ETV Bharat / state

ಮುಂದಿನ 5 ವರ್ಷಗಳ ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯ ಅಂಶಗಳೇನು? - NEW INDUSTRIAL POLICY

ಉದ್ಯಮ ಬೆಳವಣಿಗೆಗಾಗಿ ರೂಪಿಸಿರುವ ಕೈಗಾರಿಕಾ ನೀತಿಯ ಅಂಶಗಳನ್ನ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿವರಿಸಿದ್ದಾರೆ.

what-are-the-elements-of-the-new-industrial-policy-designed-for-industrial-growth-over-the-next-five-years
ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಮತ್ತು ಇತರರು (ETV Bharat)
author img

By ETV Bharat Karnataka Team

Published : Feb 11, 2025, 11:02 PM IST

ಬೆಂಗಳೂರು : ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅನಾವರಣಗೊಳಿಸಲಾಗಿದೆ. ಹೊಸ‌‌ ನೀತಿಯಲ್ಲಿ ಈ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ವಿವರಿಸಿದ್ದಾರೆ.

ಈ ನೀತಿಯಲ್ಲಿ ಡಿ. ಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲೂಕುಗಳನ್ನು ಝೋನ್-1 ಮತ್ತು 2ರಡಿ ತರಲಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು `ಝೋನ್-3’ ಎಂದು ಗುರುತಿಸಲಾಗಿದೆ. ಉದ್ಯಮಗಳ ಸಾಮರ್ಥ್ಯ ಮತ್ತು ಬೆಳವಣಿಗೆ ನಿಚ್ಚಳತೆಗೆ ಅನುಗುಣವಾಗಿ ವಲಯಗಳನ್ನಾಗಿ ಮಾಡಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಆದ್ಯತೆ ಇರುವಂತೆ ಎಚ್ಚರ ವಹಿಸಲಾಗಿದೆ ಎಂದು ಹೇಳಿದರು.

ಹೈಟೆಕ್ ತಯಾರಿಕೆ ವಲಯದಲ್ಲಿ ರಾಜ್ಯವನ್ನು ದೇಶದಲ್ಲೇ ಪ್ರಥಮ ಸ್ಥಾನಕ್ಕೆ ಏರುವಂತೆ ಮಾಡಲಾಗುವುದು. ಜೊತೆಗೆ ಸುಸ್ಥಿರ, ಪರಿಸರಸ್ನೇಹಿ, ಸಮತೋಲಿತ ಮತ್ತು ಎಲ್ಲರನ್ನೂ ಒಳಗೊಳ್ಳಲಿರುವ ಪ್ರಾದೇಶಿಕ ಬೆಳವಣಿಗೆಯನ್ನು ಉತ್ತೇಜಿಸಲಾಗುವುದು. ಕೈಗಾರಿಕಾ ಕ್ಷೇತ್ರದಲ್ಲಿ ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದ ಮೂಲಕ ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿ ಪಡಿಸುವಂತಹ ವ್ಯವಸ್ಥೆ ಮುಂದೆ ಬರಲಿದೆ. ಭಾರಿ ಹೂಡಿಕೆ ಇರುವ ಕೈಗಾರಿಕಾ ಯೋಜನೆಗಳ ವ್ಯಾಪ್ತಿಯಲ್ಲಿ ಡಾರ್ಮಿಟರಿ ಮತ್ತು ವಸತಿ ವ್ಯವಸ್ಥೆಗೆ ಸರ್ಕಾರ ಕೈಜೋಡಿಸಲಿದೆ ಎಂದು ಅವರು ವಿವರಿಸಿದರು.

ಸಂಶೋಧನೆ ಮತ್ತು ಎಂಎಸ್ಎಂಇಗೆ ಗಮನ : ನೂತನ ಕೈಗಾರಿಕಾ ನೀತಿಯಲ್ಲಿ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆಯ ಅಭಿವೃದ್ಧಿಗೆ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸಲಾಗುವುದು. ಕೆಐಎಡಿಬಿ ಮೂಲಕ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇಕಡ 30ರಷ್ಟು ಜಾಗವನ್ನು ಮೀಸಲಿಟ್ಟು, ತಂತ್ರಜ್ಞಾನದ ಉನ್ನತೀಕರಣ, ಕೌಶಲ್ಯಾಭಿವೃದ್ಧಿ, ಉತ್ಕೃಷ್ಟತಾ ಪುರಸ್ಕಾರ, ಕ್ಲಸ್ಟರ್ಸ್ ಅಭಿವೃದ್ಧಿ, ಆಕರ್ಷಕ ಪ್ರೋತ್ಸಾಹ ಭತ್ಯೆ ಮತ್ತು ರಿಯಾಯಿತಿಗಳಿಗೆ ಗಮನಹರಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

ಕೆಲವು ಪ್ರದೇಶಗಳನ್ನು 'ವಿಶೇಷ ಹೂಡಿಕೆ ಪ್ರದೇಶ’ (ಸ್ಪೆಷಲ್ ಇನ್ವೆಸ್ಟ್ಮೆಂಟ್ ರೀಜನ್) ಆಗಿ ಘೋಷಿಸಿ, ಉದ್ಯಮಗಳ ಆರ್ & ಡಿ ವಿಭಾಗ ಮತ್ತು ಉತ್ಪಾದನಾ ಘಟಕಗಳು ಒಂದೇ ಕಡೆ ಇರುವುದನ್ನು ಉತ್ತೇಜಿಸಲಾಗುವುದು. ಹೂಡಿಕೆದಾರರು ತಮ್ಮ ಕೇಪೆಕ್ಸ್ ಸಬ್ಸಿಡಿ ಅಥವಾ ಉತ್ಪಾದನೆ ಆಧಾರಿತ ಪ್ರೋತ್ಸಾಹ ಭತ್ಯೆ ನಡುವೆ ತಮಗೆ ಯಾವುದು ಅನುಕೂಲವೋ ಅದನ್ನು ಆರಿಸಿಕೊಳ್ಳಲು ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದರು.

