ETV Bharat / state

ರೈತರಿಗೆ ಗುಣಮಟ್ಟದ ಸಮರ್ಪಕ ವಿದ್ಯುತ್ ಪೂರೈಕೆ: ಸೈಯದ್ ಅಜ್ಜಂಪೀರ್ ಖಾದ್ರಿ

ರೈತರಿಗೆ ಗುಣಮಟ್ಟದ ಸಮರ್ಪಕ ವಿದ್ಯುತ್​ ಪೂರೈಕೆ ಮಾಡಲಾಗುವುದು ಎಂದು ಹೆಸ್ಕಾಂ ನೂತನ ಅಧ್ಯಕ್ಷ ಸೈಯದ್​ ಅಜ್ಜಂಪೀರ್​ ಖಾದ್ರಿ ಭರವಸೆ ನೀಡಿದ್ದಾರೆ.

syed-ajjampir-khadri
ಸೈಯದ್ ಅಜ್ಜಂಪೀರ್ ಖಾದ್ರಿ (ETV Bharat)
author img

By ETV Bharat Karnataka Team

Published : 2 hours ago

Updated : 47 minutes ago

ಹುಬ್ಬಳ್ಳಿ: ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲಾಗುವುದು. ರೈತರಿಗೆ ಗುಣಮಟ್ಟದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ(ಹೆಸ್ಕಾಂ) ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ ಹೇಳಿದರು.

ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ಉತ್ತರ ಕರ್ನಾಟಕ ಭಾಗದ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿ ಒಟ್ಟು 7 ಜಿಲ್ಲೆಗಳನ್ನು ಒಳಗೊಂಡಿದೆ. ಒಟ್ಟು 62 ಲಕ್ಷ ಗ್ರಾಹಕರಿದ್ದು, 10.49 ಲಕ್ಷ ನೀರಾವರಿ ಪಂಪ್‌ಸೆಟ್​ಗಳಿವೆ. 33.54 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಒಟ್ಟು 467 ವಿವಿಧ ವಿದ್ಯುತ್ ಉಪಕೇಂದ್ರಗಳಿದ್ದು, 4,329 11 ಕೆವಿ ಫೀಡರ್‌ಗಳು ಹಾಗೂ 3.18 ಲಕ್ಷ ವಿತರಣಾ ಪರಿವರ್ತಕಗಳಿವೆ ಎಂದು ಮಾಹಿತಿ ನೀಡಿದರು.

ಹೆಸ್ಕಾಂ ನೂತನ ಅಧ್ಯಕ್ಷ ಸೈಯದ್​ ಅಜ್ಜಂಪೀರ್​ ಖಾದ್ರಿ ಮಾತನಾಡಿದ್ದಾರೆ (ETV Bharat)

ಒಟ್ಟು 3,937 ಗ್ರಾಹಕರು ಸೌರ ಮೇಲ್ಛಾವಣಿ ಯೋಜನೆಯಡಿ ಸೌರ ವಿದ್ಯುತ್ ಅಳವಡಿಸಿಕೊಂಡು, 89.93 ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದಿಸುತ್ತಿದ್ದಾರೆ. ಈಗ ಪಿಎಮ್-ಸೂರ್ಯ ಘರ್ ಯೋಜನೆ ಜಾರಿಯಲ್ಲಿದ್ದು, ಗ್ರಾಹಕರು ಅದರ ಪ್ರಯೋಜನ ಪಡೆಯಬೇಕು. ನೀರಾವರಿ ಪಂಪ್​ಸೆಟ್​ಗಳಿಗೆ ಸೌರ ವಿದ್ಯುತ್ ಒದಗಿಸುವ ಕುಸುಮ್-ಬಿ ಯೋಜನೆಯಡಿ 748 ಗ್ರಾಹಕರು ನೋಂದಾಯಿಸಿದ್ದು, ಅದರಲ್ಲಿ 13 ನೀರಾವರಿ ಪಂಪ್‌ಸೆಟ್​ಗಳು ಕಾರ್ಯಾರಂಭಗೊಂಡಿವೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ನೀರಾವರಿ ಪಂಪ್‌ಸೆಟ್​ಗಳಿಗೆ ಹೆಚ್ಚಿನ ವಿದ್ಯುತ್ ಭಾರವಿರುವ ಉಪಕೇಂದ್ರಗಳ ಸಮೀಪ ಪಿಎಮ್ ಕುಸುಮ್-ಸಿ ಯೋಜನೆ ಅಡಿಯಲ್ಲಿ 415.62 ಮೆಗಾ ವ್ಯಾಟ್ ಸೌರ ವಿದ್ಯುತ್‌ ಉತ್ಪಾದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

