ETV Bharat / state

ವಿಕ್ರಂಗೌಡ ಎನ್​ಕೌಂಟರ್ ನಕಲಿ ಅಲ್ಲ, ಸಂಶಯ ಇದ್ದವರಿಗೆ ಸ್ಪಷ್ಟನೆ ಕೊಡಲು ಸಿದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಕ್ಸಲ್ ವಿಕ್ರಂಗೌಡ ಎನ್​ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಸಿಎಂ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : 2 hours ago

Updated : 2 hours ago

ಉಡುಪಿ: ನಕ್ಸಲ್ ವಿಕ್ರಂಗೌಡ ಎನ್​ಕೌಂಟರ್​ ನಕಲಿ ಅಲ್ಲ. ಎನ್​​ಕೌಂಟರ್​ ನಕಲಿ ಅಂತ ಅನುಮಾನ ಪಡುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್​ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಂಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲಿಸಂ ಅನ್ನು ಬೇರು ಸಮೇತ ಕಿತ್ತುಹಾಕಬೇಕು. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿಲುವು ಎಂದರು.

ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಎನ್​​ಕೌಂಟರ್​ ನಡೆದಿದೆ. ವಿಕ್ರಂಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂಗೌಡ ಫೈರಿಂಗ್ ಮಾಡಿದ ವೇಳೆ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು. ಪರ - ವಿರೋಧ ಚರ್ಚೆ ಎಲ್ಲ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಕಾಂಗ್ರೆಸ್​ನಲ್ಲಿ ಭಿನ್ನಮತ ಇಲ್ಲ: ಕಾಂಗ್ರೆಸ್​ನಲ್ಲಿ ಯಾವುದೇ ಭಿನ್ನಮತ ಇಲ್ಲ.‌ ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ಪ್ರತಿದಿನ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಹೇಳಿದರು.

ವಿಶೇಷಚೇತನ ಹಾಗೂ ಹಿರಿಯ ನಾಗರಿಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಶೇಷಚೇತನ ಹಾಗೂ ಹಿರಿಯ ನಾಗರಿಕ ಇಲಾಖೆಯ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದು ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ಕ್ರಮ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ. ಬಳ್ಳಾರಿಗೆ ಭೇಟಿ ಕೊಟ್ಟಿಲ್ಲ ಎಂದಾಕ್ಷಣ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ.‌ ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳ ಜವಾಬ್ದಾರಿ ಇದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಅಂಗನವಾಡಿಗಳಿಗೆ 50 ವರ್ಷದ ಇತಿಹಾಸವಿದೆ.‌ 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಶರಣಾಗುವ ನಕ್ಸಲರಿಗೆ ಪ್ಯಾಕೇಜ್ : ಗೃಹ ಸಚಿವ ಡಾ ಜಿ ಪರಮೇಶ್ವರ್

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.