ETV Bharat / state

ಪಕ್ಷದಲ್ಲಿ ಗೊಂದಲ ಇರುವುದು ನಿಜ: ಶ್ರೀರಾಮುಲು, ಜನಾರ್ದನರೆಡ್ಡಿ ಜೊತೆ ಚರ್ಚಿಸುತ್ತೇವೆ: ಆರ್.ಅಶೋಕ್ - R ASHOK

ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ashok
ಆರ್.ಅಶೋಕ್ (ETV Bharat)
author img

By ETV Bharat Karnataka Team

Published : Jan 23, 2025, 10:27 PM IST

ಬೆಂಗಳೂರು: ''ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ'' ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ. ನಾನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ. ಆದರೂ ದೂರು ನೀಡಿದ್ದೇನೆ ಎಂದು ಸುಳ್ಳಾಗಿ ಪತ್ರಿಕೆಯಲ್ಲಿ ಬರೆಯಲಾಗಿದೆ. ಒಕ್ಕಲಿಗರು ಪ್ರತ್ಯೇಕವಾಗಿ ಸಭೆ ಮಾಡಿಲ್ಲ ಅಥವಾ ಗುರುತಿಸಿಕೊಂಡಿಲ್ಲ. ಇದು ಕೂಡ ಸುಳ್ಳು ಸುದ್ದಿ'' ಎಂದರು.

ಲೋಕಾಯುಕ್ತರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ''ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಶ್ರೀರಾಮುಲು ವಿರುದ್ಧ ಛಾಡಿ ಹೇಳಿಲ್ಲ, ಅವರು ಶತ್ರುಗಳ ಜೊತೆ ಕೈ ಜೋಡಿಸಿರುವುದು ವಿಪರ್ಯಾಸ: ಜನಾರ್ದನ ರೆಡ್ಡಿ

''ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಇದನ್ನೂ ಓದಿ: ನಾನು ಯಾರದೋ ಒಬ್ಬರ ಆಶೀರ್ವಾದದಿಂದ ಬೆಳೆದಿಲ್ಲ, ನಮ್ಮದೂ ರಾಜಕೀಯ ಕುಟುಂಬ: ಜನಾರ್ದನ ರೆಡ್ಡಿ ಹೇಳಿಕೆ ಸರಿಯಲ್ಲ: ಶ್ರೀರಾಮುಲು

''ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ, ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ'' ಎಂದು ಹೇಳಿದರು.

ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಸಿಬಿಐ ತನಿಖೆಗೆ ವಹಿಸಬೇಕು: ''ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ'' ಎಂದು ಅಶೋಕ್ ಹೇಳಿದರು.

''ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ'' ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ ಒತ್ತಡಕ್ಕೆ ಮಣಿದು ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಂದ ಕ್ಲೀನ್ ಚಿಟ್ ಸಾಧ್ಯತೆ : ಬಿ ವೈ ವಿಜಯೇಂದ್ರ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.