ETV Bharat / state

ಕೇಂದ್ರದ ಬಜೆಟ್​ನಲ್ಲಿ ರಾಜ್ಯದ ಕೃಷಿ - ಕೈಗಾರಿಕೆ ವಲಯಗಳ ನಿರೀಕ್ಷೆಗಳೇನು? - CENTRAL BUDGET 2025

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ರಾಜ್ಯ ಕೃಷಿ ಹಾಗೂ ಕೈಗಾರಿಕೆ ವಲಯ ಭಾರಿ ನಿರೀಕ್ಷೆಗಳನ್ನ ಹೊಂದಿದೆ.

Agricultural Activities
ಕೃಷಿ ಚಟುವಟಿಕೆ (IANS)
author img

By ETV Bharat Karnataka Team

Published : Jan 28, 2025, 7:59 PM IST

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯದ ಕೃಷಿ ಹಾಗೂ ಕೈಗಾರಿಕೆ ವಲಯಗಳಲ್ಲಿ ಭಾರಿ ನಿರೀಕ್ಷೆಗಳಿವೆ.

ಭಾರತದ ಆರ್ಥಿಕತೆ ಬೆಳೆದರೂ, ಕೃಷಿ ಕ್ಷೇತ್ರ ಬಹುತೇಕ ಸ್ವಾವಲಂಬನೆ ಸಾಧಿಸಿದರೂ ರೈತರ ಬದುಕು ಮಾತ್ರ ಹಸನಾಗಿಲ್ಲ. ದೇಶದ ಕಾರ್ಮಿಕ ಜನಸಂಖ್ಯೆಯ ಶೇ. 45ರಷ್ಟು ಜನರು ಕೃಷಿ ಕ್ಷೇತ್ರದಲ್ಲಿ ಇದ್ದರಾದರೂ ಈ ಕ್ಷೇತ್ರದಿಂದ ಜಿಡಿಪಿಗೆ ಆಗುತ್ತಿರುವ ಕೊಡುಗೆ ಶೇ. 15 ಮಾತ್ರ. ಆ ಮಟ್ಟಿಗೆ ಕೃಷಿಗಾರಿಕೆ ಲಾಭ ಕಾಣದಾಗಿದೆ. ಕೃಷಿ ಕ್ಷೇತ್ರವು ಈ ಬಾರಿಯ ಬಜೆಟ್​ನಲ್ಲಿ ಕೆಲ ಪ್ರಮುಖ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.

ಶೇ.1ರ ಬಡ್ಡಿದರದಲ್ಲಿ ಕೃಷಿ ಸಾಲ ಕೊಡಬೇಕು, ಪಿಎಂ ಕಿಸಾನ್ ಹಣವನ್ನು ದುಪ್ಪಟ್ಟು ಮಾಡಬೇಕು. ಪಿಎಂ ಫಸಲ್ ಭೀಮಾ ಯೋಜನೆ ಅಡಿ ಎಲ್ಲಾ ಸಣ್ಣ ರೈತರಿಗೂ ಉಚಿತವಾಗಿ ಬೆಳೆ ವಿಮೆ ಒದಗಿಸಬೇಕು. ಕೃಷಿ ಯಂತ್ರೋಪಕರಣ, ರಸಗೊಬ್ಬರ, ಬೀಜಗಳಿಗೆ ಜಿಎಸ್​ಟಿಯಿಂದ ವಿನಾಯಿತಿ ಕೊಡುವುದು ಸೇರಿದಂತೆ ಹಲವು ಬೇಡಿಕೆಗಳು ಇವೆ.

ಕಿಸಾನ್ ಕ್ರೆಡಿಟ್ ಕಾರ್ಡ್​ನಲ್ಲಿ ಸಾಲ ಪ್ರಮಾಣ ಹೆಚ್ಚಳವಾಗುವ ನಿರೀಕ್ಷೆ ಇದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ರೈತರು 3 ಲಕ್ಷ ರೂ. ವರೆಗೆ ಸಾಲ ಪಡೆಯಬಹುದು. ಈ ಬಾರಿ ಇದರ ಮಿತಿಯನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತದೆ. ಈ ಮೊತ್ತವನ್ನು 8 ಸಾವಿರ ರೂ.ಗೆ ಹೆಚ್ಚಿಸುವ ನಿರೀಕ್ಷೆ ಇದೆ. ಕೃಷಿ ಯಂತ್ರೋಪಕರಣಗಳಿಗೆ ಜಿಎಸ್​ಟಿ ದರವನ್ನು ಕನಿಷ್ಠ ಮಟ್ಟಕ್ಕೆ ಇಳಿಸಬೇಕೆನ್ನುವ ಕೂಗಿದೆ. ಬಜೆಟ್​ನಲ್ಲಿ ಇದನ್ನು ಪರಿಗಣಿಸುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ.

