ಬೆಂಗಳೂರು: "ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಯಡಿಯೂರಪ್ಪನವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಶುಭಾಶಯ ಕೋರಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
"ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದವರು. ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಸಮುದಾಯಗಳಿಗೂ ಕಾರ್ಯಕ್ರಮ ಕೊಟ್ಟರು. ಕೆಳಸ್ತರದವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ಕೊಟ್ಟರು" ಎಂದು ಮೆಚ್ಚುಗೆ ಸೂಚಿಸಿದರು.
"ಜನ ಯಡಿಯೂರಪ್ಪರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ. ಇವತ್ತು ಕಾಂಗ್ರೆಸ್ ದುರಾಡಳಿತಕ್ಕೆ ಉತ್ತರ ಕೊಡಬೇಕಾದ್ರೆ ನಾವೆಲ್ಲರೂ ಮತ್ತೊಮ್ಮೆ ಒಂದಾಗಿ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು. ಈ ಮೂಲಕ ಮತ್ತೊಮ್ಮೆ ಜನಪರವಾದ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು" ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.
ಇದನ್ನೂ ಓದಿ: ಬಣ ಬಡಿದಾಟ ಗಮನಿಸುತ್ತಿರುವ ಹೈಕಮಾಂಡ್ ಎಲ್ಲವನ್ನು ಸರಿಪಡಿಸುತ್ತೆ : ಮಾಜಿ ಸಚಿವ ಶ್ರೀರಾಮುಲು - FORMER MINISTER SRIRAMULU