ETV Bharat / state

ಏಪ್ರಿಲ್ 12ರಿಂದ ರಾಜ್ಯದಲ್ಲಿ ಮಳೆಯ ಸಿಂಚನ: ಹವಾಮಾನ ಇಲಾಖೆ ಮುನ್ಸೂಚನೆ - Weather Report

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12 ರಿಂದ ಏ.15ರವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

weather-report-by-meteorological-department
ರಾಜ್ಯದಲ್ಲಿ ಏಪ್ರಿಲ್ 12 ರಿಂದ ಮಳೆಯ ಸಿಂಚನ: ಹವಾಮಾನ ಇಲಾಖೆ ಮುನ್ಸೂಚನೆ
author img

By ETV Bharat Karnataka Team

Published : Apr 8, 2024, 10:28 PM IST

ಬೆಂಗಳೂರು: ಬಿಸಿಲಿನ ಹೊಡೆತಕ್ಕೆ ತತ್ತರಿಸಿರುವ ರಾಜ್ಯದಲ್ಲಿ ಏ.12ರಿಂದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಬೆಂ.ಗ್ರಾಮಾಂತರ, ಹಾಸನ,ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಏ.12 ರಿಂದ ಏ.15ರವರೆಗೆ ಮಳೆ ಬೀಳಲಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಏ.14, ಏ.15ರಂದು ಹಗುರದಿಂದ ಕೂಡಿದ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಸೋಮವಾರ 8 ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಗಡಿ ದಾಟಿದೆ. ಸುಮಾರು 18 ಜಿಲ್ಲೆಗಳಲ್ಲಿ 37 ರಿಂದ 39 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿ ತಾಪಮಾನ ದಾಖಲಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ತಾಪಮಾನ ವಾಡಿಕೆಯಷ್ಟೇ ಇದೆ. ಆದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ ಎಂದು ತಿಳಿಸಿದೆ.

ಅತಿ ಹೆಚ್ಚಿನ ತಾಪಮಾನ ಬಳ್ಳಾರಿಯಲ್ಲಿ 43.3, ಕಲಬುರಗಿ 42.7, ರಾಯಚೂರು 41.1, ಬಾಗಲಕೋಟೆ 40.5, ಕೊಪ್ಪಳ 40.3, ವಿಜಯಪುರ 40, ತುಮಕೂರು 40.5 ಉಷ್ಣಾಂಶ ದಾಖಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಐದು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 37ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದ್ದು, ಶುಷ್ಕ ವಾತಾವರಣ ಇರಲಿದೆ. ಕನಿಷ್ಠ ಉಷ್ಣಾಂಶ 23 ಡಿ.ಸೆ.ಇರಲಿದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಬಿಸಿಗಾಳಿ: ಹವಾಮಾನ ಇಲಾಖೆ - Heatwave

ETV Bharat Logo

Copyright © 2024 Ushodaya Enterprises Pvt. Ltd., All Rights Reserved.