ETV Bharat / state

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರಕ್ಕೆ ಯಾರಾಗ್ತಾರೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು? - BJP Congress candidates

ಕಾಂಗ್ರೆಸ್​ ಹಾಗೂ ಬಿಜೆಪಿ ಪಾಳಯಗಳಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ಹಾಲಿ ಸಂಸದ ಪ್ರತಾಪ್​ ಸಿಂಹ ಹಾಗೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರುಗಳು ಲೋಕಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಸಾಲಿನಲ್ಲಿ ಪ್ರಬಲವಾಗಿ ಕೇಳಿ ಬರುತ್ತಿವೆ.

Who will be the BJP Congress candidates for Mysore-Kodagu Lok Sabha constituency
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಯಾರಾಗ್ತಾರೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು?
author img

By ETV Bharat Karnataka Team

Published : Mar 9, 2024, 7:20 PM IST

ಮೈಸೂರು: ಪ್ರತಿಷ್ಠಿತ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ ಬಿಜೆಪಿಯ ಹಾಲಿ ಸಂಸದ ಪ್ರತಾಪ್ ಸಿಂಹ ನಾನೇ ಅಭ್ಯರ್ಥಿ ಎಂದು ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್ ಬೇರೆ ಅಭ್ಯರ್ಥಿಯ ಹುಡುಕಾಟದಲ್ಲಿ ಇದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್​ನಿಂದ ಪ್ರಬಲ ಅಭ್ಯರ್ಥಿಗಳು ಇಲ್ಲದೇ ಇರುವುದರಿಂದ ಯಾರು ಕಾಂಗ್ರೆಸ್ ಅಭ್ಯರ್ಥಿ ಆಗುತ್ತಾರೆ ಎನ್ನುವುದು ಈಗ ಪ್ರಶ್ನೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಎಂಬ ಕಾರಣಕ್ಕಾಗಿ ಈ ಬಾರಿ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ ಪ್ರತಿಷ್ಠಿತ ಕ್ಷೇತ್ರವಾಗಿದೆ. ಒಂದೆಡೆ ಕಾಂಗ್ರೆಸ್ ಈ ಬಾರಿ ಈ ಕ್ಷೇತ್ರವನ್ನು ಬಿಜೆಪಿಯಿಂದ ಪಡೆಯುವ ತವಕದಲ್ಲಿದ್ದರೆ, ಮತ್ತೊಂದೆಡೆ ಸಮರ್ಥ ಅಭ್ಯರ್ಥಿಗಳು ಇಲ್ಲದೇ ಇರುವುದು ಕಾಂಗ್ರೆಸ್​ಗೆ ಗೆಲುವಿನ ಚಿಂತೆ ತರಿಸಿದೆ. ಇದಕ್ಕಾಗಿ ಸಮರ್ಥ ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಕಾಂಗ್ರೆಸ್.

ಕಾಂಗ್ರೆಸ್​ನಿಂದ ಸಂಭಾವ್ಯ ಅಭ್ಯರ್ಥಿಗಳು ಯಾರು?: ಮೈಸೂರು - ಕೊಡಗು ಲೋಕಸಭಾ ಕ್ಷೇತ್ರವು ಕಳೆದ ಹತ್ತು ವರ್ಷಗಳಿಂದ ಬಿಜೆಪಿ ವಶದಲ್ಲಿದೆ. ಈ ಬಾರಿ ಕಾಂಗ್ರೆಸ್ ಗೆಲ್ಲಲು ಪ್ಲಾನ್ ಮಾಡಿದ್ದು, ಅದಕ್ಕಾಗಿ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ಇದೆ. ಅದರಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಭ್ಯರ್ಥಿಯಾಗುತ್ತಾರೆ ಎಂದು ಕಳೆದ ಆರು ತಿಂಗಳುಗಳಿಂದ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಯತೀಂದ್ರ ಸಿದ್ದರಾಮಯ್ಯ ನಾನು ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ. ಒಂದು ವೇಳೆ, ಪಕ್ಷ ತೀರ್ಮಾನ ಮಾಡಿದರೆ ಒಪ್ಪಿಕೊಳ್ಳುವುದು ಅನಿವಾರ್ಯ ಎಂದು ಹೇಳಿದ್ದಾರೆ. ಇದರ ಜೊತೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿತ ಡಾ.ಸುಶ್ರುತ ಗೌಡ ಹೆಸರು ಕೂಡ ಕೇಳಿ ಬರುತ್ತಿದೆ. ಅದಲ್ಲದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಜಿ. ವಿಜಯಕುಮಾರ್ ಹಾಗೂ ಸಿದ್ದರಾಮಯ್ಯ ಆಪ್ತ ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್​ ಹೆಸರುಗಳು ಕೇಳಿ ಬರುತ್ತಿದೆ. ಹೀಗಿರುವಾಗ ಕಾಂಗ್ರೆಸ್​ನಿಂದ ಹೊಸ ಅಭ್ಯರ್ಥಿಗಳ ಹೆಸರು ಮುಂಚೂಣಿಗೆ ಬಂದರೂ ಆಶ್ಚರ್ಯ ಇಲ್ಲ.

