ETV Bharat / state

ಹಿರಿಯ ನಾಗರಿಕರ ಮಾಸಾಶನ ಹೆಚ್ಚಳದ ಬಗ್ಗೆ ಪರಿಶೀಲಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ - World Senior Citizens Day

ಸದ್ಯ ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Review and conclusion about the increase in the pension of senior citizens: CM Siddaramaiah
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ (ETV Bharat)
author img

By ETV Bharat Karnataka Team

Published : Oct 1, 2024, 4:32 PM IST

ಬೆಂಗಳೂರು: ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಫೂರ್ತಿ. ಹಿರಿಯರ ಬದುಕನ್ನು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಲಾಗಿದ್ದ 'ವಿಶ್ವ ಹಿರಿಯ ನಾಗರಿಕರ ದಿನಾಚರಣೆ-202' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, 'ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ' ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.

Review and conclusion about the increase in the pension of senior citizens: CM Siddaramaiah
ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಮಾಸಾಶನ ಹೆಚ್ಚಳದ ಬಗ್ಗೆ ಪರಿಶೀಲಿಸಿ ತೀರ್ಮಾನ: 2011ರ ಜನಗಣತಿ ಪ್ರಕಾರ, ರಾಜ್ಯದಲ್ಲಿ ಸುಮಾರು 57.91ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಇತ್ತೀಚಿನ ದಿನಮಾನದಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲಿಸಿ, ತಂದೆ-ತಾಯಿಯನ್ನು ಪೋಷಿಸಲು ಸಾಧ್ಯವಾಗದೆ ವೃದ್ಧಾಶ್ರಮಗಳಿಗೆ ಸೇರಿಸುತ್ತಾರೆ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಿರಿಯ ನಾಗರಿಕರ ನೆಮ್ಮದಿಗೆ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ತಾಲ್ಲೂಕು ಕೇಂದ್ರಗಳಲ್ಲಿ ಡಯಾಲಿಸಿಸ್ ವ್ಯವಸ್ಥೆಯನ್ನು ಮಾಡಿಕೊಡಲಾಗಿದೆ. ಸಮಸಮಾಜ ನಿರ್ಮಿಸುವ ನಮ್ಮ ಗುರಿಯನ್ನು ಈಡೇರಿಸಲು ಆರ್ಥಿಕವಾಗಿ, ಸಾಮಾಜಿಕವಾಗಿ ಆಶಕ್ತರಾಗಿರುವ ಜನರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹಿರಿಯ ನಾಗರಿಕರು, ವಿಕಲಚೇತನರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಯುವಜನರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

Review and conclusion about the increase in the pension of senior citizens: CM Siddaramaiah
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ (ETV Bharat)

ಸಾಧಕ ಹಿರಿಯ ನಾಗರಿಕರಿಗೆ ಪ್ರಶಸ್ತಿ: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ 6 ಮಂದಿ ಹಾಗೂ ಒಂದು ಸೇವಾ ಸಂಸ್ಥೆಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. 10 ಮಹಿಳೆಯರಿಗೆ ಪೌಷ್ಠಿಕಾಂಶ ಕಿಟ್‌ ಅನ್ನು ಮುಖ್ಯಮಂತ್ರಿ ವಿತರಿಸಿದರು.

ಇದನ್ನೂ ಓದಿ: 70 ವರ್ಷ ಮೇಲ್ಪಟ್ಟವರಿಗೂ ₹5 ಲಕ್ಷದ ಆಯುಷ್ಮಾನ್ ಭಾರತ್ ವಿಮೆ: ಕೇಂದ್ರದ ಮಹತ್ವದ ನಿರ್ಧಾರ - Ayushman Bharat Yojana

ETV Bharat Logo

Copyright © 2024 Ushodaya Enterprises Pvt. Ltd., All Rights Reserved.