ETV Bharat / state

ಬೆಂಗಳೂರಲ್ಲಿ ನೀರಿನ ಸಮಸ್ಯೆ: ಟ್ಯಾಂಕರ್ ಮೂಲಕ ನೀರು ಪೂರೈಕೆ, ಬೋರ್​​ವೆಲ್ ಕೊರೆಸಲು ತೀರ್ಮಾನ - ಜಲ ಮಂಡಳಿ

ಬೆಂಗಳೂರಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್‌ಗಳ ಜೊತೆಗೆ 18 ಹೊಸ ಟ್ಯಾಂಕರ್‌ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್​​ಗಳನ್ನು ಬಾಡಿಗೆಗೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Etv Bharat
Etv Bharat
author img

By ETV Bharat Karnataka Team

Published : Feb 24, 2024, 4:17 PM IST

ಬೆಂಗಳೂರು: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಅಭಾವದ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ನಗರಾಭಿವೃದ್ಧಿ ಇಲಾಖೆಯ ಆಡಳಿತಗಾರರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯ ಆಯುಕ್ತರು, ವಲಯ ಆಯುಕ್ತರು ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು, ಮುಖ್ಯ ಅಭಿಯಂತರರು ಸಭೆ ನಡೆಸಿ ಚರ್ಚಿಸಿದರು.

ಕುಡಿಯುವ ನೀರಿನ ಪೂರೈಕೆಗೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು. ನೀರಿನ ಸಮಸ್ಯೆ ಪೂರೈಕೆಗೆ ಅನುದಾನದ ಕೊರತೆ ಇರುವ ಬಗ್ಗೆ ಸೂಕ್ತ ಮಾಹಿತಿ ನೀಡಿದರೆ ಅನುದಾನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ಸಿಂಗ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಭವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ ಆ ಬಗ್ಗೆ ಪಟ್ಟಿ ಮಾಡಿಕೊಂಡು ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿತಿಯನ್ನು ಕೊಡಿ. ಕೂಡಲೇ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನೀರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ, ಸಿಬ್ಬಂದಿಗಳು ವಲಯ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ತುಂಗಭದ್ರಾ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು: ಆವರಿಸಿದ ಆತಂಕ

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮಕೈಗೊಳ್ಳಲಾಗುತ್ತದೆ. ಬಿಬಿಎಂಪಿ, ಬಿಡಬ್ಲೂಎಸ್ ಎಸ್ ಬಿ ಹಾಗೂ ಬಿಡಿಎ ಸಮನ್ವಯದಿಂದ ಕೆಲಸ ಮಾಡಲು ನಿರ್ಧಾರ ಮಾಡಿದ್ದೇವೆ. ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಬೋರ್ ವೆಲ್ ಕೊರೆಯಲು ಅನುದಾನ: ಪಾಲಿಕೆಯ ಆಯಾ ವಲಯಗಳಿಗೆ ಬೋರ್‌ವೆಲ್‌ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್‌ವೆಲ್‌ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಲಾಗುವುದು ಎಂದರು.

ನಗರದಲ್ಲಿ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿರುವ ಕಡೆಗಳಲ್ಲಿ ಈ ಕೂಡಲೇ ಬೋರ್ ವೆಲ್‌ಗಳನ್ನು ಹಾಕಿ ಆರ್​​ಒ ಫ್ಲಾಂಟ್‌ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್.ಒ ಫ್ಲಾಂಟ್‌ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್​​ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಖಾಸಗಿ ಟ್ಯಾಂಕರ್​ಗಳಿಗೆ ಯಾವುದೇ ದರ ನಿಗದಿ ಮಾಡಿಲ್ಲ. ಖಾಸಗಿ ನೀರಿನ ಟ್ಯಾಂಕರ್​ಗಳನ್ನು ನಾವೇ ತೆಗೆದುಕೊಳ್ಳುತ್ತೇವೆ. ಖಾಸಗಿ ನೀರಿನ ಟ್ಯಾಂಕರ್​ಗಳಿಗೆ ನಾವೇ ದರ ನಿಗದಿ ಮಾಡ್ತೇವೆ. ಆ ದರವನ್ನು ಖಾಸಗಿ ಟ್ಯಾಂಕರ್​​ ಮಾಲೀಕರಿಗೆ ನೀಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಆಯುಕ್ತರು ಉತ್ತರಿಸಿದರು.

ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1472 ಎಂ.ಎಲ್.ಡಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ ಎಂದು ಹೇಳಿದರು.

ನಗರದಲ್ಲಿ ಜಲಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10,955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಂಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅವುಗಳನ್ನು ಫ್ಲಷಿಂಗ್ ಹಾಗೂ ರೀಡ್ರಿಲ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್‌ಗಳ ಜೊತೆಗೆ 18 ಹೊಸ ಟ್ಯಾಂಕರ್‌ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್​​ಗಳನ್ನು ಬಾಡಿಗೆಗೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ದಾವಣಗೆರೆ: ಬೇಸಿಗೆ ಮುನ್ನವೇ 126 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.