ETV Bharat / state

ಹೈಕೋರ್ಟ್ ಕಲಾಪದ ವಿಡಿಯೋ ರೆಕಾರ್ಡ್ ಮಾಡದಂತೆ ಎಚ್ಚರಿಕೆ ಸಂದೇಶ - High Court - HIGH COURT

ಪೂರ್ವಾನುಮತಿ ಇಲ್ಲದೇ ಹೈಕೋರ್ಟ್​ ಕಲಾಪದ ವಿಡಿಯೋ ರೆಕಾರ್ಡಿಂಗ್ ಹಾಗೂ ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Sep 20, 2024, 5:36 PM IST

ಬೆಂಗಳೂರು: ಹೈಕೋರ್ಟ್ ಕಲಾಪದ ಸಂದರ್ಭದಲ್ಲಿ ಕೆಲವು ವಿಡಿಯೋಗಳು ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪೂರ್ವಾನುಮತಿ ಪಡೆಯದೇ ವಿಡಿಯೋ ರೆಕಾರ್ಡಿಂಗ್, ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಸಿ, ಲೈವ್ ಸ್ಟ್ರೀಮಿಂಗ್‌ಗೂ ಮುನ್ನ ಸಂದೇಶ ಹಾಕಲು ಮುಂದಾಗಿದೆ.

2022ರ ಜನವರಿ 1ರಿಂದ ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರ ಪ್ರಸಾರ (ಲೈವ್‌ ಸ್ಟ್ರೀಮ್) ಮತ್ತು ರೆಕಾರ್ಡಿಂಗ್ ನಿಯಮಗಳು 2021 ಗಳನ್ನು ಕರ್ನಾಟಕ ಹೈಕೋರ್ಟ್ ಜಾರಿಗೊಳಿಸಿದೆ. ಇದರಲ್ಲಿ ಲೈವ್ ಸ್ಟ್ರೀಮಿಂಗ್ ರೆಕಾರ್ಡಿಂಗ್ ನಿಯಮಗಳನ್ನು ಅಡಕಗೊಳಿಸಲಾಗಿದೆ. ನ್ಯಾಯಾಲಯದ ಕಲಾಪ ಪ್ರಾರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನದ ವಿರಾಮದ ವೇಳೆ ಪ್ರತಿಯೊಂದು ಕೋರ್ಟ್ ಹಾಲ್‌ಗಳ ವಿಡಿಯೊ ಕಾನ್ಫರೆನ್ಸ್ ಪರದೆಯ ಮೇಲೆ ಈ ನೋಟಿಸ್ ಪ್ರಸಾರ ಮಾಡಲಾಗಿದೆ.

ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್ ಸ್ಟ್ರೀಮಿಂಗ್ ಅಥವಾ ಹೈಕೋರ್ಟ್ ಯೂಟ್ಯೂಬ್ ಚಾನಲ್‌ನಲ್ಲಿನ ವಿಡಿಯೊಗಳನ್ನು ರೆಕಾರ್ಡ್, ಹಂಚಿಕೆ ಮಾಡುವಂತಿಲ್ಲ ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ನಿರ್ಬಂಧವು ಎಲ್ಲಾ ಸಂದೇಶ ಅಪ್ಲಿಕೇಶನ್‌ಗಳಿಗೂ ಅನ್ವಯಿಸಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪೂರ್ವಾನುಮತಿ ಪಡೆಯದೇ ಲೈವ್ ಸ್ಟ್ರೀಮಿಂಗ್‌ನ ಮರು ಪ್ರಸಾರ, ವರ್ಗಾವಣೆ, ಅಪ್‌ಲೋಡ್ ಮಾಡುವುದು, ಪೋಸ್ಟ್ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರ ಮಾಡುವಂತಿಲ್ಲ. ನ್ಯಾಯಾಲಯದ ಕಲಾಪವನ್ನು ರೆಕಾರ್ಡ್ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್ ಮತ್ತು ವಿಡಿಯೋ ಸಂಗ್ರಹ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೇಳಿಕೆ: ವರದಿ ಕೇಳಿದ ಸುಪ್ರೀಂಕೋರ್ಟ್​ - Supreme Court

ETV Bharat Logo

Copyright © 2025 Ushodaya Enterprises Pvt. Ltd., All Rights Reserved.