ETV Bharat / state

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಸಮರ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದರು.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 19, 2024, 4:46 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್​ನಲ್ಲಿ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್​ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದು ಹೇಳಿದರು.

ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದು ದೂರಿದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ - MUDA Scam High Court Hearing

ETV Bharat Logo

Copyright © 2025 Ushodaya Enterprises Pvt. Ltd., All Rights Reserved.