ETV Bharat / state

ಹೊಸ ವರ್ಷಾಚರಣೆ : ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸಿಂಗ್ ನಿಷೇಧ - ಎಸ್​ಪಿ ಅಶೋಕ್ - WHEELING AND DRAG RACING BAN

ಹೊಸ ವರ್ಷಾಚರಣೆ ಸಂದರ್ಭದಲ್ಲಿ ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸಿಂಗ್​ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ಅಶೋಕ್ ಹೇಳಿದ್ದಾರೆ.

sp-ashok
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ (ETV Bharat)
author img

By ETV Bharat Karnataka Team

Published : Dec 30, 2024, 10:19 PM IST

ತುಮಕೂರು : ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮತ್ತು ಡ್ರ್ಯಾಗ್ ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಮೋಟಾರ್ ಸೈಕಲ್‌ನ್ನು ಮತ್ತು ಕಾರನ್ನು ಅಪಾಯಕಾರಿಯಾಗಿ ಚಾಲನೆ ಮಾಡಬಾರದು. ಸಾರ್ವಜನಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಕೆಣಕುವುದು ಮಾಡಬಾರದು ಮತ್ತು ಇತರರೊಂದಿಗೆ ಸಭ್ಯವಾಗಿ, ನಾಗರೀಕತೆಯಿಂದ ವರ್ತಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಾತನಾಡಿದರು (ETV Bharat)

ನಗರದ ಪ್ರಮುಖ ಯಾತ್ರಾ ಸ್ಥಳಗಳಾಗಿರುವ ನಾಮದ ಚಿಲುಮೆ, ದೇವರಾಯದುರ್ಗ ಹಾಗೂ ಬಸದಿಬೆಟ್ಟದ ಸ್ಥಳಗಳು, ಸಂರಕ್ಷಿತ ಅರಣ್ಯ ಪ್ರದೇಶಗಳು ಅಪಘಾತ ವಲಯಗಳಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಡಿ 31 ರಿಂದ ಜ. 2ರ ವರೆಗೆ ಪ್ರವೇಶ ನಿಷೇಧಿಸಲಾಗಿದೆ.
ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಪಿಕೇಟಿಂಗ್ ಪಾಯಿಂಟ್‌ಗಳನ್ನು ಹಾಕಲಾಗಿದೆ ಎಂದರು.

ಯಾವುದೇ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸ್ವಂತ ಫಾರಂ ಹೌಸ್‌ಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯಿಲ್ಲದೆ ರೇವ್‌ ಪಾರ್ಟಿಗಳು, ಇತರೆ ಮೋಜು ಮಸ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಮದ್ಯಪಾನ ಮಾಡಿ ಕಾರು ಅಥವಾ ಮೋಟಾರು ಸೈಕಲನ್ನು ಚಾಲನೆ ಮಾಡಬಾರದು. ಹೊಸ ವರ್ಷಾಚರಣೆಯನ್ನು ಅಪಘಾತ ಮುಕ್ತವನ್ನಾಗಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಆಚರಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ : ಏರ್​​ಪೋರ್ಟ್ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: 44 ಯುವಕರು ವಶಕ್ಕೆ, 33 ಪ್ರಕರಣ ದಾಖಲು - Bike Wheeling - BIKE WHEELING

ETV Bharat Logo

Copyright © 2025 Ushodaya Enterprises Pvt. Ltd., All Rights Reserved.