ETV Bharat / state

ಬೆಳಗಾವಿ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Minister Lakshmi hebbalkar

ಬೆಳಗಾವಿಯಲ್ಲಿ ಸೋಲಿಗೆ ಹಲವು ಕಾರಣಗಳಿವೆ. ಆದರೆ ಈ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

author img

By ETV Bharat Karnataka Team

Published : Jun 10, 2024, 3:58 PM IST

Updated : Jun 10, 2024, 5:52 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV bharat)

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಚುನಾವಣಾ ಫಲಿತಾಂಶ ಗಮನಿಸಿದರೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ, ಸೋಲಿಗೆ ಅನೇಕ ಕಾರಣಗಳಿವೆ ಎಂದರು.

ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನ ಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

ಕ್ಷಮೆ ಕೇಳಿದ್ದು ಸಿಎಂ ದೊಡ್ಡ ಗುಣ: ಭಾನುವಾರ ಬೆಳಗಾವಿ ನಾಯಕರ ಭೇಟಿ ವೇಳೆ, ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕ್ಷಮೆ ಕೇಳಿದ್ದು ಮುಖ್ಯಮಂತ್ರಿಯವರ ದೊಡ್ಡ ಗುಣ ಎಂದು ಹೇಳಿದರು. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ನಡುವಿನ ವಾಕ್ಸಮರಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಾವು ಯಾರೊಬ್ಬರ ಪರವಾಗಿ ಇಲ್ಲ, ಇಬ್ಬರ ಪರವಾಗಿಯೂ ಇದ್ದೇನೆ. ಇಬ್ಬರೂ ದೊಡ್ಡ ನಾಯಕರು, ಒಟ್ಟಿಗೆ ಕುಳಿತು ಮಾತಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಈ ವೇಳೆ ಸಚಿವರು ಮನವಿ ಮಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಪುತ್ರ ಮೃಣಾಲ್​ ಹೆಬ್ಬಾಳ್ಕರ್ ಸ್ಪರ್ಧಿಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಸೋಲನುಭವಿಸಿದ್ದಾರೆ. ಪುತ್ರನ ಗೆಲುವಿಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದರೂ ಜಯ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಸಂಪುಟ ದರ್ಜೆ ಸಚಿವ ಸ್ಥಾನ ಮಿಸ್, ಮತ್ತೊಮ್ಮೆ ರಾಜ್ಯ ಖಾತೆ: ಶೋಭಾ ಕರಂದ್ಲಾಜೆ ಹೇಳಿದ್ದೇನು? - Shobha Karandlaje

Last Updated : Jun 10, 2024, 5:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.