ETV Bharat / state

ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಮತ್ತೊಂದು ಸಮೀಕ್ಷೆ-ಡಿ.ಕೆ.ಶಿವಕುಮಾರ್

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಆದಷ್ಟು ಬೇಗ ಅಂತಿಮಗೊಳಿಸಬೇಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

d k shivakumar
ಡಿಸಿಎಂ ಡಿಕೆ ಶಿವಕುಮಾರ್
author img

By ETV Bharat Karnataka Team

Published : Feb 14, 2024, 5:52 PM IST

ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಚುನಾವಣಾ ಸಮಿತಿ ಸಭೆಯ ನಂತರ ಅವರು ಮಾತನಾಡಿದರು.

ದೆಹಲಿಯಲ್ಲಿ ಮುಂದಿನ ಸಭೆ: ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶಿಸಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆಯ ಮೂಲಕ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದರು.

ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂಬ ಪ್ರಶ್ನೆಗೆ, ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ.50ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ ಎಂದು ತಿಳಿಸಿದರು.

ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ, ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.

ಎಐಸಿಸಿಗೆ ಕಳುಹಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆಯೇ ಎಂಬ ಬಗ್ಗೆ ಕೇಳಿದಾಗ, ಇದೆಲ್ಲವೂ ಸುಳ್ಳು. ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸಚಿವರು ಸ್ಪರ್ಧಿಸುವ ಕುರಿತು, ರಾಜಕೀಯದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಎಲ್ಲರಿಗೂ ಅವಕಾಶವಿರುತ್ತದೆ. ಪಕ್ಷ ಗೆಲ್ಲುವುದು ಮುಖ್ಯ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ, ಸುದೀರ್ಘ ಚರ್ಚೆ ನಡೆಸಿದ್ದೇವೆ. ಮೊದಲ ಹಂತದ ಚರ್ಚೆ ಮುಗಿದಿದೆ. ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಆಗಿದೆ. ಇನ್ನೂ ಕೆಲವೊಂದಿಷ್ಟು ಸುತ್ತಿನ ಚರ್ಚೆ ಅಗತ್ಯವಿದೆ. ಬಳಿಕ ಎಐಸಿಸಿ ಚುನಾವಣಾ ಸಮಿತಿಗೆ ಕಳುಹಿಸುತ್ತೇವೆ ಎಂದರು.

ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ, ಹರೀಶ್ ಚೌಧರಿ, ಜಿಗ್ನೇಶ್ ಮೇವಾನಿ, ರೋಜಿ ಜಾನ್ ಹಾಗೂ ನಾಲ್ವರು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಚಂದ್ರಶೇಖರ್, ನಾಸೀರ್,​​ ಮಾಕೇನ್‌​ಗೆ ಕಾಂಗ್ರೆಸ್​ ಟಿಕೆಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.