ETV Bharat / state

ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ: ಬೆಳಗಾವಿಯಲ್ಲಿ 1 ಕ್ವಿಂಟಾಲ್ ಜಿಲೇಬಿ ಹಂಚಿ ಸಂಭ್ರಮಾಚರಣೆ

author img

By ETV Bharat Karnataka Team

Published : Feb 17, 2024, 1:51 PM IST

Updated : Feb 17, 2024, 2:34 PM IST

ಸಾರ್ವಜನಿಕರಿಗೆ ಒಂದು ಕ್ವಿಂಟಾಲ್​ ಜಿಲೇಬಿ ಹಂಚುವ ಮೂಲಕ ಬಸವಾಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.

vishwaguru basavanna cultural leader portrait unveiling celebration distributing 1 quintal jalebi in belagavi
ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ: ಬೆಳಗಾವಿಯಲ್ಲಿ 1 ಕ್ವಿಂಟಾಲ್ ಜಿಲೇಬಿ ಹಂಚಿ ಸಂಭ್ರಮಾಚರಣೆ

ಬೆಳಗಾವಿ: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಎಂಬ ಘೋಷವಾಕ್ಯ ಇರುವ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಅಳವಡಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ಜಿಲೇಬಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.

ಬೆಳಗಾವಿಯಲ್ಲಿ ಸಂಭ್ರಮಾಚರಣೆ

ಬೆಳಗಾವಿಯ ಬಸವಮಂಟಪದ ಮುಂಭಾಗದಲ್ಲಿ ರಾಷ್ಟ್ರೀಯ ಬಸವದಳ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ಜಿಲ್ಲಾ ಘಟಕ ಹಾಗೂ ವಿವಿಧ ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸವಣ್ಣನವರ ಪುತ್ಥಳಿಗೆ ಸ್ವಾಮೀಜಿಗಳು ಹಾಗೂ ಗಣ್ಯರು ಪುಷ್ಪವೃಷ್ಟಿ ಮಾಡಿ, ಜಯಘೋಷ ಮೊಳಗಿಸಿ ಗೌರವ ಸಮರ್ಪಿಸಿದರು. ಬಳಿಕ ಪಟಾಕಿ ಸಿಡಿಸಿದ ಬಸವಾಭಿಮಾನಿಗಳು ಬಸ್, ಕಾರು, ಬೈಕ್​ಗಳಲ್ಲಿ ತೆರಳುತ್ತಿದ್ದ ಸಾರ್ವಜನಿಕರಿಗೆ ಜಿಲೇಬಿ ವಿತರಿಸಿ ಸಂಭ್ರಮಿಸಿದರು.

ಬಸವಬೆಳವಿಯ ಬಸವಚೇತನ ಸ್ವಾಮೀಜಿ ಮಾಧ್ಯಮಗಳ ಜೊತೆಗೆ ಮಾತನಾಡಿ, "ಪಶ್ಚಿಮ ಬಂಗಾಳದಲ್ಲಿ ಸ್ವಾಮಿ ವಿವೇಕಾನಂದ, ತಮಿಳುನಾಡಿನಲ್ಲಿ ಪೆರಿಯಾರ್​ ರಾಮಸ್ವಾಮಿ, ಮಹಾರಾಷ್ಟ್ರದಲ್ಲಿ ಶಿವಾಜಿ ಮಹಾರಾಜರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಅಲ್ಲಿನ ಸರ್ಕಾರಗಳು ಘೋಷಿಸಿದಂತೆ ಕರ್ನಾಟಕದಲ್ಲಿ ಬಸವಣ್ಣನವರನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದು ಸಮಸ್ತ ಕನ್ನಡಿಗರ ಅಸ್ಮಿತೆಯಾಗಿದೆ. ಹಾಗಾಗಿ, ಇಂದು ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ" ಎಂದು ಹರ್ಷ ವ್ಯಕ್ತಪಡಿಸಿದರು.

ಲಿಂಗಾಯತ ಮುಖಂಡ ಶಂಕರ ಗುಡಸ ಮಾತನಾಡಿ, "ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಕೆಗೆ ಆದೇಶ ಹೊರಡಿಸಿರುವುದು ಇಡೀ ಕರುನಾಡಿಗೆ ಅಭಿಮಾನ ಮತ್ತು ಹೆಮ್ಮೆಯ ಸಂಗತಿ. ಇಂದು ಬರೋಬ್ಬರಿ ಒಂದು ಕ್ವಿಂಟಾಲ್ ಜಿಲೇಬಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಬೆಳಗಾವಿಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು" ಎಂದರು.

ಈ ವೇಳೆ, ಬಸವ ಮಂಟಪದ ಪ್ರಭುಲಿಂಗ ಸ್ವಾಮೀಜಿ, ಮುಖಂಡರಾದ ಬಸವರಾಜ ರೊಟ್ಟಿ, ರವೀಂದ್ರ ನಾಯಿಕ, ಅಶೋಕ ಬೆಂಡಿಗೇರಿ, ಆನಂದ ಗುಡಸ, ಕೆ. ಶರಣಪ್ರಸಾದ ಸೇರಿ ಮತ್ತಿತರರು ಇದ್ದರು.

ರಾಜ್ಯ ಬಜೆಟ್​ನಲ್ಲಿ ಬಸವ ಜನ್ಮಭೂಮಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ - ಬಸವಾಭಿಮಾನಿಗಳ ಸಂಭ್ರಮಾಚರಣೆ: ಶುಕ್ರವಾರ ರಾಜ್ಯ ಬಜೆಟ್‌ನಲ್ಲಿ ಬಸವ ಜನ್ಮಭೂಮಿ ಅಭಿವೃದ್ಧಿ ಪ್ರಾಧಿಕಾರ ರಚನೆ ಗೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬಸವಾಭಿಮಾನಿಗಳು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ವಿಜಯಪುರದಲ್ಲಿ ಸಂಭ್ರಮಾಚರಣೆ

ಬಸವ ಜನ್ಮಭೂಮಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಡಿಸಿಎಂ ಹಾಗೂ ಸಂಪುಟದ ಸಚಿವರೂ ಸೇರಿದಂತೆ ಇಡೀ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಾಧಿಕಾರ ರಚನೆಗೆ ಸ್ಥಳೀಯ ಶಾಸಕರೂ ಆದ ಸಚಿವ ಶಿವಾನಂದ ಪಾಟೀಲರ ಶ್ರಮ, ಒತ್ತಾಸೆಯನ್ನು ಸ್ಮರಿಸಿದ ಬಸವಾಭಿಮಾನಿಗಳು ಮುಂಬರುವ ದಿನದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬೃಹತ್‌ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳುವುದಾಗಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್​ ಹೇಳಿದರು.

ಇದನ್ನೂ ಓದಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ; ಫೆ.17ರಿಂದ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಳವಡಿಕೆ

Last Updated : Feb 17, 2024, 2:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.