ETV Bharat / state

ಚನ್ನಗಿರಿ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ಕ್ರಮ: ಡಿಕೆಶಿ - DCM DK Shivakumar - DCM DK SHIVAKUMAR

ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : May 27, 2024, 5:26 PM IST

ಬೆಂಗಳೂರು: ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹ ಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ತನಿಖೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದೇಶದ ಒಳಗಾಗದರೆ ರಾಜ್ಯ ಸರ್ಕಾರ ಏನುಬೇಕಾದರೂ ಕ್ರಮ ಕೈಗೊಳ್ಳಬಹುದು. ವಿದೇಶದ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ ಹೆಚ್ಚು ಕಾರ್ಯಪ್ರವೃತ್ತವಾಗಬೇಕು. ನಮ್ಮ ಗೃಹ ಸಚಿವರು ಈ ಪ್ರಕರಣ ತನಿಖೆಯನ್ನು ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ ಡಿ.ಕೆ.ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಹೋಗುವುದು ನನ್ನ ಕರ್ತವ್ಯ. ಹೀಗಾಗಿ ಹೋಗುತ್ತೇನೆ ಎಂದರು.

ಇದನ್ನೂ ಓದಿ: ಮೇ 31ರಂದು ವಿಚಾರಣೆಗೆ ಹಾಜರಾಗುತ್ತೇನೆ: ವಿದೇಶದಿಂದ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಪ್ರಜ್ವಲ್ ರೇವಣ್ಣ - MP Prajwal Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.