ದೇವನಹಳ್ಳಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳ 26 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 6 ಲಕ್ಷ ನಗದು ಹಣ ತೆಗೆದುಕೊಂಡು ಪರಾರಿಯಾಗಿದ್ದ. ಇದೀಗ ಈ ಖದೀಮನನ್ನು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ದೃಶ್ಯದ ಸುಳಿವಿನ ಆಧಾರದ ಮೇಲೆ ವಿಶ್ವನಾಥಪುರ ಪೊಲೀಸರು ಬಂಧಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಬೊಮ್ಮವಾರ ಹಾಗೂ ಅರದೇಶನಹಳ್ಳಿಯಲ್ಲಿ ಏಪ್ರಿಲ್ 19 ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಹೆಸರಘಟ್ಟ ಮೂಲದ ಮೋಹನ್ ಕುಮಾರ್ (34)ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 432 ಗ್ರಾಂ ಚಿನ್ನಾಭರಣ ವಶ: ಬಂಧಿತನಿಂದ ಪೊಲೀಸರು 30 ಲಕ್ಷ ರೂ. ಬೆಲೆಬಾಳುವ 432 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ಸೀಜ್ ಮಾಡಿದ್ದಾರೆ. ಆರೋಪಿ ಮೋಹನ್ ಕುಮಾರ್ ವಿರುದ್ಧ ಈ ಹಿಂದೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. 6 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ ಕಳ್ಳತನ ಕೃತ್ಯಕ್ಕೆ ಮುಂದಾಗಿ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.
ಇದನ್ನೂ ಓದಿ: ಶಿವಮೊಗ್ಗ ಗ್ಯಾಂಗ್ ವಾರ್ ಪ್ರಕರಣ: ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗೆ ಪೊಲೀಸರಿಂದ ಗುಂಡೇಟು - Police Firing On Accused