ETV Bharat / state

ಹೈಕಮಾಂಡ್ ಜೊತೆ ಚರ್ಚಿಸಿ ಸೋಮಶೇಖರ್, ಶಿವರಾಮ ಹೆಬ್ಬಾರ್ ವಿರುದ್ಧ ಕ್ರಮ: ವಿಜಯೇಂದ್ರ

ಹೈಕಮಾಂಡ್ ಜೊತೆ ಚರ್ಚಿಸಿ ಶಾಸಕರಾದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
author img

By ETV Bharat Karnataka Team

Published : Feb 27, 2024, 10:41 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

ಬೆಂಗಳೂರು: ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಕ್ರಮ ಜರುಗಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪ್ ನೀಡಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸದೇ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೆ ಗೈರಾಗಿ ವಿಪ್ ಉಲ್ಲಂಘಿಸಿದ್ದಾರೆ. ಈ ಸಂಬಂಧ ನಮ್ಮೆಲ್ಲ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿದ್ದೇವೆ. ವಕೀಲರ ಜೊತೆಗೂ ಚರ್ಚಿಸಿದ್ದೇವೆ. ಕ್ರಮಕ್ಕೆ ಇನ್ನೂ ಸಾಕಷ್ಟು ಸಮಯವಿದೆ ಎಂದರು.

ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ 47 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಪರವಾಗಿ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಕರ್ನಾಟಕದ ಪರವಾಗಿ ಧ್ವನಿ ಎತ್ತುವ ಮೂಲಕ ಕನ್ನಡನಾಡಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರೂ ಕೂಡ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೊಂದೆಡೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದರು. ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದ ಕುರಿತು ಆಡಳಿತ ಪಕ್ಷದ ಶಾಸಕರಲ್ಲೇ ಅಸಮಾಧಾನವಿದೆ. ಅಭಿವೃದ್ಧಿ ಇಲ್ಲದೇ ಇರುವುದು, ಆಡಳಿತ ಪಕ್ಷದ ಶಾಸಕರು ತಮ್ಮ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಹಾಗಾಗಿ ಅವರಲ್ಲಿ ಕೆಲವರು ಬೆಂಬಲ ಕೊಡುವ ನಿರೀಕ್ಷೆ ನಮ್ಮದಾಗಿತ್ತು. ಆದರೆ ಅದು ಆಗಲಿಲ್ಲ. ಅವರ ಸೋಲನ್ನು ಹಿನ್ನಡೆ ಎಂದು ಭಾವಿಸದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಯಾರ ಹಣೆಬರಹ ಏನೇನು ಎಂದು ಗೊತ್ತಾಗುತ್ತದೆ. ಯಾರು ಯಾರು ಆಟವಾಡುವ ಪ್ರಯತ್ನ ಮಾಡುತ್ತಿದ್ದಾರೋ, ಬರುವ ದಿನಗಳಲ್ಲಿ ಸೂಕ್ತ ಉತ್ತರವನ್ನು ಮತದಾರರು ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ಅಭ್ಯರ್ಥಿ ಬಗ್ಗೆ ತಲೆ ಕೆಡಿಸಿಕೊಳ್ಳದೆ ತಾವೇ ಮೋದಿ ಎಂದು ಕೆಲಸ ಮಾಡಿ: ಕಾರ್ಯಕರ್ತರಿಗೆ ವಿಜಯೇಂದ್ರ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.