ETV Bharat / state

ಎಲ್ಲಾ ಸಮೀಕ್ಷೆಗಳನ್ನೂ ಮೀರಿ ಎನ್​ಡಿಎ ಮೈತ್ರಿಕೂಟಕ್ಕೆ ಗೆಲುವು: ಬಿ. ವೈ. ವಿಜಯೇಂದ್ರ - EXIT POLL

ಚುನಾವಣೋತ್ತರ ಸಮೀಕ್ಷೆಗಳನ್ನು ಮೀರಿ ಎನ್​ಡಿಎ ಕೂಟ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jun 2, 2024, 6:44 AM IST

ಬೆಂಗಳೂರು: ಮತಗಟ್ಟೆ ಸಮೀಕ್ಷೆ ನಡೆಸಿದ ಎಲ್ಲಾ ಏಜೆನ್ಸಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವಿಕ್ರಮ ಸಾಧನೆಗೈಯುವುದು ಖಾತ್ರಿಯಾಗಿದೆ. ಎನ್.ಡಿ.ಎ ಮೈತ್ರಿಕೂಟ ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೊಮ್ಮೆ ಮೋದಿ ಜಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಸಮೀಕ್ಷಾ ವರದಿ ಬಹಿರಂಗವಾಗಿರುವುದು. ಭಾರತವನ್ನು ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದ ಮತದಾರ ಬಂಧುಗಳ ರಾಷ್ಟ್ರ ವಿಜಯವನ್ನು ಸಂಕೇತಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಎಕ್ಸ್ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕೆಲವು ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗುವಂತೆ ಸಮೀಕ್ಷಾ ವರದಿಗಳು ನಮ್ಮ ನಿರೀಕ್ಷಿತ ಫಲಿತಾಂಶದ ಸೂಚನೆ ಪ್ರಕಟಿಸಿವೆ. ಕರ್ನಾಟಕ ರಾಜ್ಯದ ಜನತೆ ಮೋದಿ ಜಿ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಸದಾ ಮುಂದೆ ಎನ್ನುವ ವರದಿ ಬಿಜೆಪಿ ಕಾರ್ಯಕರ್ತರ ಪರಿಶ್ರಮದ ಹೋರಾಟಕ್ಕೆ ಸಾರ್ಥಕ ಭಾವ ಮೂಡಿಸಿದೆ ಎಂದಿದ್ದಾರೆ.

ಮತ ಬ್ಯಾಂಕ್ ಆಧಾರಿತ ಯೋಜನೆಗಳಿಗೆ ಮತದಾರ ಬಂಧುಗಳು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ ಎನ್ನುವುದೂ ಸ್ಪಷ್ಟವಾಗಿದೆ. ಸಮಗ್ರ ಭಾರತದ ಸುರಕ್ಷತೆ ಹಾಗೂ ಅಭಿವೃದ್ಧಿಯ ವಿಷಯದಲ್ಲಿ ಕರ್ನಾಟಕದ ಮತದಾರರು ರಾಜಿಯಾಗುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಈ ಎಕ್ಸಿಟ್ ಪೋಲ್ ವರದಿ ಸಾಕ್ಷೀಕರಿಸಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಜೂನ್ 4ರ ಫಲಿತಾಂಶ ಎಲ್ಲ ಸಮೀಕ್ಷೆಗಳನ್ನೂ ಮೀರಿ ಎನ್.ಡಿ.ಎ ಮೈತ್ರಿಕೂಟಕ್ಕೆ ನಮ್ಮ ಸಂಕಲ್ಪದ ಗೆಲುವನ್ನು ತಂದುಕೊಡುತ್ತದೆ ಎಂಬ ಆತ್ಮವಿಶ್ವಾಸ ನಮ್ಮದಾಗಿದೆ. ಇದಕ್ಕೆ ಕಾರಣರಾದ ಕರ್ನಾಟಕದ ಸಹೃದಯ ಮತದಾರ ಬಂಧುಗಳಿಗೆ ಹೃದಯತುಂಬಿ ಅಭಿನಂದಿಸುವೆ ಎಂದಿದ್ದಾರೆ.

ಇದನ್ನೂ ಓದಿ: 3ನೇ ಸಲವೂ ಎನ್​​ಡಿಎ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು!, ಅಷ್ಟಕ್ಕೂ NDA 400 ಸ್ಥಾನ ಗೆಲ್ಲುತ್ತಾ? - exit poll

ETV Bharat Logo

Copyright © 2024 Ushodaya Enterprises Pvt. Ltd., All Rights Reserved.