ETV Bharat / state

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ

ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿರುವಾಗಲೇ ಬೈಕ್​ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ.

elephant attack
ದಾಳಿಗೊಳಗಾದ ಬೈಕ್​, ಕಾಡಾನೆ (ಸಂಗ್ರಹ ಚಿತ್ರ-IANS)
author img

By ETV Bharat Karnataka Team

Published : Nov 21, 2024, 8:30 PM IST

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್‌ ಮೇಲೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್‌ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್​ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.

ಕ್ರಮಕ್ಕೆ ಸ್ಥಳೀಯರ ಆಗ್ರಹ: ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್​ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದೇವಸ್ಥಾನದ ಆನೆ ದಾಳಿಗೆ ಮಾವುತ ಸೇರಿ ಇಬ್ಬರು ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.