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್​ಗಳು ಮತ್ತು ಅಗ್ರಿಟೆಕ್ ಕಂಪನಿಗಳಿಗೆ ಉತ್ತೇಜನ ಸಿಗಬಹುದು. ಆಹಾರ ಮತ್ತು ರಸಗೊಬ್ಬರಗಳಿಗೆ ಸಬ್ಸಿಡಿ ಮುಂದುವರಿಯಬಹುದು ಅಥವಾ ಹೆಚ್ಚಳ ಆಗುವ ನಿರೀಕ್ಷೆ ಇದೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ.

'ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿ ಮನವಿ ಮಾಡಲಾಗಿದೆ' ಎಂದು ಜೆಡಿಎಸ್​ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಈ ಬಜೆಟ್​ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತ ಬೇಕಿದೆ.

ಕೈಗಾರಿಕೆಗಳ ನಿರೀಕ್ಷೆಗಳೇನು? : ಫೆ. 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್​ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಳ ಮಾಡಬಹುದೆಂಬ ನಿರೀಕ್ಷೆ ಜನರಲ್ಲಿದೆ. ತೆರಿಗೆ ಮಿತಿಯನ್ನು ಹೆಚ್ಚಳ ಮಾಡುವುದರಿಂದ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕಳೆದ ಬಾರಿ ಬಜೆಟ್​ನಲ್ಲಿ ಘೋಷಿಸಿದಂತೆ ಯುವ, ವಿದ್ಯಾವಂತರಿಗೆ ಕೆಲವೊಂದು ಪ್ರೋತ್ಸಾಹಕರ ಯೋಜನೆಗಳು, ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡುವ ನಿರೀಕ್ಷೆಯಿದೆ. ಅದಲ್ಲದೆ ಎಂದಿನಂತೆ ಸ್ವದೇಶಿ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವಂತಹ ಯೋಜನೆಗಳು ಬರಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಗೆ ಜೀವ ಉಳಿಸುವ ಔಷಧಿಗಳಿಗೆ ತೆರಿಗೆಯಿಂದ ವಿನಾಯಿತಿ ನೀಡುವಂತೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಬೇಡಿಕೆ ಇಟ್ಟಿದ್ದಾರೆ. ಹೆಚ್ಚುವರಿಯಾಗಿ, ವೈದ್ಯಕೀಯ ಆಮದುಗಳ ಮೇಲಿನ ತೆರಿಗೆಗಳು ಸಹ ಕಾಳಜಿಯ ಪ್ರಮುಖ ಕ್ಷೇತ್ರವಾಗಿದೆ. ಏಕೆಂದರೆ ದೀರ್ಘಕಾಲದ ಕಾಯಿಲೆಗೆ ಔಷಧಿಗಳ ಆಮದುಗಳು 12% ತೆರಿಗೆ ದರವನ್ನು ಆಕರ್ಷಿಸುತ್ತವೆ ಮತ್ತು ವೈದ್ಯಕೀಯ ಉಪಕರಣಗಳ ಮೇಲಿನ ದರವು 36% ವರೆಗೆ ಹೋಗಬಹುದು.
ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50 ರಷ್ಟು ಉತ್ಪಾದನೆ ಪಾಲು ಹೊಂದಿದೆ. ಯಂತ್ರೋಪಕರಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ತಂತ್ರಜ್ಞಾನದ ಉನ್ನತೀಕರಣ, ಕೌಶಲ್ಯ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ. ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯವು ತುಮಕೂರಿನಲ್ಲಿ ಮಷಿನ್ ಅಂಡ್ ಟೂಲ್ ಪಾರ್ಕ್ ಸ್ಥಾಪನೆಗೆ ಉತ್ತೇಜನ ನೀಡಿದೆ.

ಈ ಬಾರಿ ಬಜೆಟ್​ನಲ್ಲಿ ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿ- 2025 ರೂಪಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿಯು ನಾವೀನ್ಯತೆಯನ್ನು ಉತ್ತೇಜಿಸಲು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ವ್ಯವಸ್ಥಿತವಾದ ಚೌಕಟ್ಟನ್ನು ಒದಗಿಸುತ್ತದೆ.

ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು 15,000 ಕೋಟಿ ರೂ.ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿದ್ದರು.

ಅದೇ ರೀತಿ ಈ ಬಜೆಟ್​ನಲ್ಲಿ ಇದರ ಬಗ್ಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ಬಜೆಟ್​ನಲ್ಲಿ ಘೋಷಣೆ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದಲ್ಲಿ ವಿಲೀನ ಮಾಡುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ಸಹ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಬೆಂಗಳೂರಿನ ಯೋಜನೆಗಳಿಗೆ ಬಜೆಟ್​​ನಲ್ಲಿ​ ಅನುದಾನ ನೀಡುವಂತೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆಶಿ ಪತ್ರ - DK SHIVAKUMAR WRITES TO SITHARAMAN

ETV Bharat Logo

Copyright © 2025 Ushodaya Enterprises Pvt. Ltd., All Rights Reserved.