ಹೆಸ್ಕಾಂನಲ್ಲಿ ಪ್ರತೀ ತಿಂಗಳು ಸುಮಾರು 1,595.51 ಮಿಲಿಯನ್ ಯುನಿಟ್‌ಗಳ ವಿದ್ಯುತ್ ಬಳಕೆಯಾಗುತ್ತಿದ್ದು, ಪ್ರತೀ ತಿಂಗಳು ಸರಾಸರಿ ರೂ. 1,016 ಕೋಟಿ ಕಂದಾಯ ಬೇಡಿಕೆ ಇದೆ. ಮುಂದೆ ಬರುವ ಬೇಸಿಗೆ ಕಾಲದಲ್ಲಿ ವಿದ್ಯುತ್ ಬೇಡಿಕೆಯು ಹೆಚ್ಚಾಗುವ ನಿರೀಕ್ಷೆ ಇದ್ದು, ಅದನ್ನು ಪೂರೈಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ನಿಗಮದ ಕಚೇರಿಯಲ್ಲಿ ಗ್ರಾಹಕರ ಸೇವಾ ಕೇಂದ್ರವು 3 ಶಿಪ್ಟ್​ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು 1912 ಹಾಗೂ 18004251033 ಮತ್ತು 18004254754 ಟೋಲ್ ಫ್ರೀ ನಂಬರ್‌ಗಳಿಗೆ ವಿದ್ಯುತ್ ಸಮಸ್ಯೆಗಳನ್ನು ಕರೆಮಾಡಿ ತಿಳಿಸಿದಲ್ಲಿ ತಕ್ಷಣ ಪರಿಹರಿಸಲು ಕ್ರಮ ವಹಿಸಲಾಗುತ್ತದೆ. ರೈತರ ನೀರಾವರಿ ಪಂಪ್‌ಸೆಟ್​ಗಳಿಗೆ ವಿದ್ಯುತ್ ಸರಬರಾಜು ಮಾಡುವ ಪರಿವರ್ತಕಗಳು (TC) ವಿಫಲವಾಗಿದ್ದಲ್ಲಿ ಅವುಗಳನ್ನು ತ್ವರಿತವಾಗಿ ಬದಲಾಯಿಸಲು ಕ್ರಮ ವಹಿಸುತ್ತೇನೆ. ವಿದ್ಯುತ್ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ವಿದ್ಯುತ್ ಅಪಘಾತ ಪ್ರಕರಣಗಳಲ್ಲಿ ಪರಿಹಾರಗಳನ್ನು ತ್ವರಿತವಾಗಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆಯು ಬಡವರಿಗೆ ಆಸರೆಯಾಗಿದೆ. ಪ್ರತೀ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಲಾಗುವುದು. ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಮುಂದಾಗುತ್ತೇನೆ. ಈಗಾಗಲೇ ಹೆಸ್ಕಾಂನಲ್ಲಿ 560 ಲೈನ್‌ಮೆನ್ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ನನಗೆ ನೀಡಿರುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಮುಂದಿನ ದಿನಗಳಲ್ಲಿ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡು, ಸಮಸ್ಯೆಗಳನ್ನು ಪರಿಹರಿಸಲಾಗುವುದು. ವಿದ್ಯುತ್ ಬಾಕಿ ಬಿಲ್ ಇರುವುದು ಗಮನಕ್ಕೆ ಬಂದಿದ್ದು, ತ್ವರಿತಗತಿಯಲ್ಲಿ ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಹಣಕಾಸು ವಿಭಾಗದ ನಿರ್ದೇಶಕ ಪ್ರಕಾಶ ಪಾಟೀಲ, ತಾಂತ್ರಿಕ ನಿರ್ದೇಶಕ ಎಸ್.ಜಗದೀಶ, ಆರ್ಥಿಕ ಸಲಹೆಗಾರರಾದ ರುದ್ರೇಶ್ ಸಬರದ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ: ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ್ ಖಾದ್ರಿ ಅಧಿಕಾರ ಸ್ವೀಕಾರ

Last Updated : 47 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.