ಬಿಜೆಪಿ ಅಭ್ಯರ್ಥಿ ಯಾರು ಎಂಬುವುದು ನಿಗೂಢ: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಳೆದ 2 ಬಾರಿಯೂ ಸಂಸದ ಪ್ರತಾಪ್ ಸಿಂಹ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಬಾರಿಯೂ ಮೂರನೇ ಸಲ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಇದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಕೆಲಸ ಶುರು ಮಾಡಿರುವ ಪ್ರತಾಪ್ ಸಿಂಹಗೆ ಮತ್ತೆ ಟಿಕೆಟ್ ನೀಡದಂತೆ ಸ್ಥಳೀಯ ಬಿಜೆಪಿ ನಾಯಕರು ತೆರೆಮರೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಬಿಜೆಪಿಯಿಂದ ಟಿಕೆಟ್ ಪಡೆಯುವ ಪ್ರತಾಪ್ ಸಿಂಹ ಪ್ರಯತ್ನ ಮುಂದುವರೆದಿದ್ದು, ಬಿಜೆಪಿ ಹೈಕಮಾಂಡ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದೆ.

ಈ ಹುಡುಕಾಟದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅಯೋಧ್ಯೆಯ ಬಾಲರಾಮ ಶಿಲ್ಪಿ ಅರುಣ್ ಯೋಗಿರಾಜ್ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ. ಬಿಜೆಪಿಯು ರಾಜಸ್ಥಾನದ ರಾಜಮನೆತನದ ಮೂಲಕ ಯದುವೀರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಯದುವೀರ್ ಅವರಿಗೆ ಇಷ್ಟವಿದೆ. ಆದರೆ, ತಾಯಿ ಪ್ರಮೋದಾದೇವಿ ಒಡೆಯರ್ ಅವರ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ಅರಮನೆ ಮೂಲಗಳು ಈ ಟಿವಿ ಭಾರತ್​ಗೆ ಖಚಿತಪಡಿಸಿವೆ.

ಇನ್ನು ಅಯೋಧ್ಯೆಯಲಿ ನಿರ್ಮಾಣವಾದ ರಾಮಮಂದಿರದ ಬಾಲರಾಮ ಶಿಲ್ಪಿಯಾದ ಅರುಣ್ ಯೋಗಿರಾಜ್ ಅವರನ್ನು ಮೈಸೂರು - ಕೊಡಗು ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಡಗಳು ಇವೆ ಎನ್ನಲಾಗಿದೆ. ಈ ಮಧ್ಯೆ ಅರುಣ್ ಯೋಗಿರಾಜ್ ದೆಹಲಿಗೆ ಹೋಗಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಟಿವಿ ಭಾರತ್ ಪ್ರತಿನಿಧಿ ಜೊತೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದ ಶಿಲ್ಪಿ ಅರುಣ್ ಯೋಗಿರಾಜ್. "ಸದ್ಯ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಕಲೆಯಲ್ಲಿ ಮತ್ತಷ್ಟು ಕೆಲಸ ಮಾಡಬೇಕು ಎಂಬ ಆಸೆ ಇದೆ" ಎಂದು ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯನ್ನು ಸಿಎಂ ಸಿದ್ದರಾಮಯ್ಯ ಫೈನಲ್ ಮಾಡಲಿದ್ದು, ಬಿಜೆಪಿ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರು ಅಭ್ಯರ್ಥಿ ಎನ್ನುವುದಕ್ಕೆ ಕಾಲವೇ ಉತ್ತರ ನೀಡಬೇಕು.

ಇದನ್ನೂ ಓದಿ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ: ಬಿ.ವೈ.ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.