ಖಾಸಗಿ ಕೈಗಾರಿಕಾ ಪ್ರದೇಶಗಳಿಗೂ ಅವಕಾಶ : ನೂತನ ಕೈಗಾರಿಕಾ ನೀತಿಯಡಿಯಲ್ಲಿ ಖಾಸಗಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೂ ಅವಕಾಶ ಇರಲಿದೆ. ಇದರಂತೆ ಸಮಗ್ರ ಕೈಗಾರಿಕಾ ಪಾರ್ಕ್, ವಲಯವಾರು ಪಾರ್ಕ್, ಲಾಜಿಸ್ಟಿಕ್ಸ್ ಪಾರ್ಕ್ ಇತ್ಯಾದಿಗಳ ಅಭಿವೃದ್ಧಿ ಮಾಡಲಾಗುವುದು. ಜತೆಗೆ ಕೈಗಾರಿಕಾ ಪ್ರದೇಶಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಈಗಿರುವ ನಿರ್ಬಂಧಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶ ಎರಡರಲ್ಲೂ ತೆಗೆದು ಹಾಕಲಾಗುವುದು. ಜತೆಗೆ ನೇರ ಉದ್ಯೋಗ ಸೃಷ್ಟಿಗೆ ನೀತಿಯು ಒತ್ತು ಕೊಟ್ಟಿದೆ.

ಹಿಂದುಳಿದ ಜಿಲ್ಲೆ/ತಾಲೂಕಿಗೆ ರಿಯಾಯಿತಿ/ಭತ್ಯೆ : ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲೂಕುಗಳಲ್ಲಿ ಹೂಡಿಕೆ ಮಾಡಿ, ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ನೂತನ ಕೈಗಾರಿಕಾ ನೀತಿಯಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು. ಅವು ಹೀಗಿವೆ:

  • ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇ 10 ರಿಂದ 30ರಷ್ಟು ಕ್ಯಾಪಿಟಲ್ ಸಬ್ಸಿಡಿ.
  • ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿನಾಯಿತಿ.
  • ಭೂ ಪರಿವರ್ತನೆ ಶುಲ್ಕ ವಾಪಸ್.
  • ಎಂಎಸ್ಎಂಇಗಳಿಗೆ ವಿದ್ಯುತ್ ಬಿಲ್ ಮೇಲಿನ ತೆರಿಗೆಯಿಂದ ವಿನಾಯಿತಿ.
  • ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ವಿದ್ಯುತ್ ಸಬ್ಸಿಡಿ
  • ಮಳೆ ನೀರು ಸಂಸ್ಕರಣೆ ಮತ್ತು ತ್ಯಾಜ್ಯ ನೀರು ಮರುಪೂರಣಕ್ಕೆ ಪ್ರೋತ್ಸಾಹ ಭತ್ಯೆ
  • ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಭತ್ಯೆ.
  • ಮೆಗಾ ಯೋಜನೆಗಳಿಗೆ ಸಿಗುವ ಸೌಲಭ್ಯ ; ಪಿಎಲ್ಐ ಅಥವಾ ವಿಎಫ್ಎನ ಶೇ 10 ರಿಂದ 25ರಷ್ಟು ಬಂಡವಾಳ ವೆಚ್ಚ ಸಬ್ಸಿಡಿ.
  • ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ಹಿಂದುಳಿದ ಮತ್ತು ಅತೀ ಹಿಂದುಳಿದ ತಾಲೂಕುಗಳಲ್ಲಿನ ಹೂಡಿಕೆಗೆ ಕ್ರಮವಾಗಿ ಶೇಕಡ 3 ಮತ್ತು ಶೇಕಡ 5 ರಷ್ಟು ಹೆಚ್ಚುವರಿ ಸಬ್ಸಿಡಿ.
  • ಖಾಸಗಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ಪ್ರೋತ್ಸಾಹನ ಭತ್ಯೆ ಮತ್ತು ರಿಯಾಯಿತಿ.
  • ಉದ್ಯೋಗಸೃಷ್ಟಿ ಮತ್ತು ಮಹಿಳಾ ಉದ್ಯೋಗಿಗಳ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಸಬ್ಸಿಡಿ.
  • ಆರ್ & ಡಿ ಜತೆಗೆ ಉತ್ಪಾದನಾ ಘಟಕ ಸ್ಥಾಪನೆಗೆ ಉತ್ತೇಜನ.
  • ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ ವಿನಾಯಿತಿ
  • ಭೂ ಪರಿವರ್ತನೆ ಶುಲ್ಕ ವಾಪಸ್.

ಇದನ್ನೂ ಓದಿ: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆಗಳು ಲಭ್ಯ: ಏಕಗವಾಕ್ಷಿ ಪೋರ್ಟಲ್​​ಗೆ ಸಿಎಂ ಚಾಲನೆ - SINGLE WINDOW PORTAL

ETV Bharat Logo

Copyright © 2025 Ushodaya Enterprises Pvt. Ltd., All Rights Reserved.