ಲಿ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದು ಇಷ್ಟು ದಿನವಾದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಒಬ್ಬ ಸಚಿವರ ಇಲಾಖೆಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವರ ಗಮನದಲ್ಲೂ ಇದು ಇದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್​ನೋಟ್ ನಲ್ಲೂ ಸಚಿವರ ಬಗ್ಗೆ ಉಲ್ಲೇಖ ಇದೆ. ಸಚಿವರ ರಾಜೀನಾಮೆ ಪಡೆಯಲು ಆಗಿಲ್ಲ. ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಭೇಟಿ ಮಾಡಲಿದ್ದೇವೆ. ತಕ್ಷಣವೇ ರಾಜೀನಾಮೆ ಪಡೆಯುವಂತೆ ಮನವಿ ಮಾಡಲಿದ್ದೇವೆ ಎಂದರು‌.

ರಾಜೀನಾಮೆಗೆ ಸಿಎಂ ಸೂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನು ಸಿಎಂ ಮಾಡಿಲ್ಲ. ಕೂಡಲೇ ಸಚಿವರ ರಾಜೀನಾಮೆ ಪಡೆಯಬೇಕು. ಮೂರ್ನಾಲ್ಕು ಅಧಿಕಾರಿಗಳು ಈ ದುಸ್ಸಾಹಸಕ್ಕೆ ಕೈ ಹಾಕಲು ಸಾಧ್ಯವಿಲ್ಲ. ಸಚಿವರ ಗಮನಕ್ಕೆ ತರದೇ ಹೀಗೆ ಮಾಡಲು ಸಾಧ್ಯವಿಲ್ಲ. ಎಲ್ಲೋ ಒಂದು ಕಡೆ ಹಣವನ್ನು ಲೋಕಸಭೆ ಚುನಾವಣೆಗೆ ಬಳಸಲಾಗಿದೆ. ಸಿಎಂ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ: ಸಿಬಿಐನಿಂದ ಎಫ್ಐಆರ್ ದಾಖಲು - Valmiki Corporation case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.