ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ವಾಕಿಂಗ್ ಜೋರಾಗಿದೆ. ಮೂಡಿಗೆರೆ ತಾಲೂಕಿನ ಸಾಲ್ಮರ ಗ್ರಾಮದ ಸಮೀಪ ನಡುರಸ್ತೆಗೆ ಬಂದು ನಿಂತ ಆನೆಗಳ ಹಿಂಡು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಲಗ್ಗೆ ಇಡುತ್ತಿರುವ ಕಾಡಾನೆಗಳು ಕಾಫಿ, ಬಾಳೆ ಹಾಗು ಅಡಿಕೆ ತೋಟಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಕಳೆದ 20 ದಿನಗಳಿಂದ 18 ಆನೆಗಳಿಂದ ನಿರಂತರ ದಾಳಿ ನಡೆಯುತ್ತಿದೆ. ಹೀಗಾಗಿ ಹೊಸಪುರ, ಕಸ್ಕೆ ಬೈಲು, ಜಿ.ಹೊಸಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ, ವಾಹನ ಸವಾರರು, ತೋಟಕ್ಕೆ ತೆರಳುವ ಕಾರ್ಮಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಕಾಡಾನೆಗಳ ದಾಳಿಯ ಬಗ್ಗೆ ತೋಟದ ಮಾಲೀಕರು ಹಾಗೂ ಕಾರ್ಮಿಕರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ಓದಿ: ಕೋಲಾರ: ಕಾಡಾನೆ ದಾಳಿಯಿಂದ ಗಾಯಗೊಂಡ ವೃದ್ಧೆ ಸಾವು