ETV Bharat / state

ಭದ್ರಾ ಯೋಜನೆಗೆ 5,300 ಕೋಟಿ ರೂ ಅನುದಾನ ನೀಡದಿದ್ದರೆ ಕಾನೂನು ಹೋರಾಟ: ಕೇಂದ್ರಕ್ಕೆ ಹೆಚ್​.ಕೆ.ಪಾಟೀಲ್ ಎಚ್ಚರಿಕೆ - Bhadra Project - BHADRA PROJECT

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡದಿದ್ದರೆ ರಾಜಕೀಯ ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ತಿಳಿಸಿದ್ದಾರೆ.

ಹೆಚ್​.ಕೆ.ಪಾಟೀಲ್
ಹೆಚ್​.ಕೆ.ಪಾಟೀಲ್ (ETV Bharat)
author img

By ETV Bharat Karnataka Team

Published : Sep 10, 2024, 5:42 PM IST

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಮೊದಲೇ ಘೋಷಿಸಿದಂತೆ 5,300 ಕೋಟಿ ರೂ. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಆದರೆ, ಸೆ.5 ರಂದು ರಾಜ್ಯಕ್ಕೆ ಬರೆದಿರುವ ಪತ್ರದಲ್ಲಿ ಅನುದಾನ ನೀಡುವ ಕುರಿತು ಮೀನಾಮೀಷ ಎಣಿಸುವ ರೀತಿಯಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಯೋಜನೆಗೆ 5,300 ಕೋಟಿ ರೂ. ನೀಡಲು ಹಿಂದೇಟು ಹಾಕಿದರೆ, ರಾಜಕೀಯ ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರದ ನಡೆಯನ್ನು ಟೀಕಿಸಿದರು.

ಕೇಂದ್ರದ ನೀತಿ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ: ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಯನ್ನು ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿ ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಸಭೆಯಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿವೆ. ಇದು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆಗಳನ್ನು ಪಡೆದಿದೆ ಎಂದು ತಿಳಿಸಿದೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 5,300 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ರಾಜ್ಯಕ್ಕೆ ಪತ್ರ ಬರೆದು ಯೋಜನೆಯ ಭೌಗೋಳಿಕ, ಯೋಜನೆಗಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನ ಮತ್ತು ಕೇಂದ್ರದ ನಿಧಿಯಲ್ಲಿರುವ ಅನುದಾನಕ್ಕನುಗುಣವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪತ್ರದಲ್ಲಿನ ಅಂಶಗಳನ್ನು ಗಮನಿಸಿದರೆ ಅನುದಾನದಲ್ಲಿ ಬಹುತೇಕ ಕಡಿತ ಅಥವಾ ತಿರಸ್ಕರಿಸುವ ಅನುಮಾನ ಮೂಡಿದೆ ಎಂದು ಕಿಡಿಕಾರಿದರು.

ಮಹತ್ವದ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯ: ರಾಜ್ಯ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಅಲ್ಲದೇ, ರಾಜಕೀಯ ಒತ್ತಡ ಹೇರಲು ಆಲೋಚನೆ ನಡೆಸಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಮಹದಾಯಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿಯೇ ಮಹದಾಯಿ ಜಲ ವಿವಾದ ಕುರಿತು ನ್ಯಾಯಮಂಡಳಿ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ನ್ಯಾಯಮಂಡಳಿ ಅವಶ್ಯಕತೆ ಇಲ್ಲದಿದ್ದರೂ ಕಾಂಗ್ರೆಸ್‌ ನ್ಯಾಯಮಂಡಳಿ ರಚಿಸಿತು ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿರುವುದು ಅವರ ನಿರ್ಲಕ್ಷವನ್ನು ತೋರುತ್ತದೆ. ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಪಟ್ಟಿಯಲ್ಲಿನ ದರ್ಶನ್ ವಿರುದ್ಧದ ರಹಸ್ಯ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ - Renukaswamy Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.