ETV Bharat / state

ವಿಜಯೇಂದ್ರರ ರಕ್ಷಣೆಗಾಗಿ ಮಾಣಿಪ್ಪಾಡಿ ಮಾತು ಬದಲಿಸಲು ಎಷ್ಟು 'ಆಫರ್' ಬಂದಿದೆ: ಸಚಿವ ಪ್ರಿಯಾಂಕ್​ ಖರ್ಗೆ - MINISTER PRIYANK KHARGE

ಆರಂಭದಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಹೇಳಿಕೆ ನೀಡಿದ್ದ ಅನ್ವರ್​ ಮಾಣಿಪ್ಪಾಡಿ, ಈಗ ವಿಜಯೇಂದ್ರ ಅವರನ್ನು ಕಾಪಾಡಲು ಕಾಂಗ್ರೆಸ್​ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಆರೋಪಿಸಿದ್ದಾರೆ.

Minister Priyank Kharge
ಸಚಿವ ಪ್ರಿಯಾಂಕ್​ ಖರ್ಗೆ (ETV Bharat)
author img

By ETV Bharat Karnataka Team

Published : 3 hours ago

ಬೆಂಗಳೂರು: "ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಾಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ?" ಎಂದು ಸಚಿವ ಪ್ರಿಯಾಂಕ್​​ ಖರ್ಗೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, "ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಹೆಸರನ್ನು ಮೊದಲನೇ ಬಾರಿಗೆ ಪ್ರಸ್ತಾಪಿಸಿದ್ದ ಅನ್ವರ್ ಮಾಣಿಪ್ಪಾಡಿಯವರು, ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದರು. ಈಗ ಬಿಜೆಪಿ ಅಧ್ಯಕ್ಷ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಿದ್ದಾರೆ. ಅದಕ್ಕಾಗಿ ಅವರಿಗೆ ಎಷ್ಟು ಆಫರ್ ಬಂದಿದೆ?" ಎಂದು ಪ್ರಶ್ನಿಸಿದ್ದಾರೆ.

"ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು? ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ. ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವಿಡಿಯೋಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ" ಎಂದು ಒತ್ತಾಯಿಸಿದ್ದಾರೆ.

"ಬಿಜೆಪಿ ಪಕ್ಷ, ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು, ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ. ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಾಣಿಪ್ಪಾಡಿಯವರಿಗೆ ಈಗ ಏನಾಯಿತು?" ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಣಿಪ್ಪಾಡಿ ವರದಿಯಲ್ಲಿ ಕಾಂಗ್ರೆಸ್ಸಿಗರ ಬಗ್ಗೆ ಇದೆಯೇ ಹೊರತು ಬಿಜೆಪಿಗರ ಕುರಿತು ಅಲ್ಲ; ಸಿಎಂಗೆ ವಿಜಯೇಂದ್ರ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.