ETV Bharat / state

ಜಾರಕಿಹೊಳಿ, ಮಹದೇವಪ್ಪ ಸೇರಿ ನಾವ್ಯಾರೂ ಸಿಎಂ ಪದವಿ ಬಗ್ಗೆ ಚರ್ಚಿಸಿಲ್ಲ: ಸಚಿವ ಪರಮೇಶ್ವರ್ - PRAMESHWAR

ನಾವು ಸಿಎಂ ಪದವಿ ಬಗ್ಗೆ ಯಾವತ್ತೂ ಚರ್ಚಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಸಚಿವ ಪರಮೇಶ್ವರ್
ಸಚಿವ ಪರಮೇಶ್ವರ್ (ETV Bharat)
author img

By ETV Bharat Karnataka Team

Published : Oct 10, 2024, 3:26 PM IST

ಬೆಂಗಳೂರು: ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಸೇರಿದಂತೆ ನಾವು ಯಾವತ್ತೂ ಮುಖ್ಯಮಂತ್ರಿ ಪದವಿ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. ನಿನ್ನೆ ಮೈಸೂರಿನಲ್ಲಿಯೂ ಸಹ ಇದೇ ಮಾತನ್ನು ಹೇಳಿದ್ದೇನೆ. ನಾವು ಯಾರೂ ಸಹ ಮುಖ್ಯಮಂತ್ರಿಯನ್ನು ಬದಲಾಯಿಸಿ, ಬೇರೆಯವರನ್ನು ಮಾಡಿ ಎಂದು ಮಾತನಾಡಿಲ್ಲ ಎಂದರು.

ಇನ್ನು ಮುಂದೆ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ವಿಚಾರದಲ್ಲಿ ನೀವು ಕೇಳಿದರೂ ಪ್ರತಿಕ್ರಿಯಿಸುವುದಿಲ್ಲ. ಕೆಲವು ವಿಚಾರಗಳಲ್ಲಿ ಅಗತ್ಯ ಇದ್ದರೆ ಭೇಟಿ ಮಾಡುತ್ತೇವೆ. ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಸಭೆಗಳನ್ನು ನಾವು ಈವರೆಗೆ ಮಾಡಿಲ್ಲ, ಮುಂದೆಯೋ ಮಾಡೋದಿಲ್ಲ. ಇದು ನನ್ನ ಸ್ಪಷ್ಟೀಕರಣ ಎಂದು ಹೇಳಿದರು.

ಏನೂ ಇಲ್ಲದೇ ಆಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೆ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗೂ ಜವಾಬ್ದಾರಿ ಇದೆ ಎಂದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪದ ಕುರಿತು ಪ್ರತಿಕ್ರಿಯಿಸಿ, ಸಿದ್ದಗಂಗಾ‌ ಮಠಕ್ಕೂ ನಮಗೂ ಇರುವ ಸಂಬಂಧವೇ ಬೇರೆ. ಇತ್ತೀಚೆಗೆ ನಾನು ಮಠಕ್ಕೆ ಹೋಗೇ ಇಲ್ಲ. ಮಠಕ್ಕೆ ಹೋದರೆ ಸ್ವಾಮೀಜಿಯವರ ಗದ್ದುಗೆ ಮತ್ತು ಸಿದ್ದಲಿಂಗ ಸ್ವಾಮೀಜಿಯವರಿಗೆ ನಮಸ್ಕರಿಸಿ ಬರುತ್ತೇನೆ. ನನ್ನ ತಂದೆಯವರ ಕಾಲದಿಂದ ದೊಡ್ಡ ಸ್ವಾಮೀಜಿಯವರು ನಮಗೆಲ್ಲ ಆದರ್ಶ. ಮಠಕ್ಕೆ ಹೋಗಿ ರಾಜಕೀಯ ಮಾತಾಡುವುದಿಲ್ಲ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿನ ಹಗರಣದ ತನಿಖೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮ ಪ್ರಕರಣಗಳ ತನಿಖೆಯ ಪರಿಶೀಲನೆ ಸಮಿತಿಯ ಸಭೆಯನ್ನು ನಿನ್ನೆ ನಡೆಸಿದ್ದೇನೆ. ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಕೋವಿಡ್‌ ತನಿಖೆಯ ಪ್ರಕರಣಕ್ಕೆ ಪ್ರತ್ಯೇಕ ಸಮಿತಿ ಮಾಡಿರುವುದರಿಂದ ವಿಷಯ ನಮ್ಮ‌ ಮುಂದೆ ಚರ್ಚೆಗೆ ಬಂದಿಲ್ಲ ಎಂದರು.

ಬಿಜೆಪಿ ಆಡಳಿತದಲ್ಲಿ ನಡೆದ ಹಗರಣಗಳ ತನಿಖೆಯು ಕೊನೆಯ ಹಂತದಲ್ಲಿದ್ದು, ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಬೇಕಾಗುತ್ತದೆ. ಬೇರೆ ಬೇರೆ ಸಂದರ್ಭದಲ್ಲಿ ಆಗಿರುವ ಪ್ರಕರಣಗಳಿವೆ. ಎಲ್ಲ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು‌.

ರತನ್ ಟಾಟಾ ನಿಧನಕ್ಕೆ ಸಂತಾಪ: ರತನ್ ಟಾಟಾ ಬಹಳ ದೊಡ್ಡ ವ್ಯಕ್ತಿತ್ವ ಹೊಂದಿದವರು. ತಮಗೆ ಬಂದ ಲಾಭದಲ್ಲಿ ಅವರು ಸೇವೆ ಮಾಡ್ತಿದ್ರು. ವಿದ್ಯಾರ್ಥಿಗಳೂ ಸೇರಿ ಎಲ್ಲರಿಗೂ ಖರ್ಚು ಮಾಡುತ್ತಿದ್ದರು. ಅವರು ದೇಶವನ್ನು ಮರೆಯಲಿಲ್ಲ, ಅವರನ್ನೂ ದೇಶ ಮರೆಯುವುದಿಲ್ಲ. ಟಾಟಾ ಗ್ರೂಪನ್ನು ಯಾರೂ‌ ಮರೆಯುವುದಿಲ್ಲ ಎಂದು ರತನ್ ಟಾಟಾ ನಿಧನಕ್ಕೆ ಪರಮೇಶ್ವರ್ ಸಂತಾಪ ಸೂಚಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಇಲ್ಲ, ನಾನು 2028ಕ್ಕೆ ಸಿಎಂ ಆಕಾಂಕ್ಷಿ: ಸಚಿವ ಸತೀಶ್​ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.