ETV Bharat / state

ವಿಕಲಚೇತನರ ಶ್ರೇಯೋಭಿವೃದ್ಧಿಗೆ 44 ಕೋಟಿ ರೂಪಾಯಿ ಮಂಜೂರು ಮಾಡುವೆ: ಸಿಎಂ ಸಿದ್ದರಾಮಯ್ಯ

ವಿಕಲಚೇತನರ ಶ್ರೇಯೋಭಿವೃದ್ಧಿಗೆ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ ಮಂಜೂರು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

CM SIDDARAMAIAH
ವಿಶ್ವ ವಿಕಲಚೇತನರ ದಿನಾಚರಣೆ (ETV Bharat)
author img

By ETV Bharat Karnataka Team

Published : 18 hours ago

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ. ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ ಮಂಜೂರು ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರನ್ನು ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನ ಎಲ್ಲರಿಗೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶ ಕಲ್ಪಿಸಿದೆ. ವಿಕಲಚೇತನರು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪ್ಯಾರಾಒಲಿಂಪಿಕ್ಸ್​ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ ಎಂದರು.

disabled-people
ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿಕಲಚೇತನರು (ETV Bharat)

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತೀ ತಿಂಗಳು 1,000 ರೂ.ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದ್ದು, ಪ್ರಸಕ್ತ ಸಾಲಿನಿಂದಲೇ ನೀಡಲಾಗುವುದು. ಈ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ 2 ಕೋಟಿ ರೂ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ ಎಂದು ಸಿಎಂ ಹೇಳಿದರು.

ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ 50,000 ರೂ.ಯಿಂದ ಪರಿಷ್ಕರಿಸಿ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ. 5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

CM SIddaramaiah
ವಿಕಲಚೇತನರಿಗೆ ಹಸ್ತಲಾಘವ ಮಾಡಿದ ಸಿಎಂ ಸಿದ್ದರಾಮಯ್ಯ (ETV Bharat)

ವಿಕಲಚೇತನರ ಮಾಸಾಶನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಸಾಮಾಜಿಕ ಸಬಲೀಕರಣಕ್ಕಾಗಿ ಶೇ 40 ರಿಂದ ಶೇ 74 ವಿಕಲಚೇತನರಿಗೆ 800 ರೂ ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1400 ರೂ ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ 2000 ರೂ ಪ್ರತೀ ತಿಂಗಳು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತ ಹೆಚ್ಚಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆಯಲು ಕ್ರಮ ಕೈಗೊಳ್ಳಲಿದೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, "ವಿಕಲಚೇತನತೆ ವರವೂ ಅಲ್ಲ, ಶಾಪವೂ ಅಲ್ಲ. ದೇವರು ನಿಮಗೆ ಜೀವನದಲ್ಲಿ ನೀಡಿರುವ ಪರೀಕ್ಷೆ. ಇದನ್ನು ಮೆಟ್ಟಿನಿಂತು ಅನೇಕರು ಸಾಧನೆ ಮಾಡಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ನೀವೂ ಅನುಸರಿಸಿ'' ಎಂದು ಹೇಳಿದರು.

''ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿಮ್ಮನ್ನು ದೇವರ ಮಕ್ಕಳು ಎಂದು ಕರೆದರು. ನಿಮಗೆ ಗಣಪತಿ ಸ್ಫೂರ್ತಿ. ಆನೆ ತಲೆ, ಮುರಿದ ಒಂದು ದಂತವಿದ್ದರೂ ಆತನನ್ನು ವಿಘ್ನ ನಿವಾರಿಸುವ ನಾಯಕ ವಿನಾಯಕ ಎಂದು ಪೂಜಿಸುತ್ತೇವೆ. ಹೀಗಾಗಿ, ನಿಮ್ಮಿಂದ ಏನೂ ಮಾಡಲು ಆಗುವುದಿಲ್ಲ ಎಂದು ಭಾವಿಸಬೇಡಿ. ನಿಮ್ಮಲ್ಲಿ ಮನೋಬಲ ಹೆಚ್ಚಾಗಿರಬೇಕು. ನಿಮ್ಮಲ್ಲಿ ಎಲ್ಲಾ ರೀತಿಯ ಸಾಧನೆ ಮಾಡುವ ಶಕ್ತಿ ಇದೆ. ನಿಮ್ಮ ಸಾಧನೆಯಲ್ಲಿ ಯಾವುದೇ ರೀತಿಯ ರಾಜಿ ಬೇಡ. ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿ ಅವರು ಸೇರಿದಂತೆ ಅನೇಕ ಸಾಧಕರು ನಮಗೆ ಸ್ಫೂರ್ತಿಯಾಗಿ ನಿಂತಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮಗೆ ನಿರೀಕ್ಷಿತ ಮಟ್ಟದಲ್ಲಿ ಪದಕ ಬರಲಿಲ್ಲ. ಆದರೆ ಪ್ಯಾರಾಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 29 ಪದಕ ಬಂದಿದೆ. ಇವರೆಲ್ಲರೂ ತಮಗಿರುವ ಅಡೆತಡೆ ಮರೆತು ಸಾಧನೆ ಮಾಡಿ ಇತಿಹಾಸ ಪುಟ ಸೇರಿದ್ದಾರೆ" ಎಂದರು.

ಇದನ್ನೂ ಓದಿ: ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.