ETV Bharat / state

ಪ್ರಯಾಣಿಕರ ಗಮನಕ್ಕೆ: ರಿಷಿಕೇಶ್-ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ರೈಲು - SPECIAL TRAIN

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಯೋಗ ನಗರಿ ರಿಷಿಕೇಶ್ - ಎಸ್ಎಸ್ಎಸ್ ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ರೈಲು ಸಂಚಾರ ಆರಂಭಿಸಲಾಗುತ್ತಿದೆ.

WEEKLY SPECIAL EXPRESS TRAIN
ಶ್ರೀ ಸಿದ್ದಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ (ETV Bharat)
author img

By ETV Bharat Karnataka Team

Published : Jan 4, 2025, 7:24 AM IST

ಹುಬ್ಬಳ್ಳಿ: ರೈಲು ಸಂಖ್ಯೆ 07363 ಎಸ್ಎಸ್ಎಸ್ (ಶ್ರೀ ಸಿದ್ದಾರೂಢ ಸ್ವಾಮೀಜಿ) ಹುಬ್ಬಳ್ಳಿ - ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ಜನವರಿ 06ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & 27, ಮತ್ತು ಫೆಬ್ರವರಿ 03,10 & 24, 2025 ರಂದು ಹೊರತುಪಡಿಸಿ ಬುಧವಾರ 23:30 ಗಂಟೆಗೆ ಯೋಗ ನಗರಿ ರಿಷಿಕೇಶ್ ತಲುಪಲಿದೆ.

ರೈಲು ಸಂಖ್ಯೆ 07364 ಯೋಗ ನಗರಿ ರಿಷಿಕೇಶ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ಜನವರಿ 09ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಗುರುವಾರ 06:15 ಗಂಟೆಗೆ ಹೃಷಿಕೇಶದಿಂದ ಹೊರಟು ಜನವರಿ 16 & 30 ಮತ್ತು ಫೆಬ್ರವರಿ 06, 13 & 27, 2025 ಹೊರತುಪಡಿಸಿ ಶನಿವಾರ 06:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯನ್ನು ತಲುಪಲಿದೆ.

ಈ ವಿಶೇಷ ಎಕ್ಸ್​ಪ್ರೆಸ್​ ರೈಲು ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ ನಗರ, ಕೋಪರ್ಗಾಂವ್, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಹರ್ದಾ, ಇಟಾರ್ಸಿ ಜಂಕ್ಷನ್, ರಾಣಿ ಕಮಲಪತಿ, ಬೀನಾ ಜಂಕ್ಷನ್, ವಿರಂಗನಾ ಲಕ್ಷ್ಮಿಬಾಯಿ ಝಾನ್ಸಿ ರೈಲ್ವೆ ನಿಲ್ದಾಣ, ಗ್ವಾಲಿಯರ್ ಜಂಕ್ಷನ್, ಆಗ್ರಾ ಕಂಟೋನ್ಮೆಂಟ್, ಮಥುರಾ ಜಂಕ್ಷನ್, ಹಜರತ್ ನಿಜಾಮುದ್ದೀನ್ ಜಂಕ್ಷನ್, ಗಾಜಿಯಾಬಾದ್ ಜಂಕ್ಷನ್, ಮೀರತ್ ಸಿಟಿ ಜಂಕ್ಷನ್, ಮುಜಾಫರ್ ನಗರ, ದಿಯೋಬಂದ್, ತಾಪ್ರಿ ಜಂಕ್ಷನ್, ರೂರ್ಕಿ ಮತ್ತು ಹರಿದ್ವಾರ ನಿಲ್ದಾಣಗಲ್ಲಿ ನಿಲುಗಡೆ ಹೊಂದಿದೆ.

ಈ ವಿಶೇಷ ರೈಲು ನಾಲ್ಕು ಎಸಿ -3 ಟೈರ್ ಸ್ಲೀಪರ್ ಮತ್ತು ಎರಡು ಗಾರ್ಡ್ಸ್ ಬ್ರೇಕ್ ವ್ಯಾನ್ ಮತ್ತು ಎಂಟು ಎಸಿ -3 ಟೈರ್ ಸೇರಿದಂತೆ 14 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು: ಕುಂಭಮೇಳಕ್ಕಾಗಿ ಮೈಸೂರಿನಿಂದಲೂ ಟ್ರೇನ್ - SPECIAL TRAIN SERVICE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.