ETV Bharat / state

ವಕ್ಫ್ ಆಸ್ತಿಯೆಂದು ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರ್ಕಾರ: ಸಚಿವ ಎಂ.ಬಿ. ಪಾಟೀಲ್

ಬಿಜೆಪಿ ವಕ್ಫ್ ಆಸ್ತಿ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ. 2019-2022ರಲ್ಲಿ ಅವರದ್ದೇ ಸರ್ಕಾರ ರೈತರಿಗೆ ನೋಟಿಸ್ ನೀಡಿತ್ತು ಎಂದು ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್ (ETV Bharat)
author img

By ETV Bharat Karnataka Team

Published : Oct 29, 2024, 3:07 PM IST

ಬೆಂಗಳೂರು: "ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019 ರಿಂದ 2022ರ ವರೆಗೆ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು. ಆಗ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ" ಎಂದು ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂಬಂಧ ಬಿಜೆಪಿ ಆಡಳಿತದ ಕಾಲದ ನೋಟಿಸ್​ ಅನ್ನು ಸಾಮಾಜಿಕ ಮಾಧ್ಯಮ`ಎಕ್ಸ್’ ಪೋಸ್ಟ್ ಮಾಡಿರುವ ಅವರು, "ಬಿಜೆಪಿಯವರು ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್, ಹಲಾಲ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ. ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ" ಎಂದು ಕುಟುಕಿದರು.

"ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ್​ ಅವರು ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನಾರಚಿಸಲಾಗಿದೆ. ಇಷ್ಟೆಲ್ಲಾ ಆದಮೇಲೆ ಯತ್ನಾಳ್ ಜೊತೆಗೆ ಸಂಸದ ರಮೇಶ್​ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ್ಮ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕೊಟ್ಟ ನೋಟಿಸ್​ಗಳಿಗೆ ಮೊದಲು ಉತ್ತರ ನೀಡಲಿ" ಎಂದು ಆಗ್ರಹಿಸಿದರು.

"ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ್ಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ" ಎಂದು ಟೀಕಿಸಿದರು.

ಇದನ್ನೂ ಓದಿ: ಹೊನವಾಡದ 11 ಎಕರೆ‌ ಮಾತ್ರ ವಕ್ಫ್ ಆಸ್ತಿ, ರೈತರ ಜಮೀನು ಸಂಪೂರ್ಣ ಸುರಕ್ಷಿತ: ಸರ್ಕಾರದ ಅಭಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.