ETV Bharat / state

ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಮನವಿ: ಕೆಇಎ ಜೊತೆ ಚರ್ಚಿಸಿ ಕ್ರಮ ಎಂದ ಗೃಹ ಸಚಿವ ಪರಮೇಶ್ವರ್ - PSI Exam - PSI EXAM

ಪಿಎಸ್​ಐ ಪರೀಕ್ಷೆ ಮುಂದೂಡುವಂತೆ ಮಾಜಿ ಸಿಎಂ ಅಶ್ವತ್ಥ ನಾರಾಯಣ ಮತ್ತು ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗವು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡಿತು.

ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್ (ETV Bharat)
author img

By ETV Bharat Karnataka Team

Published : Sep 10, 2024, 4:24 PM IST

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ ತಿಳಿಸಿದರು.

ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ‌ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ 100ಕ್ಕೂ ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ - ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.

ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು‌ ಹೇಗೆ ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಗೂ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು‌.

ಇದನ್ನೂ ಓದಿ: ಕೆಪಿಎಸ್​​ಸಿ ಪೂರ್ವಭಾವಿ ಪರೀಕ್ಷೆ ಗೊಂದಲ: ಮರುಪರೀಕ್ಷೆ ನಡೆಸಲು ಸಿಎಂ ಸೂಚನೆ - KPSC EXAM ISSUE

ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ ಎಂದರು.

ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ಪರಿಶೀಲಿಸುತ್ತಿದ್ದೇವೆ. ಸರ್ಕಾರಕ್ಕೆ ಯಾರ ಮೇಲೂ ಸಾಫ್ಟ್‌ಕಾರ್ನರ್ ಇಲ್ಲ‌. ದ್ವೇಷದ ರಾಜಕಾರಣ ಮಾಡಬಾರದು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ದ್ವೇಷದ ರಾಜಕಾರಣ ಮುಂದುವರಿಸಿದರೆ, ನಾವು ಅದನ್ನೇ ಮಾಡಬೇಕಾಗುತ್ತದೆ ಎಂದು ಹೇಳಿದರು.

ಭಾಸ್ಕರ್ ರಾವ್ ಹೇಳಿಕೆಗೆ ಪ್ರತಿಕ್ರಿಯಿಸುವುದು ಅಷ್ಟು ಸಮಂಜಸವಲ್ಲ. ಅವರು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದವರು. ಆಗ ಸಿಸಿಬಿ ಇತ್ತಲ್ಲವೇ. ಆಗ ಭಾಸ್ಕರ್ ರಾವ್ ವಸೂಲಿ ಮಾಡಲು ಇಟ್ಟಿಕೊಂಡಿದ್ದರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ದೊಡ್ಡ ಮಟ್ಟದ ಪ್ರಕರಣಗಳನ್ನು ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯಲ್ಲಿ ರಾಜ್ಯ ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಆರೋಪಿಯ ಸುಳಿವು ಪತ್ತೆಹಚ್ಚಿದ್ದು ರಾಜ್ಯ ಪೊಲೀಸರು. ನಂತರ ತನಿಖೆಗೆ ಎನ್‌ಐಎ ಬಂದಿದೆ. ಅವರಿಗೆ ಪ್ರಾಥಮಿಕ ಮಾಹಿತಿ ನೀಡಿದ್ದು ರಾಜ್ಯ ಪೊಲೀಸರು. ನಮ್ಮ ಪೊಲೀಸರು ನೀಡಿದ ಮಾಹಿತಿ ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲು ಎನ್‌ಐಎಗೆ ಸಹಾಯವಾಗಿದೆ. ರೇಣುಕಾಸ್ವಾಮಿ‌ ಕೊಲೆ ಪ್ರಕರಣದಲ್ಲಿಯೂ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಸುಮ್ಮನೇ ಆರೋಪಿಸಿದರೆ ಅವರ ಕತೆ ತೆಗೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಪಟ್ಟಿಯಲ್ಲಿನ ದರ್ಶನ್ ವಿರುದ್ಧದ ರಹಸ್ಯ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ - Renukaswamy Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.