ETV Bharat / state

ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ - KEA RESULT

ಗ್ರಾಮ ಆಡಳಿತಾಧಿಕಾರಿ ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟಗೊಂಡಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ನೋಡಬಹುದು.

KANNADA COMPULSORY RESULT
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
author img

By ETV Bharat Karnataka Team

Published : Oct 15, 2024, 6:52 AM IST

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ‌ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್​ಸೈಟ್​ನ‌ ಲಿಂಕ್​ನಲ್ಲಿ ನಮೂದಿಸಿ, ಫಲಿತಾಂಶವನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್ 27ರಂದು ನಡೆಯುವ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ ಎಂದು ವಿವರಿಸಿದ್ದಾರೆ.

ರಾಜ್ಯದ 1,410 ಕೇಂದ್ರಗಳಲ್ಲಿ ಸೆ.29ರಂದು ಪರೀಕ್ಷೆ ನಡೆದಿತ್ತು. ಒಟ್ಟು 5.75 ಲಕ್ಷ ಅಭ್ಯರ್ಥಿಗಳ ಪೈಕಿ 4.53 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ವಿವರಿಸಿದರು.

ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ನಂತರ ಅವರು ಕೂಡ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿ ಕನ್ನಡ ಕಡ್ಡಾಯ ಪರೀಕ್ಷೆ ಯಶಸ್ವಿ: ಶೇ.80ರಷ್ಟು ಅಭ್ಯರ್ಥಿಗಳು ಹಾಜರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.