ETV Bharat / state

ರಾಷ್ಟ್ರ ರಾಜಕಾರಣಕ್ಕೆ ಹೆಚ್‌.ಡಿ.ಕುಮಾರಸ್ವಾಮಿ: ಯಾರಾಗ್ತಾರೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ? - JDS Legislative Leader

ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಹೆಚ್​.ಡಿ.ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಮೂಲಕ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ರದ್ದಾಗುತ್ತದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ, ಮುಂದಿನ ಶಾಸಕಾಂಗ ಪಕ್ಷದ ನಾಯಕ ಯಾರೆಂಬ ಚರ್ಚೆ ಶುರುವಾಗಿದೆ.

author img

By ETV Bharat Karnataka Team

Published : Jun 7, 2024, 8:21 PM IST

ಜೆಡಿಎಸ್ ನಾಯಕರು
ಜೆಡಿಎಸ್ ನಾಯಕರು (ETV Bharat)

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ‌.ಕುಮಾರಸ್ವಾಮಿ ಜಯಭೇರಿ ಗಳಿಸುವ ಮೂಲಕ ರಾಷ್ಟ್ರ ರಾಜಕಾರಣ ಪ್ರವೇಶಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತೆರುವಾಗಲಿರುವ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಯಾರು? ಎಂಬ ಚರ್ಚೆ ಪ್ರಾರಂಭವಾಗಿದೆ.

ಯಾರಾಗ್ತಾರೆ ಶಾಸಕಾಂಗ ಪಕ್ಷದ ನಾಯಕ?: ಜೆಡಿಎಸ್‌‍ನಲ್ಲಿ ಪ್ರಸ್ತುತ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಶ್ರೀನಿವಾಸಪುರ ಕ್ಷೇತ್ರದ ಶಾಸಕ ವೆಂಕಟಶಿವಾರೆಡ್ಡಿ ಹಿರಿಯ ಶಾಸಕರಾಗಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ.ಕುಮಾರಸ್ವಾಮಿ ಸಂಸದರಾಗಿದ್ದ ಸಂದರ್ಭದಲ್ಲೂ ಹೆಚ್.ಡಿ.ರೇವಣ್ಣ ಜೆಡಿಎಸ್‌‍ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿದ್ದರು.

ವೆಂಕಟಶಿವಾರೆಡ್ಡಿ ಅವರಿಗೆ ಇಂತಹ ಯಾವ ಜವಾಬ್ದಾರಿಯನ್ನು ಈವರೆಗೆ ನೀಡಿಲ್ಲ. ಜಿ.ಟಿ.ದೇವೇಗೌಡ ಅವರು ಪ್ರಸ್ತುತ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿದ್ದಾರೆ. ಇನ್ನು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಜಿ.ಟಿ.ದೇವೇಗೌಡರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಪ್ರಸಕ್ತ ವಿಧಾನಸಭೆಯಲ್ಲಿ ರೇವಣ್ಣ ಅವರು ಎಲ್ಲರಿಗಿಂತ ಹಿರಿಯ ಶಾಸಕರಾಗಿದ್ದಾರೆ.
ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಉತ್ತಮ ಸಂಸದೀಯ ಪಟುವಾಗಿರುವವರು ಶಾಸಕಾಂಗ ಪಕ್ಷದ ನಾಯಕರಾಗಬೇಕು ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪು ನಿರ್ಧಾರದಿಂದ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ - Vishwaprasanna Tirtha Swamiji

ಚನ್ನಪಟ್ಟಣಕ್ಕೆ ಅಭ್ಯರ್ಥಿ ಯಾರು? ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನವು ರದ್ದಾಗಲಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಎದುರಾಗಲಿದೆ. ಕೇಂದ್ರ ಸರ್ಕಾರ ರಚನೆ ಪ್ರಕ್ರಿಯೆ ಮುಗಿದ ಬಳಿಕ ಪಕ್ಷದ ನಾಯಕರು ಸಭೆ ಸೇರಿ ನೂತನ ಶಾಸಕಾಂಗ ಪಕ್ಷದ ನಾಯಕ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಜೆಡಿಸ್‌‍ ಮೂಲಗಳು ತಿಳಿಸಿವೆ.

ತೀವ್ರ ಪೈಪೋಟಿ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್‌ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಈ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಡುವುದೋ ಅಥವಾ ಜೆಡಿಎಸ್ ತನ್ನ ಬಳಿಯೇ ಇಟ್ಟುಕೊಳ್ಳುವುದೋ? ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ಹೆಚ್‌ಡಿಕೆಯಿಂದ ತೆರವಾಗಲಿರುವ ಚನ್ನಪಟ್ಟಣ ಕ್ಷೇತ್ರ: ರಾಜಕೀಯ ಭವಿಷ್ಯಕ್ಕಾಗಿ ಹಲವರ ಪೈಪೋಟಿ - Channapatna By Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.